ಉಳ್ಳಾಲ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತದ್ದ ಕೇರಳದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ತಲಪಾಡಿ ತಚ್ಚಾಣಿ ಬಳಿ ಬಂಧಿಸಿದ್ದು ಆವರಿಂದ ಎಂಡಿಎಂಎ ಹಾಗೂ ಸಾಗಾಟಕ್ಕೆ ಬಳಸಿದ್ದ ಮೊಬೈಲ್ ಹಾಗೂ ರೂ. 50,000 ಬೆಲೆಬಾಳುವ ಎಫ್ ಝೆಡ್ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಪಿಎಸ್‌ಐ ಧನರಾಜ್ ನೇತೃತ್ವದಲ್ಲಿ ಉಳ್ಳಾಲ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ತ್ರಿಶ್ಶೂರ್‌ನ ವಡಕಂಚೇರಿ ಗ್ರಾಮದ ಶೇಕ್ ತನ್ವೀರ್ (20) ಮತ್ತು ಕೋಯಿಕ್ಕೋಡ್ ಅಂಜೇರಿ ವಡಗೆರೆ ನಿವಾಸಿ ಸಾಯಿಕೃಷ್ಣ (19) ಎಂದು ಗುರುತಿಸಲಾಗಿದೆ.
Discussion about this post