• About us
  • Contact us
  • Disclaimer
Thursday, July 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದವರು ಅಂಚೇ ಕಚೇರಿಯಲ್ಲಿ ಶುಲ್ಕ ಪಾವತಿಸಬಹುದು

Coastal Times by Coastal Times
November 17, 2022
in ಕರಾವಳಿ
ಮಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದವರು ಅಂಚೇ ಕಚೇರಿಯಲ್ಲಿ ಶುಲ್ಕ ಪಾವತಿಸಬಹುದು
55
VIEWS
WhatsappTelegramShare on FacebookShare on Twitter

ಮಂಗಳೂರು, : ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದವರು ಇನ್ಮುಂದೆ ರಾಜ್ಯದ ಯಾವುದೇ ಅಂಚೆ ಕಚೇರಿಯಲ್ಲಿ ಪೆನಾಲ್ಟಿ ಮೊತ್ತವನ್ನು ಪಾವತಿ ಮಾಡಬಹುದಾಗಿದೆ. ಮಂಗಳೂರು ಸಿಟಿ ಪೊಲೀಸ್‌ ಮತ್ತು ಮಂಗಳೂರು ಅಂಚೆ ಕಚೇರಿ ವಿಭಾಗ ಜಂಟಿಯಾಗಿ ಈ ಹೊಸ ಕಾರ್ಯಕ್ಕೆ ಮುಂದಾಗಿವೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಉಲ್ಲಂಘನೆಯ ದಂಡವನ್ನು ಅಂಚೆ ಕಚೇರಿಗಳಲ್ಲಿ ಪಾವತಿ ಮಾಡುವ ಸೌಲಭ್ಯವನ್ನು ಚಾಲನೆ ನೀಡಲಾಗಿದೆ. ಸೋಮವಾರ ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಕಚೇರಿಗಳ ಅಧೀಕ್ಷಕರಾದ ಶ್ರೀಹರ್ಷ ಎನ್, ಹಾಗೂ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಈ ನೂತನ ಸೇವೆಯ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಚಾಲನೆ

ಎರಡು ಇಲಾಖೆಗಳ ನೂತನ ಸೇವೆಯ ಆರಂಭದಿಂದ ಸಂಚಾರ ನಿಯಮವನ್ನು ಉಲ್ಲಂಘನೆ ಮಾಡಿದ ವಾಹನ ಸವಾರರು ತಮ್ಮ ವಾಹವನ್ನು ಬಿಡುಗಡೆ ಮಾಡಿಸಿಕೊಳ್ಳಲು ದಂಡ ಕಟ್ಟಲು ಕೋರ್ಟ್‌ಗೆ ಹೋಗಬೇಕಾದ ಅನಿವಾರ್ಯತೆ ತಪ್ಪಿದಂತಾಗಿದೆ. ಮಂಗಳೂರು ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದವರು ದಕ್ಷಿಣ ಕನ್ನಡ ಜಿಲ್ಲೆಯ 126, ಉಡುಪಿ 62 ಅಂಚೆ ಕಚೇರಿ ಸೇರಿದಂತೆ ರಾಜ್ಯದ 1,702 ಅಂಚೆ ಕಚೇರಿಗಳಲ್ಲಿ ನಗದಯ ಅಥವಾ ಸ್ಕ್ಯಾನ್ ಮಾಡುವ ಮೂಲಕ ದಂಡದ ಶುಲ್ಕವನ್ನು ಪಾವತಿಸಬಹುದಾಗಿದೆ.

ನಗದು ಅಥವಾ ಸ್ಕ್ಯಾನ್‌ ಮೂಲಕ ದಂಡ ಕಟ್ಟಬಹುದು ; ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಯಾವುದೇ ಅಂಚೆ ಕಚೇರಿಗಳಲ್ಲಿ ದಂಡದ ಮೊತ್ತವನ್ನು ಪಾವತಿ ಮಾಡಬಹುದಾದ ಸೇವೆಗೆ ಚಾಲನೆ ನೀಡಿದ್ದೇವೆ. ಈ ವ್ಯವಸ್ಥೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ವಾಹನ ಸವಾರರಿಗೆ ದಂಡವನ್ನು ಪಾವತಿ ಮಾಡಲು ಸುಲಭ ಮಾಡಿಕೊಡಲಿದೆ. ದಂಡದ ಮೊತ್ತವನ್ನು ಅಂಚೆ ಕಚೇರಿಯಲ್ಲಿ ಕೌಂಟರ್‌ಗಳಲ್ಲಿ ನೇರವಾಗಿ ನಗದಿನ ಮೂಲಕ ಅಥವಾ ಕ್ಯುಆರ್‌ ಕೋಡ್‌ ಸ್ಕ್ಯಾನ್ ಮಾಡಿ ಪಾವತಿಸ ಬಹುದು ಎಂದು ಪೊಲೀಸ್‌ ಕಮೀಷನರ್ ಶಶಿ ಕುಮಾರ್ ತಿಳಿಸಿದ್ದಾರೆ.

ಮುಖ್ಯ ಅಥವಾ ಉಪ ಅಂಚೆ ಕಚೇರಿಯಲ್ಲೂ ಪಾವತಿಗೆ ಅವಕಾಶ : ಮಂಗಳೂರು ವಿಭಾಗ ಹಿರಿಯ ಅಂಚೆ ಅಧೀಕ್ಷಕ ಶ್ರೀ ಹರ್ಷ ಎನ್. ಮಾತನಾಡಿ, ಪ್ರಸ್ತುತ ಸಂಚಾರ ನಿಯಮ ಉಲ್ಲಂಘನೆ ದಂಡ ಶುಲ್ಕವನ್ನು ಪಾವತಿಸಲು ಕೇವಲ ಆನ್‌ಲೈನ್, ನಾಲ್ಕು ಸಂಚಾರಿ ಪೊಲೀಸ್ ಠಾಣೆ ಹಾಗೂ ನಾಲ್ಕು ಮಂಗಳೂರು ವನ್ ಕೇಂದ್ರಗಳಲ್ಲಿ ಮೂಲಕ ಸಲ್ಲಿಸಲು ಅವಕಾಶವಿತ್ತು. ಆದರೆ ಇನ್ನು ಮುಂದೆ ಕರ್ನಾಟಕದ ಎಲ್ಲಾ ಕೇಂದ್ರ ಅಂಚೆ ಕಛೇರಿ ಮತ್ತು ಉಪ ಅಂಚೆ ಕಚೇರಿಗಳಿಗೂ ವಿಸ್ತರಿಸಲಾಗುವುದು ಎಂದು ಮಾಹಿತಿ ನೀಡಿದರು.

7 ದಿನಗಳೊಳಗೆ ಹತ್ತಿರ ಅಂಚೆ ಕಚೇರಿಯಲ್ಲಿ ಪಾವತಿಗೆ ಅವಕಾಶ : ಹೆಲ್ಮೆಟ್‌ ಧರಿಸದ, ಸೀಟ್‌ ಬೆಲ್ಟ್‌ ಹಾಕದ, ತ್ರಿಬಲ್ ರೈಡಿಂಗ್ ಹಾಗೂ ಧೋಷಪೂರಿತ ನಂಬರ್‌ ಪ್ಲೇಟ್‌ ಹಾಕಿಕೊಂಡು ವಾಹನ ಚಲಾಯಿಸುವವರನ್ನು ನಿಯಂತ್ರಿಸಲು ನಗರದಲ್ಲಿ ಆರಂಭಿಸಿರುವ ಆಟೋಮ್ಯಾಷನ್‌ ಸೆಂಟರ್‌ನಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ಮಾಹಿತಿ ತಕ್ಷಣಕ್ಕೆ ಲಭ್ಯವಾಗುತ್ತದೆ.

ನಿಯಮ ಉಲ್ಲಂಘನೆ ಮಾಡಿದ ವಾಹನಗಳ ಮಾಲೀಕರಿಗೆ ನೋಟಿಸ್‌ ಕಳುಹಿಸಲಾಗುತ್ತದೆ. ನೋಟಿಸ್ ಜಾರಿಯಾದ 7 ದಿನಗಳಲ್ಲಿ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗುತ್ತದೆ. ಅವರು ಮಂಗಳೂರಿಗೆ ಬಂದು ದಂಡ ಪಾವತಿಸಲು ತುಂಬಾ ಕಷ್ಟವಾಗುವುದರಿಂದ ಹತ್ತಿರದ ಅಂಚೆ ಕಚೇರಿಯಲ್ಲಿ ದಂಡವನ್ನು ಪಾವತಿ ಮಾಡಬಹುದಾಗಿದೆ ಎಂದು ಶ್ರೀಹರ್ಷ ತಿಳಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪುರೋಹಿತನಂತೆ ವೇಷ ಧರಿಸಿ, ಆಂಧ್ರದ ಟಿಡಿಪಿ ಮುಖಂಡ, ಮಾಜಿ ಸಂಸದ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿ!

Next Post

2009ರ ಜೋಡಿ ಕೊಲೆ ಪ್ರಕರಣ: ಭೂಗತ ಪಾತಕಿ ಛೋಟಾ ರಾಜನ್ ಸೇರಿ ನಾಲ್ವರು ಖುಲಾಸೆ

Related Posts

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
188
ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ
ಕರಾವಳಿ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
29
Next Post
2009ರ ಜೋಡಿ ಕೊಲೆ ಪ್ರಕರಣ: ಭೂಗತ ಪಾತಕಿ ಛೋಟಾ ರಾಜನ್ ಸೇರಿ ನಾಲ್ವರು ಖುಲಾಸೆ

2009ರ ಜೋಡಿ ಕೊಲೆ ಪ್ರಕರಣ: ಭೂಗತ ಪಾತಕಿ ಛೋಟಾ ರಾಜನ್ ಸೇರಿ ನಾಲ್ವರು ಖುಲಾಸೆ

Discussion about this post

Recent News

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
45
ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d