ಮಂಗಳೂರು: ಲೋಕಸಭೆ ಚುನಾ ವಣೆಗೆ ದಿನ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯ ಪಾರಂಪರಿಕ ಭದ್ರಕೋಟೆ ಎನಿಸಿಕೊಂಡಿರುವ ಮಂಗಳೂರಿನಲ್ಲಿ ಕಾಂಗ್ರೆಸ್ ತನ್ನ ಲೋಕ ಸಮರದ ಪ್ರಚಾರಕ್ಕೆ ರಣಕಹಳೆ ಮೊಳಗಿಸಿದೆ. ಕಾಂಗ್ರೆಸ್‌ನ ಗ್ಯಾರಂಟಿ ಪದವನ್ನು ಬಿಜೆಪಿಯವರು ಕದ್ದು ಈಗ ಮೋದಿ ಗ್ಯಾರಂಟಿ ಅಂತಿದ್ದಾರೆ. ನಮ್ಮ ಕಾರ್ಯಕರ್ತರು ಸರಕಾರದ ಗ್ಯಾರಂಟಿ ಯೋಜನೆಗಳನ್ನು ಮನೆಗಳಿಗೆ ತಲುಪಿಸದೇ ಇದ್ದರೆ ಬಿಜೆಪಿಯವರು ನಾವೇ ಮಾಡಿದ್ದು ಅನ್ನುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರ ಹೊರವಲಯದ ಅಡ್ಯಾರ್‌ನಲ್ಲಿ ಶನಿವಾರ ನಡೆದ ರಾಜ್ಯ ಕಾಂಗ್ರೆಸ್ ಸಮಾವೇಶ ದಲ್ಲಿ ಗ್ಯಾರಂಟಿ ಮಾರ್ಗದ ಮೂಲಕ ಚುನಾವಣೆ ಗೆಲ್ಲುವ ಸಂಕಲ್ಪವನ್ನು ಕಾಂಗ್ರೆಸ್ ಮಾಡಿತು. ಕರಾವಳಿ ಸಹಿತ 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಕಾರ್ಯಕರ್ತರಿಗೆ ನೀಡಲಾಯಿತು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಪಕ್ಷದ ಉಸ್ತುವಾರಿ ರಣದೀಪ್ ಸುಜೇìವಾಲ ಅವರು ಕೇಂದ್ರ ಹಾಗೂ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದರು.
ನಾವು ಗ್ಯಾರಂಟಿ ಕೊಟ್ಟರೂ ದಿವಾಳಿಯಾಗಿಲ್ಲ : ನಮ್ಮ ಕಾರ್ಯಕರ್ತರು ಪ್ರಜ್ಞಾವಂತರಿದ್ದಾರೆ, ನುಡಿದಂತೆ ನಡೆದಿದ್ದೇವೋ ಅಂತ ವಿಮರ್ಶೆ ಮಾಡುವ ಶಕ್ತಿ ಇದೆ, ನಾವು ಆರೇ ತಿಂಗಳಲ್ಲಿ ಚುನಾವಣೆಯಲ್ಲಿ ಹೇಳಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಶಕ್ತಿ ಯೋಜನೆಯಲ್ಲಿ ಬರೋಬ್ಬರಿ 155 ಕೋಟಿ ಮಹಿಳೆಯರು ಫ್ರೀಯಾಗಿ ಪ್ರಯಾಣ ಮಾಡಿದ್ದಾರೆ. ಬಿಜೆಪಿಯವರು ಯಾವತ್ತಾದರೂ ಇಂಥ ಕೆಲಸ ಮಾಡಿದ್ರಾ.. ಒಂದು ಲಕ್ಷ ಜನರು ಯುವನಿಧಿಯನ್ನು ನೋಂದಣಿ ಮಾಡಿಸಿದ್ದಾರೆ. ಈ ವರ್ಷ ಯಾವುದೇ ಮಧ್ಯವರ್ತಿ ಇಲ್ಲದೆ 36 ಸಾವಿರ ಕೋಟಿ ರೂ. ಜನರ ಖಾತೆಗೆ ನೇರವಾಗಿ ತಲುಪಿಸಿದ್ದೇವೆ, ಬಿಜೆಪಿಯವರು ಗ್ಯಾರಂಟಿ ಕೊಡಕ್ಕಾಗಲ್ಲ, ರಾಜ್ಯ ದಿವಾಳಿಯಾಗತ್ತೆ ಎಂದಿದ್ದರು. ಗ್ಯಾರಂಟಿ ಕೊಟ್ಟು ದಿವಾಳಿ ಆಗಿಲ್ಲ, ಆರ್ಥಿಕವಾಗಿ ಸುಭದ್ರವಾಗಿದ್ದೇವೆ.
ಬಿಜೆಪಿಯವರನ್ನು ಯಾವತ್ತೂ ನಂಬಬೇಡಿ. ಅವರು ಅಧಿಕಾರಕ್ಕೆ ಬಂದಾಗ ನುಡಿದಂತೆ ನಡೆಯಲ್ಲ. 10 ವರ್ಷ ಹಿಂದೆ ನರೇಂದ್ರ ಮೋದಿ ನೀಡಿದ ಯಾವ ಪ್ರಮುಖ ಭರವಸೆಯನ್ನು ಈಡೇರಿಸಿದ್ದಾರೆ? ಕೇವಲ ಕೋಮುವಾದ, ಧರ್ಮ, ಜಾತಿಗಳ ನಡುವೆ ಬೆಂಕಿ ಹಚ್ಚೋದು, ಭಾವನಾತ್ಮಕ- ಧಾರ್ಮಿಕ ವಿಚಾರಗಳನ್ನು ಇಟ್ಟುಕೊಂಡು ಅಧಿಕಾರ ನಡೆಸುತ್ತಿದ್ದಾರೆ. ಆದರೆ ನಾವು ನುಡಿದಂತೆ ನಡೆದಿದ್ದೇವೆ. ಎಲ್ಲ ಐದೂ ಗ್ಯಾರಂಟಿ ಭರವಸೆ ಈಡೇರಿಸಿದ್ದೇವೆ. ಮಹಿಳೆಯರು ಈವರೆಗೆ 155 ಕೋಟಿ ಬಾರಿ ಉಚಿತವಾಗಿ ಸರಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ. 1.20 ಕೋಟಿ ಕುಟುಂಬಗಳಿಗೆ 5 ಕೆಜಿ ಅಕ್ಕಿಯ ಹಣವನ್ನು ನೀಡುತ್ತಿದ್ದೇವೆ. 1.17 ಕೋಟಿ ಮಹಿಳೆಯರಿಗೆ 2 ಸಾವಿರ ರೂ ಗೃಹಲಕ್ಷ್ಮೀ ಹಣ ತಲುಪುತ್ತಿದೆ. ಈ ವರ್ಷ 36 ಸಾವಿರ ಕೋಟಿ ರೂ.ಗಳು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಫಲಾನುಭವಿಗಳ ಕೈ ತಲುಪಿದೆ ಎಂದು ಲೆಕ್ಕ ಹೇಳಿದ ಸಿದ್ದರಾಮಯ್ಯ, ಬಿಜೆಪಿಯವರಿಗೆ ಯಾವತ್ತಾದರೂ ಇಂಥ ಕೆಲಸ ಮಾಡಲು ಸಾಧ್ಯವಾಗಿದಾ ಎಂದು ಪ್ರಶ್ನಿಸಿದರು.
Discover more from Coastal Times Kannada
Subscribe to get the latest posts sent to your email.
Discussion about this post