ಮಂಗಳೂರು: “ವಿಧಾನ ಪರಿಷತ್‌ನಲ್ಲಿ ಸಹಕಾರಿ ಕ್ಷೇತ್ರಕ್ಕೆ ಒಂದು ಅವಕಾಶವನ್ನು ನೀಡುವ ನಿಟ್ಟಿನಲ್ಲಿ ನನ್ನನ್ನು ಬೆಂಬಲಿಸಿ ಎಂದು ಮತದಾರರಲ್ಲಿ, ಎಲ್ಲ ರಾಜಕೀಯ ಪಕ್ಷಗಳಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ’ ಎಂದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಹಕಾರಿ ನೇತಾರ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.
ನಗರದಲ್ಲಿ ಮಂಗಳವಾರ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಚುನಾವಣ ಪ್ರಚಾರ ಕಚೇರಿ ಉದ್ಘಾಟನ ಸಮಾರಂಭದಲ್ಲಿ ಮಾತನಾಡಿದ ಅವರು, ಸಹಕಾರಿ ಕ್ಷೇತ್ರದ ಮೂಲಕ ಗ್ರಾಮೀಣ ಜನರ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ. ನವೋದಯ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಸ್ವಾವಲಂಬಿ, ಸ್ವಾಭಿಮಾನಿ ಬದುಕು ಕಟ್ಟಿ ಕೊಡುವ ಕಾರ್ಯ ಆಗಿದೆ. ಮುಂದಿನ ವಿಧಾನ ಪರಿಷತ್ ಚುನಾವಣೆಯಲ್ಲೂ ಇದೇ ರೀತಿ ನನ್ನನ್ನು ಬೆಂಬಲಿಸಿ ಎಂದವರು ಹೇಳಿದರು.
ಕಚೇರಿಯ ಉದ್ಘಾಟನೆ ಸಮಾರಂಭದಲ್ಲಿ ಪುರೋಹಿತ ರಮೇಶ್ ಭಟ್, ಫಾ| ರವಿ ಸಂತೋಷ್ ಕಾಮತ್, ಧರ್ಮಗುರು ಮೊಹಮ್ಮದ್ ಕಾಮಿಲ್ ಸಖಾಫಿ ಭಾಗವಹಿಸಿ ಶುಭ ಹಾರೈಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಮಾತನಾಡಿ, ಸಮಾಜದಲ್ಲಿ ಅಶಕ್ತರು, ಬಡವರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಡಾ| ಎಂ.ಎನ್. ಆರ್. ಅವರು ಒಕ್ಕೂಟದ ಸಮಾಜ ಸೇವಾ ಕಾರ್ಯಗಳಿಗೆ ಸದಾ ನೆರವು ನೀಡುತ್ತ ಬಂದಿದ್ದಾರೆ ಎಂದರು.
ಕಂಬಳ ಆಕಾಡೆಮಿಯ ಅಧ್ಯಕ್ಷ ಗುಣಪಾಲ ಕಡಂಬ ಅವರು ಮಾತನಾಡಿ, ಸಹಕಾರಿ ಕ್ಷೇತ್ರಕ್ಕೆ ವಿಧಾನ ಪರಿಷತ್‌ನಲ್ಲಿ ಪ್ರಾತಿನಿಧ್ಯ ಸಿಗುವ ನಿಟ್ಟಿನಲ್ಲಿ ಡಾ| ಎಂ.ಎನ್. ಆರ್. ಅವರನ್ನು ಬೆಂಬಲಿಸಿ ಎಂದರು. ಉಡುಪಿ ಜಿ. ಪಂ. ಮಾಜಿ ಅಧ್ಯಕ್ಷ ರಾಜು ಪೂಜಾರಿ ಅವರು ಮಾತನಾಡಿ, ಚುನಾವಣೆಯಲ್ಲಿ ಗೆಲ್ಲುವ ಮೂಲಕ ಡಾ| ಎಂ. ಎನ್. ಆರ್. ಅವರು ಪಂಚಾಯತ್‌ರಾಜ್ ವ್ಯವಸ್ಥೆ ಹಾಗೂ ನಗರಾಡಳಿತ ಸಂಸ್ಥೆಗಳಿಗೆ ಶಕ್ತಿ ತುಂಬಲಿದ್ದಾರೆ ಎಂಬ ವಿಶ್ವಾಸ ಹೊಂದಿದ್ದೇವೆ ಎಂದರು.
Discover more from Coastal Times Kannada
Subscribe to get the latest posts sent to your email.
Discussion about this post