• About us
  • Contact us
  • Disclaimer
Sunday, September 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಾರಾಯಣ ಗುರು ಅಭಿವೃದ್ಧಿ ನಿಗಮ ಮಾಡುತ್ತೇವೆಂದು ಹೇಳಿ ಬಿಲ್ಲವರಿಗೆ ಮೋಸ : ಪದ್ಮರಾಜ್ ಆರೋಪ

Coastal Times by Coastal Times
February 18, 2023
in ಕರಾವಳಿ
ನಾರಾಯಣ ಗುರು ಅಭಿವೃದ್ಧಿ ನಿಗಮ ಮಾಡುತ್ತೇವೆಂದು ಹೇಳಿ ಬಿಲ್ಲವರಿಗೆ ಮೋಸ : ಪದ್ಮರಾಜ್ ಆರೋಪ
67
VIEWS
WhatsappTelegramShare on FacebookShare on Twitter

ಮಂಗಳೂರು, ಫೆ.17: ನಾರಾಯಣ ಗುರು ಅಭಿವೃದ್ಧಿ ನಿಗಮ ಮಾಡುತ್ತೇವೆಂದು ಹೇಳಿ ಮುಖ್ಯಮಂತ್ರಿ ಬೊಮ್ಮಾಯಿ ಮಾತು ತಪ್ಪಿದ್ದಾರೆ. ಬಜೆಟ್ ನಲ್ಲಿ ಅಭಿವೃದ್ಧಿ ನಿಗಮದ ಪ್ರಸ್ತಾಪವನ್ನೇ ಮಾಡದೆ ಬಿಲ್ಲವರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದ್ದೀರಿ. ರಾಜ್ಯದಲ್ಲಿ 90 ಲಕ್ಷ ಬಿಲ್ಲವರಿದ್ದಾರೆ. ಇದರ ಪರಿಣಾಮವನ್ನು ಮುಂದಿನ ಚುನಾವಣೆಯಲ್ಲಿ ಅನುಭವಿಸುತ್ತೀರಿ ಎಂದು ಬಿಲ್ಲವ ಮುಖಂಡರಾದ ಪದ್ಮರಾಜ್ ಮತ್ತು ಸತ್ಯಜಿತ್ ಸುರತ್ಕಲ್ ಕಿಡಿಕಾರಿದ್ದಾರೆ.

ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ನಾರಾಯಣಗುರು ನಿಗಮ ಸ್ಥಾಪನೆ ಮಾಡಬೇಕು ಎಂಬುದು ನಾಲ್ಕು ವರ್ಷಗಳಿಂದ ನಾವು ಹೋರಾಟ ಮಾಡಿಕೊಂಡು ಬಂದಿದ್ದೆವು. ಆದರೆ ಸರಕಾರ ಮುತುವರ್ಜಿ ವಹಿಸದಿದ್ದುದರಿಂದ ಜನವರಿಯಲ್ಲಿ ಸಮಾವೇಶ ಮಾಡಲು ತಯಾರಿ ಮಾಡಿದೆವು. ಆಗ ನಿಗಮವನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗುತ್ತದೆ ಸಚಿವರು ಭರವಸೆ ನೀಡಿದ್ದರಿಂದ ಸಮಾವೇಶ ಕೈಬಿಟ್ಟಿದ್ದೆವು. ಜ.5ರಂದು ಸಚಿವ ಸುನಿಲ್ ಕುಮಾರ್ ಮೂಲಕ ಸಿಎಂಗೆ ಮನವಿ ನೀಡಲಾಯಿತು. ನಿಗಮ ಘೋಷಣೆ ಮಾಡುತ್ತೇವೆ ಎಂದು ಸಿಎಂ ಭರವಸೆ ನೀಡಿದ್ದರು. ಆದರೆ ಇಂದಿನ ಬಜೆಟ್‌ನಲ್ಲಿ ನಿಗಮ ಘೋಷಣೆ ಮಾಡದೆ ಅನ್ಯಾಯ ಎಸಗಿದ್ದಾರೆ ಎಂದರು.

ಸತ್ಯಜಿತ್ ಸುರತ್ಕಲ್ ಮಾತನಾಡಿ, 18 ವರ್ಷಗಳ ಹಿಂದೆ ಶೇಂದಿ ನಿಷೇಧ ಆದಾಗಲೇ ಅಭಿವೃದ್ಧಿ ನಿಗಮ ಮಾಡಬೇಕಿತ್ತು. ಅಂದು ಅಧಿಕಾರದಲ್ಲಿದ್ದವರು ಮುಂದಿನ ಬಜೆಟಲ್ಲಿ ನಿಗಮ ಘೋಷಿಸುವುದಾಗಿ ತಿಳಿಸಿದ್ದರು. ಆದರೆ ಅದನ್ನು ಮಾಡಿಲ್ಲ. ಈ ಬಾರಿ ನಾವು ಹಕ್ಕೊತ್ತಾಯ ಮಾಡಿದ್ದೆವು. ಬಿಲ್ಲವ ಸಮಾಜದ ಪರವಾಗಿ ಪ್ರಣವಾನಂದ ಸ್ವಾಮೀಜಿ ಮಂಗಳೂರಿನಿಂದ ಉಡುಪಿ, ದಾವಣಗೆರೆ ಮೂಲಕ ಬೆಂಗಳೂರಿಗೆ ಪಾದಯಾತ್ರೆ ಮಾಡಿದ್ದಾರೆ. ಮೊನ್ನೆ ಸಮಾರೋಪ ಸಂದರ್ಭದಲ್ಲಿ ಸಚಿವರೇ ಬಂದು ಬೇಡಿಕೆ ಈಡೇರಿಸುವ ಹೇಳಿಕೆ ನೀಡಿದ್ದರು. ಈಗ ಬಜೆಟ್ ನಲ್ಲಿ ಹಣಕಾಸು ಹೊಂದಿಕೆ ಮಾಡಿಕೊಂಡು ಘೋಷಣೆ ಮಾಡಬೇಕಿತ್ತು. ಇಲ್ಲಿ ಸಾಧ್ಯವಾಗದ್ದು ಮುಂದೆ ಮಾಡುವ ಭರವಸೆ ಉಳಿದಿಲ್ಲ.

ನಾರಾಯಣ ಗುರು ವಸತಿ ಶಾಲೆ ಎಲ್ಲ ಸಮಾಜಕ್ಕೆ ಸಂಬಂಧಿಸಿದ್ದಾಗಿದೆ. ಇದರಿಂದ ಬಿಲ್ಲವ ಸಮಾಜದ ಬದುಕಿನ ಏಳಿಗೆ ಆಗಲ್ಲ. ಶೈಕ್ಷಣಿಕ, ಆರ್ಥಿಕ ಏಳಿಗೆಗೆ ನಿಗಮ ಅಗತ್ಯವಾಗಿತ್ತು. 15 ಜಿಲ್ಲೆಗಳಲ್ಲಿ ನಾರಾಯಣ ಗುರು ವಿಚಾರ ವೇದಿಕೆಯ ಸಂಘಟನೆ ಇದೆ. ರಾಜ್ಯಾದ್ಯಂತ ಹೋರಾಟದ ಶಕ್ತಿ ಇದೆ. ಹಾಗಾಗಿ ಹೋರಾಟ ಮುಂದುವರಿಸುತ್ತೇವೆ. ಅದಕ್ಕಿಂತ ಮೊದಲು ಸರಕಾರದಿಂದ ಆದ ಲೋಪ ಸರಿಪಡಿಸಬೇಕು. ಫೆ.24ರವರೆಗೆ ನಡೆಯುವ ಅಧಿವೇಶನ ದಲ್ಲಿ ನಿಗಮ ಘೋಷಿಸಿ 500 ಕೋ.ರೂ. ಮೀಸಲಿಡಬೇಕು. ಇಲ್ಲದಿದ್ದರೆ ಸರಕಾರಕ್ಕೆ ತಕ್ಕ ಪಾಠ ಕಲಿಸುತ್ತೇವೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂಗಾರಪ್ಪ ಮತ್ತು ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಬೇಕು. ಅಲ್ಲದೆ ಸಮುದಾಯದ ಎಲ್ಲಾ ಬೇಡಿಕೆಗಳಿಗೆ ಮನ್ನಣೆ ನೀಡಬೇಕು ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಬಿಲ್ಲವ ಸಮುದಾಯದ ಮುಖಂಡರಾದ ಅಕ್ಷಿತ್ ಸುವರ್ಣ, ದೇವೇಂದ್ರ ಪೂಜಾರಿ, ಸೂರ್ಯಕಾಂತ, ಜಯಶ್ರೀ ಸುವರ್ಣ, ರಾಜೇಂದ್ರ ಚಿಲಿಂಬಿ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಫೆ.19ರಂದು ಬಜ್ಪೆಯಲ್ಲಿ ಸನ್‌ಶೈನ್ ಸ್ಯಾಪ್ಲಿಂಗ್‌ ವಸತಿ, ವಾಣಿಜ್ಯ ಸಂಕೀರ್ಣಕ್ಕೆ ಶಂಕುಸ್ಥಾಪನೆ

Next Post

ಗುಂಡ್ಯದಲ್ಲಿ ಅಕ್ರಮ ವಿದ್ಯುತ್ ಸಂಪರ್ಕ ಕಡಿತಗೊಳಿಸದಿದ್ದರೆ ಕಾನೂನು ಹೋರಾಟ: ಎಂ.ಕೆ.ಪೌಲೋಸ್ ಎಚ್ಚರಿಕೆ

Related Posts

ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಸಂಭ್ರಮಾಚರಣೆ ವೇಳೆ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು
ಕರಾವಳಿ

ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಸಂಭ್ರಮಾಚರಣೆ ವೇಳೆ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

September 27, 2026
98
ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ
ಕರಾವಳಿ

ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

September 25, 2026
18
Next Post
ಗುಂಡ್ಯದಲ್ಲಿ ಅಕ್ರಮ ವಿದ್ಯುತ್ ಸಂಪರ್ಕ ಕಡಿತಗೊಳಿಸದಿದ್ದರೆ ಕಾನೂನು ಹೋರಾಟ: ಎಂ.ಕೆ.ಪೌಲೋಸ್ ಎಚ್ಚರಿಕೆ

ಗುಂಡ್ಯದಲ್ಲಿ ಅಕ್ರಮ ವಿದ್ಯುತ್ ಸಂಪರ್ಕ ಕಡಿತಗೊಳಿಸದಿದ್ದರೆ ಕಾನೂನು ಹೋರಾಟ: ಎಂ.ಕೆ.ಪೌಲೋಸ್ ಎಚ್ಚರಿಕೆ

Discussion about this post

Recent News

ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಸಂಭ್ರಮಾಚರಣೆ ವೇಳೆ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಸಂಭ್ರಮಾಚರಣೆ ವೇಳೆ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

September 27, 2026
98
ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

September 26, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಸಂಭ್ರಮಾಚರಣೆ ವೇಳೆ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಸಂಭ್ರಮಾಚರಣೆ ವೇಳೆ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

September 27, 2026
ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

September 26, 2026
ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

September 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d