• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಸೋಮೇಶ್ವರ ಉಚ್ಚಿಲದ ವಾಝ್ಕೊ ಬೀಚ್ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು

Coastal Times by Coastal Times
November 17, 2024
in ಕರಾವಳಿ
ಉಳ್ಳಾಲ: ಸೋಮೇಶ್ವರ ಉಚ್ಚಿಲದ ವಾಝ್ಕೊ ಬೀಚ್ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು
241
VIEWS
WhatsappTelegramShare on FacebookShare on Twitter

ಉಳ್ಳಾಲ: ಖಾಸಗಿ ರೆಸಾರ್ಟ್ ವೊಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ಮೃತರನ್ನು ಮೈಸೂರು ವಿಜಯ ನಗರದ ದೇವರಾಜ್ ಮೊಹಲ್ಲಾ ನಿವಾಸಿ ನವೀನ್ ಕುಮಾರ್ ಎಂಬವರ ಪುತ್ರಿ ಕೀರ್ತನಾ ಎನ್.(21), ಮೈಸೂರು ಕುರುಬರ ಹಳ್ಳಿ4 ನೇ ಕ್ರಾಸ್ ನಿವಾಸಿ ಮಲ್ಲೇಶ್ ಎಂಬವರ ಪುತ್ರಿ ನಿಶಿತಾ ಎಂ.ಡಿ.(21) ಹಾಗೂ ಮೈಸೂರು ಕೆ.ಆರ್.ಮೊಹಲ್ಲಾದ ರಾಮಾನುಜ ರಸ್ತೆಯ 11ನೇ ಕ್ರಾಸ್ ನಿವಾಸಿ ಎಂ.ಎನ್.ಶ್ರೀನಿವಾಸ್ ಎಂಬವರ ಪುತ್ರಿ ಪಾರ್ವತಿ ಎಸ್.(20) ಎಂದು ಗುರುತಿಸಲಾಗಿದೆ.

ನಿನ್ನೆ ಬೆಳಗ್ಗೆ ವಾಝ್ಕೊ ಬೀಚ್ ರೆಸಾರ್ಟ್ ಗೆ ಬಂದಿದ್ದ ಮೂವರು ಯುವತಿಯರು ರೂಮ್ ನಂ 2’ರಲ್ಲಿ ತಂಗಿದ್ದರು. ಇಂದು ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ರೆಸಾರ್ಟ್ ಮುಂಭಾಗದಲ್ಲಿರುವ ಈಜುಕೊಳದಲ್ಲಿ ನೀರಾಟವಾಡುತ್ತಿದ್ದರು. ಇದರ ವಿಡಿಯೋ ಸೆರೆ ಹಿಡಿಯಲು ತಮ್ಮ ಮೊಬೈಲ್​ ಅನ್ನು ರೆಕಾರ್ಡ್ ಮೋಡ್‌ನಲ್ಲಿಟ್ಟಿದ್ದರು. ಮೂವರು ಯುವತಿಯರು ಕೊಳಕ್ಕೆ ಇಳಿಯುತ್ತಾರೆ. ಒಬ್ಬಾಕೆ ಟ್ಯೂಬ್​ ತೆಗೆದುಕೊಳ್ಳಲು ಸ್ವಲ್ಪ ಮುಂದಕ್ಕೆ ತೆರಳಿದ್ದು, ಈ ವೇಳೆ ನೀರಿನಲ್ಲಿ ದಿಢೀರ್‌ ಒದ್ದಾಡಿದ್ದಾಳೆ. ಈ ವೇಳೆ ರಕ್ಷಿಸಲು ಮತ್ತೊಬ್ಬಾಕೆ ಮುಂದೆ ಹೋಗಿ ಹಿಡಿಯುತ್ತಿದ್ದಂತೆ ಆಕೆಯೂ ನೀರಿನಿಂದ ಮೇಲೆ ಬರಲಾರದೇ ಒದ್ದಾಡಿದ್ದಾಳೆ. ಈ ವೇಳೆ ಮೂರನೇ ಯುವತಿ ಕೂಡ ಅವರಿಬ್ಬರ ರಕ್ಷಣೆಗೆ ತೆರಳಿದ್ದು ಆಕೆಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ. ಯುವತಿಯರು ಈಜುಕೊಳದಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿರುವ ವಿಡಿಯೋ ರೆಸಾರ್ಟ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ರೆಸಾರ್ಟ್​​​​ ಸ್ಥಳೀಯರಾದ ಮನೋಹರ್ ಎಂಬವರಿಗೆ ಸೇರಿದ್ದಾಗಿದೆ​​ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಉಳ್ಳಾಲ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಎಚ್.ಎನ್.ಬಾಲಕೃಷ್ಣ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

10 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆ ನವೀಕರಣ: ದಿನೇಶ್ ಗುಂಡೂರಾವ್

Next Post

ನೆಲ್ಯಾಡಿ: ಮಣ್ಣಗುಂಡಿ ಡಿವೈಡರ್‌ಗೆ ಕಾರು ಢಿಕ್ಕಿ ಓರ್ವ ಸ್ಥಳದಲ್ಲೇ ಮೃತ್ಯು

Related Posts

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ
ಕರಾವಳಿ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ಕರಾವಳಿ

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

June 27, 2025
92
Next Post
ನೆಲ್ಯಾಡಿ: ಮಣ್ಣಗುಂಡಿ ಡಿವೈಡರ್‌ಗೆ ಕಾರು ಢಿಕ್ಕಿ ಓರ್ವ ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ಮಣ್ಣಗುಂಡಿ ಡಿವೈಡರ್‌ಗೆ ಕಾರು ಢಿಕ್ಕಿ ಓರ್ವ ಸ್ಥಳದಲ್ಲೇ ಮೃತ್ಯು

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
32
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d