• About us
  • Contact us
  • Disclaimer
Tuesday, May 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಅಂತರ್ ರಾಜ್ಯ ವಾಹನ, ಸರಗಳ್ಳತನದ ಇಬ್ಬರು ಆರೋಪಿಗಳ ಬಂಧನ

Coastal Times by Coastal Times
December 17, 2025
in ಕ್ರೈಮ್ ನ್ಯೂಸ್
ಮಂಗಳೂರು: ಅಂತರ್ ರಾಜ್ಯ ವಾಹನ, ಸರಗಳ್ಳತನದ ಇಬ್ಬರು ಆರೋಪಿಗಳ ಬಂಧನ
28
VIEWS
WhatsappTelegramShare on FacebookShare on Twitter

ಮಂಗಳೂರು: ಅಂತರ್ ರಾಜ್ಯಗಳಲ್ಲಿ ವಾಹನ ಹಾಗೂ ಸರಗಳ್ಳತನ ನಡೆಸಿದ ಪ್ರಕರಣಗಳ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ತೋಟ ಪೈಸಲ್ ಮತ್ತು ಮೈಸೂರಿನ ವಿನಾಯಕ ನಗರದ ನಿತೀನ್ ಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳಿಂದ ಸುಮಾರು 1,20,000 ರೂ. ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಿಸಿದ 45 ಸಾವಿರ ರೂ. ಮೌಲ್ಯದ ಬೈಕ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಡಿ.12ರಂದು ಯೆಯ್ಯಾಡಿಯ ಶ್ರೀಹರಿ ಕಾಂಪ್ಲೆಕ್ಸ್ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ ಯಮಹಾ ಕಂಪನಿಯ ಮೋಟಾರ್ ಸೈಕಲನ್ನು ಕಳವು ಆದ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಉಳ್ಳಾಲದ ಫೈಸಲ್ ಅಲಿಯಾಸ್ ತೋಟ ಪೈಸಲ್ ಮತ್ತು ಮೈಸೂರಿನ ವಿನಾಯಕ ನಗರ ನಿವಾಸಿ ನಿತೀನ್ ಕುಮಾರ್ ಎಂಬವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಒಪ್ಪಿಕೊಂಡಿದ್ದರು.

ಅಲ್ಲದೆ, ಆರೋಪಿಗಳು ಡಿ.13ರಂದು ಭಟ್ಕಳ ಗ್ರಾಮಿಣ ಪೊಲೀಸ್ ಠಾಣಾ ಸರಹದ್ದಿನ ಗರ್ಡಿ ಹಿತ್ಲು ಬೆಳಕೆ ನಿವಾಸಿ ವಯೋವೃದ್ದ ಮಹಿಳೆ ಶ್ರೀಮತಿ ಹೊನ್ನಮ್ಮ ಮಹಾದೇವ ನಾಯ್ಕ್ [ 70] ಎಂಬವರ ಕುತ್ತಿಗೆಯಿಂದ ಚಿನ್ನದ ಚೈನ್ ಕಸಿದ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಬಾಯಿ ಬಿಟ್ಟಿದ್ದಾರೆ. ಆರೋಪಿಗಳಿಂದ ಚಿನ್ನದ ಸರ-1, ಇದರ ಅಂದಾಜು ಮೌಲ್ಯ ರೂ 1,20,000/- ಮತ್ತು ಕೃತ್ಯಕ್ಕೆ ಉಪಯೋಗಿಸಿದ ಒಂದು ಬೈಕ್-1 ಅಂದಾಜು ಮೌಲ್ಯ ರೂ  45,000/- ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ.

ಪೈಸಲ್ @ ತೋಟ ಪೈಸಲ್ ವಿರುದ್ದ ಕರ್ನಾಟಕದ ಉಡುಪಿ ಕಾರ್ಕಳ, ಮಣಿಪಾಲ, ಮಂಗಳೂರು, ಬೆಳ್ತಂಗಡಿ, ವಿಟ್ಲ, ಕಂಕನಾಡಿ ನಗರ ಪೊಲೀಸ್ ಠಾಣೆ, ಪುತ್ತೂರು, ಶಿರ್ವ, ಸುರತ್ಕಲ್, ಕಡಬ, ಕೊಣಾಜೆ, ಮಡಿಕೇರಿಯ ಕುಶಾಲ ನಗರ ಹಾಗೂ ಕೇರಳ ರಾಜ್ಯಗಳಲ್ಲಿ ರಾಬರಿ, ದರೋಡೆ, ಕಳ್ಳತನದ ಮತ್ತು ಕೊಲೆ ಪ್ರಕರಣ ಸೇರಿದಂತೆ ಸುಮಾರು 42 ಪ್ರಕರಣಗಳು ದಾಖಲಾಗಿರುತ್ತದೆ. ಈತನ ವಿರುದ್ದ ವಿವಿಧ ನ್ಯಾಯಾಲಯಗಳಲ್ಲಿ 10ಕ್ಕಿಂತಲೂ ಹೆಚ್ಚು ಜಾಮೀನು ರಹಿತ ವಾರೆಂಟ್ ಇದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆತಪ್ಪಿಸಿಕೊಂಡಿದ್ದ.

ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಅನಂತ ಪದ್ಮನಾಭ, ಪಿಎಸ್ಐ ಮನೋಹರ್ ಪ್ರಸಾದ್, ಎ.ಎಸ್.ಐ.ಗಳಾದ ಚಂದ್ರಶೇಖರ್, ಸುಧಾಕರ್ ರಾವ್, ರಾಜಶೇಖರ್, ಹೆಚ್.ಸಿ.ಗಳಾದ ಲೋಕೇಶ್, ಸಂತೋಷ್ ಡಿ.ಕೆ. ಸುರೇಶ್, ದಿಲೀಪ್, ಮೋಹನ್, ಮಲ್ಲಪ್ಪ ಬಿ. ಮತ್ತು ಪಿ.ಸಿ.ಗಳಾದ ಸುನೀಲ್, ಮಣಿಕಂಠ, ಮೌಲಾ ಅಹಮ್ಮದ್ ಮತ್ತು ಮಂಜುನಾಥ ವಡ್ಡರ ಹಾಗೂ ಕದ್ರಿ ಠಾಣೆಯ ಸಿಬ್ಬಂದಿ ವರ್ಗ ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ತಲಪಾಡಿಯಲ್ಲಿ ನಿಂತ ಟ್ಯಾಂಕರ್ ಗೆ ಕಾರು ಡಿಕ್ಕಿ, ನಾಲ್ಕು ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ವಶಕ್ಕೆ

Next Post

ಮಂಗಳೂರು: ಜನವರಿಯಿಂದ 2 ತಿಂಗಳು ಮಂಗಳಾ ಕ್ರೀಡಾಂಗಣ ಬಂದ್‌

Related Posts

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ
ಕ್ರೈಮ್ ನ್ಯೂಸ್

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

May 25, 2026
50
ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​
ಕ್ರೈಮ್ ನ್ಯೂಸ್

ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​

May 22, 2026
26
Next Post
ಮಂಗಳೂರು: ಜನವರಿಯಿಂದ 2 ತಿಂಗಳು ಮಂಗಳಾ ಕ್ರೀಡಾಂಗಣ ಬಂದ್‌

ಮಂಗಳೂರು: ಜನವರಿಯಿಂದ 2 ತಿಂಗಳು ಮಂಗಳಾ ಕ್ರೀಡಾಂಗಣ ಬಂದ್‌

Discussion about this post

Recent News

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

May 25, 2026
41
ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

May 25, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

May 25, 2026
ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

May 25, 2026
ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d