ಕಾರ್ಕಳ, ಅ.17: ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಲ್ಲೊಟ್ಟೆ ಎಂಬಲ್ಲಿ ನಡೆದಿದೆ. ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿ.
ಕಾರ್ಕಳ ತಾಲೂಕಿನ ಕಲ್ಲೊಟ್ಟೆಯ ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿ. ಸೋಮವಾರ ಮನೆಯಲ್ಲೇ ಇದ್ದ ಚಾರ್ವಿ ಸಂಜೆ ವೇಳೆಗೆ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದ ಚಾರ್ವಿ ಕೆಲವು ತಿಂಗಳಿನಿಂದ ಮನೆಯಿಂದಲೇ ಕೆಲಸ ಮಾಡುತ್ತಿದ್ದಳು.
ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discussion about this post