ಮಂಗಳೂರು: ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ವಿಭಾಗದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಮಂಗಳೂರಿನ ಶಕ್ತಿನಗರದ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸರಿಸುಮಾರು 30 ವರ್ಷ ಸೇವೆ ಸಲ್ಲಿಸುತ್ತಿರುವ ಕೃಷ್ಣಕುಮಾರ್ ಅವರನ್ನು ಅವರ ಮನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಮತ್ತು ಮಂಗಳೂರು ನಗರ ಅಸಂಘಟಿತ ಕಾಂಗ್ರೆಸ್ ಸಮಿತಿ ಇದರ ಆಶ್ರಯದಲ್ಲಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಅಬ್ಬಾಸ್ ಆಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಸಾಲಿಯಾನ್, ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಪ್ರಶಾಂತ್ ಅಮೀನ್, ರಾಜೇಶ್ ಕದ್ರಿ ,ಮೋಹನ್ ಗಣಪಯ್ಯ ಹಾಗೂ ಇತರರು ಪಾಲ್ಗೊಂಡಿದ್ದರು.