• About us
  • Contact us
  • Disclaimer
Wednesday, April 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗುಜರಾತ್​ : ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ: ತಪ್ಪಿತಸ್ಥನಿಗೆ ಕೇವಲ 40 ದಿನಗಳಲ್ಲೇ ಮರಣದಂಡನೆ ಶಿಕ್ಷೆ

Coastal Times by Coastal Times
January 18, 2026
in ರಾಷ್ಟ್ರೀಯ ಸುದ್ದಿ
ಗುಜರಾತ್​ : ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ: ತಪ್ಪಿತಸ್ಥನಿಗೆ ಕೇವಲ 40 ದಿನಗಳಲ್ಲೇ ಮರಣದಂಡನೆ ಶಿಕ್ಷೆ
92
VIEWS
WhatsappTelegramShare on FacebookShare on Twitter

ಗುಜರಾತ್​ : ರಾಜ್‌ಕೋಟ್ ಅಟ್ಕೋಟ್ ಪ್ರದೇಶದಲ್ಲಿ 6 ವರ್ಷದ ಮುಗ್ಧ ಬಾಲಕಿಯ ಮೇಲೆ ನಡೆದ ಕ್ರೂರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್‌ಕೋಟ್ ಪೋಕ್ಸೋ ನ್ಯಾಯಾಲಯವು ಐತಿಹಾಸಿಕ ಮತ್ತು ಮಾದರಿಯಾದ ಆದೇಶ ನೀಡಿದೆ.

ಅಪರಾಧ ನಡೆದ ಕೇವಲ 40 ದಿನಗಳಲ್ಲೇ ನ್ಯಾಯಾಲಯವು ಕಾನೂನು ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಆರೋಪಿಗೆ ಮರಣದಂಡನೆ ವಿಧಿಸಿದೆ. ಪೊಲೀಸ್ ತನಿಖೆ ಮತ್ತು ಸರ್ಕಾರದ ಬಲವಾದ ವಾದಗಳು ಈ ಪ್ರಕರಣದಲ್ಲಿ ನಿರ್ಣಾಯಕವೆಂದು ಸಾಬೀತಾಗಿವೆ. ಇದು ಸಮಾಜಕ್ಕೆ ಒಂದು ಮಾದರಿಯಾಗಿದೆ.

ದೂರದಲ್ಲಿರುವ ಪ್ರತಾಪ್ಪುರ (ನವಗಮ್) ಹೊರವಲಯದಲ್ಲಿ ಈ ಘಟನೆ ನಡೆದಿತ್ತು. ದೂರುದಾರರ 6 ವರ್ಷದ ಮಗಳು ತನ್ನ ಮಾವನ ತೋಟದಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಳು. ಈ ಮಧ್ಯೆ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಬಾಲಕಿಯನ್ನು ಅಪಹರಿಸಿ, ಕ್ರೂರವಾಗಿ ಹಿಂಸಿಸಿ ಅತ್ಯಾಚಾರವೆಸಗಿ ಗಂಭೀರ ಗಾಯಗೊಳಿಸಿದ್ದ. ಘಟನೆಗೆ ಸಂಬಂಧಿಸಿದಂತೆ 2023ರಲ್ಲಿ ಅಟ್ಕೋಟ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 65(2) ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಘಟನೆಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ತನಿಖೆಯನ್ನು ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಅಶೋಕ್ ಕುಮಾರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಸಿಂಗ್ ಗುರ್ಜರ್ ಅವರ ಮಾರ್ಗದರ್ಶನದಲ್ಲಿ ಧೋರಾಜಿಯ ಮಹಿಳಾ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಸಿಮ್ರಾನ್ ಭಾರದ್ವಾಜ್ ಅವರಿಗೆ ವಹಿಸಲಾಗಿತ್ತು. ಸಂತ್ರಸ್ತರು ಭಯಭೀತರಾಗಿದ್ದ ಕಾರಣ, ಮಹಿಳಾ ಅಧಿಕಾರಿ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಯೊಬ್ಬರು ಆಕೆಗೆ ಸಲಹೆ ನೀಡಿ ಆರೋಪಿ ಬಗ್ಗೆ ವಿವರಣೆಯನ್ನು ಪಡೆದಿದ್ದರು.

ವಿವರಣೆಯ ಆಧಾರದ ಮೇಲೆ, ಪೊಲೀಸರು ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 200 ವಲಸೆ ಕಾರ್ಮಿಕರನ್ನು ಪ್ರಶ್ನಿಸಿದ್ದರು. ಅಂತಿಮವಾಗಿ, ಮಧ್ಯಪ್ರದೇಶದ ಅಲಿರಾಜ್‌ಪುರದ ನಿವಾಸಿ ರಾಮಸಿಂಗ್ ಅಲಿಯಾಸ್ ರಾಮಸಿಂಗ್ ತೇರ್ಸಿಂಗ್ ದುಡ್ವಾ (32) ನನ್ನು ಬಂಧಿಸಿದ್ದರು. ನಂತರ ಆತ ಅಪರಾಧವನ್ನು ಒಪ್ಪಿಕೊಂಡಿದ್ದ.

ಆರೋಪಿಯ ಗುರುತು ಪತ್ತೆ : ಆತನ ಗುರುತಿನ ಪರೇಡ್ ಸಮಯದಲ್ಲಿ, ಮಕ್ಕಳು ಆರೋಪಿಗಳಿಗೆ ಹೆದರಬಾರದು ಎಂಬ ಉದ್ದೇಶದಿಂದ ಪ್ರತಿಯೊಬ್ಬ ಶಂಕಿತನಿಗೆ ಆಟಿಕೆ ನೀಡಲಾಗಿತ್ತು. ಸಂತ್ರಸ್ತೆ ಮತ್ತು ಅವಳೊಂದಿಗೆ ಆಟವಾಡುತ್ತಿದ್ದ ಮಕ್ಕಳು ಆರೋಪಿಯನ್ನು ಭಯವಿಲ್ಲದೆ ಗುರುತಿಸಿದ್ದರು.

ಈ ಪ್ರಕರಣದಲ್ಲಿ ಪೊಲೀಸರು ಕೇವಲ 12 ದಿನಗಳಲ್ಲಿ ಎಲ್ಲಾ ವೈದ್ಯಕೀಯ, ವಿಧಿವಿಜ್ಞಾನ ಮತ್ತು ದಾಖಲೆ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಘಟನಾ ಸ್ಥಳದಲ್ಲಿ ಆರೋಪಿಯ ಕೂದಲು ಪತ್ತೆಯಾಗಿದ್ದು, ವಿಧಿವಿಜ್ಞಾನ ವರದಿ ನಿರ್ಣಾಯಕವಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ನೂರಕ್ಕೂ ಹೆಚ್ಚು ಬ್ಲೇಡ್ ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ – ಬಿ.ಕೆ ಇಮ್ತಿಯಾಜ್ ಆಗ್ರಹ

Next Post

ಅಡೆತಡೆಗಳ ಮೆಟ್ಟಿ ನಿಂತು ಸಮಾನತೆಯ ಸಂದೇಶ: ಸೈಂಟ್ ಅಲೋಶಿಯಸ್ ಶಾಲೆಯಲ್ಲಿ ‘ಅಲೋಯ್ ಕ್ವಿಜ್-ವಿಜ್ 2026’ ಯಶಸ್ವಿ ಆಯೋಜನೆ

Related Posts

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ
ರಾಷ್ಟ್ರೀಯ ಸುದ್ದಿ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
46
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
66
Next Post
ಅಡೆತಡೆಗಳ ಮೆಟ್ಟಿ ನಿಂತು ಸಮಾನತೆಯ ಸಂದೇಶ: ಸೈಂಟ್ ಅಲೋಶಿಯಸ್ ಶಾಲೆಯಲ್ಲಿ ‘ಅಲೋಯ್ ಕ್ವಿಜ್-ವಿಜ್ 2026’ ಯಶಸ್ವಿ ಆಯೋಜನೆ

ಅಡೆತಡೆಗಳ ಮೆಟ್ಟಿ ನಿಂತು ಸಮಾನತೆಯ ಸಂದೇಶ: ಸೈಂಟ್ ಅಲೋಶಿಯಸ್ ಶಾಲೆಯಲ್ಲಿ ‘ಅಲೋಯ್ ಕ್ವಿಜ್-ವಿಜ್ 2026’ ಯಶಸ್ವಿ ಆಯೋಜನೆ

Discussion about this post

Recent News

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
84
ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
2
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d