ಮಂಗಳೂರು, ಮಾ.18: ನಗರದ ನಂತೂರು ಸರ್ಕಲ್ ನಲ್ಲಿ ಇಂದು 12 ಗಂಟೆ ವೇಳೆಗೆ ಭೀಕರ ಅಪಘಾತ ನಡೆದಿದ್ದು ಆಕ್ಟಿವಾ ಸ್ಕೂಟರಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ತಂದೆ- ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.



ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಟಿಪ್ಟರ್ ಚಾಲಕನ ಅಜಾಗರೂಕತೆಯ ಚಾಲನೆಗೆ ರೊಚ್ಚಿಗೆದ್ದ ಸ್ಥಳದಲ್ಲಿದ್ದವರು ಚಾಲಕನಿಗೆ ಹೆಲ್ಮೆಟ್ ಸೇರಿದಂತೆ ಕೈಗೆ ಸಿಕ್ಕ ವಸ್ತುವಿನಿಂದ ಹಲ್ಲೆ ನಡೆಸಿದ್ದಾರೆ.


ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದು ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ. ನಂತೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರು ಲಾರಿ ಚಾಲಕನನ್ನು ಆಕ್ರೋಶಿತರ ಕೈಯಿಂದ ರಕ್ಷಿಸಿ ವಶಕ್ಕೆ ಪಡೆದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕದ್ರಿ ಸಂಚಾರ ಠಾಣೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಲಾರಿ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post