ಮಂಗಳೂರು, ಫೆ.18: ದೇರಳಕಟ್ಟೆ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಆರೋಪಿ ಮತ್ತು ಮಂಗಳೂರು, ಉಡುಪಿ ಸೇರಿ ಸುಮಾರು 31 ಪ್ರಕರಣಗಳಲ್ಲಿ ಆರೋಪಿಯಾಗಿದ್ದು, 9 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನಟೋರಿಯಸ್ ರೌಡಿಶೀಟರ್ ಮೂಲ್ಕಿ ಮೂಲದ ಸಫ್ವಾನ್ ಹುಸೇನ್ (42) ಎಂಬಾತನನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಕೊಲೆ, 4 ಕೊಲೆಯತ್ನ, ಗ್ಯಾಂಗ್ ರೇಪ್, 5 ದರೋಡೆ, ಅಪಹರಣ, ಸುಲಿಗೆ, ಪೊಲೀನ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನ, ಹಲ್ಲೆ, ಜೈಲಿನಲ್ಲಿ ಸಹ ಖೈದಿಗಳ ಮೇಲೆ ಹಲ್ಲೆ, ಅಕ್ರಮ ಕೂಟ ಸೇರಿ ಹಲ್ಲೆ, ಕೊಲೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ, ದರೋಡೆಗೆ ತಯಾರಿ ಮತ್ತು ಸಂಚು ಮುಂತಾದ ಅಪರಾಧಗಳಿಗೆ ಸಂಬಂಧಿಸಿದ ಸುಮಾರು 31 ಪ್ರಕರಣಗಳಲ್ಲಿ ಭಾಗಿಯಾಗಿಯಾಗಿರುತ್ತಾನೆ.

ಈತನ ವಿರುದ್ಧ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2008 ರಲ್ಲಿ ದಾಖಲಾಗಿದ್ದ ಪ್ರವೀಣ್ ಎಂಬವರ ಅಪಹರಣ, ದರೋಡೆ ಮತ್ತು ಕೊಲೆ ಪ್ರಕರಣ ಸಂಬಂಧಿಸಿ 2020ರ ಫೆ. 28 ರಂದು ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿರುತ್ತದೆ. ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ 2008 ರಲ್ಲಿ ದರೋಡೆ ಪ್ರಕರಣ ಸಂಬಂಧ ನ್ಯಾಯಾಲಯವು 3 ವರ್ಷ ಶಿಕ್ಷೆ ವಿಧಿಸಿರುತ್ತದೆ. ಈತನ ವಿರುದ್ಧ 12 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿ ಬಾಕಿ ಇದ್ದು, ನ್ಯಾಯಾಲಯದಿಂದ ದಸ್ತಗಿರಿ ವಾರೆಂಟ್ ಗಳನ್ನು ಹೊರಡಿಸಲಾಗಿರುತ್ತದೆ. 5 ಪ್ರಕರಣಗಳಲ್ಲಿ ನ್ಯಾಯಾಲಯವು ಎಲ್.ಪಿ.ಸಿ ಎಂದು ಘೋಷಿಸಿದೆ.
2017 ನೇ ಇಸವಿಯಲ್ಲಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತನು ತನ್ನ ಸಹಚರರೊಂದಿಗೆ ಸೇರಿಕೊಂಡು ಲೆಕ್ಕಿ ಸಹ್ವಾನ್ ಎಂಬಾತನನ್ನು ಅಪಹರಿಸಿ ಹಲ್ಲೆ ನಡೆಸಿ, ಕೊಲೆ ಮಾಡಿ ಆಗುಂಬೆ ಘಾಟಿಯಲ್ಲಿ ಎಸೆದ ಪ್ರಕರಣದಲ್ಲಿ ನೇರ ಭಾಗಿಯಾಗಿ ಬಳಿಕ ದಸ್ತಗಿರಿಗೆ ಸಿಗದೇ ತಲೆಮರೆಸಿಕೊಂಡಿದ್ದನು. ಬಳಿಕ ಆಂದ್ರಪ್ರದೇಶದ ರಾಯ್ ಚೋಟೆ ಪ್ರದೇಶದಲ್ಲಿ ತನ್ನ ಹೆಸರನ್ನು, ಉಮ್ಮರ್ ಮೊಹಮ್ಮದ್ ನಾಸಿರ್ ಎಂದು ಬದಲಿಸಿ, ನಕಲಿ ಹೆಸರಿನಲ್ಲಿ ಆಧಾರ್ ಕಾರ್ಡ್, ಪಾಸ್ ಪೋರ್ಟ್ ಮಾಡಿಸಿಕೊಂಡು, 2018 ರಿಂದ ವಿದೇಶಕ್ಕೆ ಪರಾರಿಯಾಗಿ ತಲೆಮರೆಸಿಕೊಂಡಿದ್ದನು. ವಿದೇಶಗಳಲ್ಲಿನ ಮಂಗಳೂರು ಮೂಲದ ವಾಪಾರಸ್ಥರುಗಳಿಗೆ ಸಹ ಬಲ ಹಣ ಮಾಡಿದ ಬಗ್ಗೆ ದೂರು ದಾಖಲಾಗಿರುತ್ತದೆ.
ಆರೋಪಿ ಸಪ್ತಾನ್ ಹುಸೈನ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಅಂದ್ರಪ್ರದೇಶ ರಾಯಚೋಟೆಯಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮುಲ್ಕಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು, ಆರೋಪಿ ಸಬ್ಬಾನ್ ಹುಸೈನ್ ಗೆ ತಲೆಮರೆಸಿಕೊಳ್ಳಲು. ನಕಲಿ ದಾಖಲೆ, ಪಾಸ್ ಪೋರ್ಟ್ ತಯಾರಿಸಲು ಸಹಕರಿಸಿದ ಮತ್ತು ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಪತ್ತೆಮಾಡಿ ತನಿಖೆಗೆ ಒಳಪಡಿಸಲಾಗುವುದು ಹಾಗೂ ಕಾನೂನು ಕ್ರಮ ಜರುಗಿಸಲಾಗುವುದು.
Discover more from Coastal Times Kannada
Subscribe to get the latest posts sent to your email.







Discussion about this post