• About us
  • Contact us
  • Disclaimer
Friday, July 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

Coastal Times by Coastal Times
March 18, 2026
in ಕರಾವಳಿ
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್
31
VIEWS
WhatsappTelegramShare on FacebookShare on Twitter

ಮಂಗಳೂರು, ಮಾ.17: ಮೂಡುಬಿದಿರೆಯ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ . ಅವರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದನ್ನು ಆಡಿಯೋ ಮತ್ತು ವಿಡಿಯೋಗಳು ದೃಢಪಡಿಸುವುದರಿಂದ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಇನ್ ಸ್ಪೆಕ್ಟರ್ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಉತ್ತರ ಉಪವಿಭಾಗ (ಪಣಂಬೂರು)ದ ಎಸಿಪಿಗೆ ಸೂಚಿಸಿದ್ದರು. ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಅವರು ನೀಡಿರುವ ತನಿಖಾ ವರದಿಯನ್ನು ಆಧರಿಸಿ ಇನ್ಸ್‌ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ಇನ್ಸ್ ಪೆಕ್ಟರ್ ಬಗ್ಗೆ ಆರೋಪ ಮಾಡಿರುವ ಸುಮತಿ ನಾಯ್ಕ್ ಮತ್ತು ಅವರ ಅಕ್ಕನ ವಿಚಾರದಲ್ಲಿ ಕೌಟುಂಬಿಕ ಕಲಹದ ಬಗ್ಗೆ ಪ್ರತ್ಯೇಕ ನಾಲ್ಕು ಕೇಸು ದಾಖಲಾಗಿದೆ. ಈ ಪೈಕಿ ಒಂದು ಕೇಸು ತನಿಖಾ ಹಂತದಲ್ಲಿದ್ದು ಇತರ ಮೂರು ಕೇಸುಗಳು ಹೈಕೋರ್ಟ್ ನಲ್ಲಿ ಸ್ಟೇಯಾಗಿದೆ. ಅವಿತಾ ಮಿನೇಜಸ್ ಎಂಬ ಮತ್ತೊಬ್ಬ ಮಹಿಳೆ ಮಾಧ್ಯಮಕ್ಕೆ ಆರೋಪ ಮಾಡಿದ್ದು ಆಕೆಯ ಗಂಡನ ಬಗ್ಗೆ ನಾಲ್ಕು ಕೇಸು ಮೂಡುಬಿದ್ರೆಯಲ್ಲಿ ದಾಖಲಾಗಿದೆ. ಒಂದರಲ್ಲಿ ಬಡ ಕುಟುಂಬದ ಕಿಡ್ನಿ ಚಿಕಿತ್ಸೆಗೆಂದು ಹಣ ಸಂಗ್ರಹಿಸಿದ ವಿಚಾರದಲ್ಲಿ ದಂಪತಿ ವಿರುದ್ಧ ಕೇಸು ದಾಖಲಾಗಿದ್ದು ಇನ್ಸ್ ಪೆಕ್ಟರ್ ಸಾಕ್ಷ್ಯ ಸಂಗ್ರಹಿಸಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ವೇಳೆ, ಆಕೆಗೆ ಇನ್ಸ್ ಪೆಕ್ಟರ್ ಕಿರುಕುಳ ನೀಡಿದ್ದಾರೆಂಬ ವಿಚಾರದಲ್ಲಿ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಈ ಸಂದರ್ಭದಲ್ಲಿ ಜೊತೆಗಿದ್ದ ಇಬ್ಬರು ಮೀಡಿಯಾದವರು ಮತ್ತು ಒಬ್ಬರು ವಕೀಲರನ್ನು ಪ್ರಶ್ನಿಸಿದ್ದು ಹಣ ಕೇಳಿರುವುದು ಮತ್ತು ಲೈಂಗಿಕ ಕಿರುಕುಳದ ಆರೋಪವನ್ನು ನಿರಾಕರಿಸಿದ್ದಾರೆ.

ಲಭ್ಯವಿರುವ ವಿಡಿಯೋ ಮತ್ತು ಆಡಿಯೋದಲ್ಲಿ ಇನ್ಸ್‌ಪೆಕ್ಟರ್ ಅವರು ಸಂಶಯಾಸ್ಪದ ರೀತಿಯಲ್ಲಿ ವರ್ತಿಸಿರುವುದು ಹಾಗೂ ಮಹಿಳೆಯೊಬ್ಬರ ಜೊತೆ ಪೋನ್‌ನಲ್ಲಿ ಅತ್ಯಂತ ಅಸಭ್ಯವಾಗಿ ಮಾತನಾಡಿರುವುದು ಕಂಡುಬಂದಿದೆ. ಆಡಿಯೋ ಮತ್ತು ವಿಡಿಯೋದಲ್ಲಿರುವ ಇಬ್ಬರೂ ಮಹಿಳೆಯರು ದೂರು ನೀಡಲು ನಿರಾಕರಿಸಿದ್ದಾರೆ. ಅವರು ಬಯಸಿದಲ್ಲಿ ಮುಂದಿನ ದಿನಗಳಲ್ಲಿ ಹೇಳಿಕೆ ನೀಡಬಹುದು ಎಂದು ಅವರಿಗೆ ತಿಳಿಸಲಾಗಿದೆ ಎಂದು ಪೊಲೀಸ್ ಆಯಕ್ತರು ಸ್ಪಷ್ಟನೆ ನೀಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

Next Post

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

Related Posts

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ
ಕರಾವಳಿ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
13
16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026
ಕರಾವಳಿ

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026

July 31, 2026
6
Next Post
ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

Discussion about this post

Recent News

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
13
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
80
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

July 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d