ಮಂಗಳೂರು: ಇಲ್ಲಿನ ಸೆನ್ ಪೊಲೀಸ್ ಠಾಣೆಯ ಪೊಲೀಸರು ಸೈಬರ್ ವಂಚನೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೈಬರ್ ವಂಚನೆ ಪ್ರಕರಣದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಮಂಗಳೂರು ಪೊಲೀಸರು, 300ಕ್ಕೂ ಹೆಚ್ಚು ಬ್ಯಾಂಕ್ ಖಾತೆ ಹಾಗೂ 250ಕ್ಕೂ ಹೆಚ್ಚು ಸಿಮ್ ಬಳಸಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಮಾಂಗ್ಟೆ ರಿಯಲ್ ಕೋಮ್ ಯಾನೆ ಮಾಂಗ್ಟೆ ಅಮೋಶ್ ಬಂಧಿತ ಆರೋಪಿ. ಈತ 300ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹಾಗೂ 250ಕ್ಕೂ ಹೆಚ್ಚು ಸಿಮ್ ಕಾರ್ಡ್ಗಳನ್ನು ಸೈಬರ್ ವಂಚನೆಗೆ ಬಳಕೆ ಮಾಡಿರುವುದು ಕಂಡುಬಂದಿದೆ. ಆರೋಪಿಯಿಂದ 8 ಮೊಬೈಲ್ ಫೋನ್ , 20 ವಿವಿಧ ಬ್ಯಾಂಕ್ ಗಳ ಡೆಬಿಟ್ ಕಾರ್ಡ್ ಗಳು, 18 ವಿವಿಧ ಬ್ಯಾಂಕ್ ಗಳ ಪಾಸ್ ಬುಕ್ ಗಳು, 11 ವಿವಿಧ ಬ್ಯಾಂಕ್ ಗಳ ಚೆಕ್ ಬುಕ್ ಹಾಗೂ 7ಸಿಮ್ ಕಾರ್ಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಯಾರೋ ಅಪಚಿರಿತ ವ್ಯಕ್ತಿಯು ಇನ್ನೋರ್ವ ವ್ಯಕ್ತಿಯೊಬ್ಬರಿಗೆ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ಹಂತ ಹಂತವಾಗಿ ಒಟ್ಟು 7,27,000/- ಹಣವನ್ನು ಪಡೆದು ವಂಚನೆ ಮಾಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖೆ ಕೈಗೊಳ್ಳಲಾಗಿತ್ತು. ಈ ಪ್ರಕರಣದಲ್ಲಿ ತ್ರಿಪುರ ರಾಜ್ಯದ 27 ವರ್ಷ ವಯಸ್ಸಿನ ದಾಮೆಂಜಾಯ್ ರಿಯಾಂಗ್ ನನ್ನು ಮೊದಲು ಬಂಧಿಸಲಾಗಿತ್ತು. ನಂತರ ಮಾಂಗ್ಟೆ ರಿಯಲ್ ಕೋಮ್ (33)ನನ್ನು ಬಂಧಿಸಲಾದೆ. ಈ ಪ್ರಕರಣದಲ್ಲಿ ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದುಕೊಂಡು ಅದನ್ನು ಪರಿಶೀಲಿಸಿ ಬ್ಯಾಂಕ್ ಖಾತೆದಾರನಾದ ದಾಮೆಂಜಾಯ್ ರಿಯಾಂಗ್ನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.
ಈ ಪ್ರಕರಣದಲ್ಲಿ ತನಿಖೆ ಮುಂದುವರೆಸಿ ಬ್ಯಾಂಕ್ ಖಾತೆಗಳನ್ನು ಪಡೆದುಕೊಂಡು ಸೈಬರ್ ವಂಚಕರಿಗೆ ನೀಡಿದ ಸುಳಿವಿನ ಆಧಾರದಲ್ಲಿ ಮಾಂಗ್ಟೆ ರಿಯಲ್ ಕೋಮ್ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಈ ಪ್ರಕರಣದ ಆರೋಪಿಗಳ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರದ ಸೆನ್ ಕ್ರೈಂ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿದ್ದರು ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post