ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾರ್ ಕಣ್ಣೂ ರಿನ ಶಾ ಗಾರ್ಡನ್‌ನಲ್ಲಿ ಎ.18ರಂದು ಪ್ರತಿಭಟನಾ ಸಮಾವೇಶ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದ.ಕ ಮತ್ತು ಉಡುಪಿ ಜಿಲ್ಲಾಖಾಝಿಗಳ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಮಧ್ಯಾಹ್ನ 3 ಕ್ಕೆ ಕಣ್ಣೂರು ದರ್ಗಾ ಝಿಯಾರತ್ ನಡೆಯಲಿದೆ. ಸಂಜೆ 4ಕ್ಕೆ ಸಭಾ ಕಾರ್ಯ ಕ್ರಮ ನಡೆಯಲಿದೆ.
ಬೈಕ್ ರ್ಯಾಲಿ, ಯಾವುದೇ ಸಂಘಟನೆಯ ಅಥವಾ ಹಸಿರು ಬಾವುಟ, ಘೋಷಣೆಗಳಿಗೆ ನಿಷೇಧವಿದೆ. ಪ್ರಚೋದನಕಾರಿ ಭಾಷಣಗಳಿಗೆ ಅವಕಾಶ ಇಲ್ಲ ಎಂದರು. ಡಾ|ಎಂ.ಎಸ್.ಎಂ. ಝೈನಿ ಕಾಮಿಲ್ ಮಾತನಾಡಿ, ಭಾರತದ ರಾಷ್ಟ್ರಧ್ವಜ ಕಟ್ಟಿಕೊಂಡು ಬರುವ ವಾಹನಗಳಿಗೆ ಪ್ರವೇಶವಿದೆ. ಸಮಾವೇಶಕ್ಕೆ ಬರಲು ಪಂಪ್‌ವೆಲ್ ಮತ್ತು ಬಿ.ಸಿ.ರೋಡ್‌ನಿಂದ ವಾಹನದ ವ್ಯವಸ್ಥೆ ಮಾಡಲಾಗಿದೆ ಎಂದರು.
ಯು.ಕೆ. ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು ಮಾತನಾಡಿ, ವಕ್ಫ್ ಬಗ್ಗೆ ಜನರಲ್ಲಿ ತಪ್ಪುಭಾವನೆ ಮೂಡಿಸುವ ಪ್ರಯತ್ನ ನಡೆದಿದ್ದು, ಅದನ್ನು ಹೋಗಲಾಡಿಸಲು ಪ್ರಯತ್ನಿಸಲಾಗುವು ದು ಎಂದರು. ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ, ಖಾಸಿಂ ದಾರಿಮಿ ಕಿನ್ಯ ಮತ್ತಿತರರಿದ್ದರು.
ಪೊಲೀಸರಿಂದ ಹಲವೆಡೆ ಬಿಗು ಭದ್ರತೆ : ಪ್ರತಿಭಟನಾ ಸಮಾವೇಶದ ಹಿನ್ನೆಲೆಯಲ್ಲಿ ಪೊಲೀಸ್ ಬಿಗು ಭದ್ರತೆ ಕೈಗೊಳ್ಳಲಾಗಿದೆ. ಗುರುವಾರ ಸಂಜೆಯಿಂದಲೇ ಸಮಾವೇಶ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಸುರತ್ಕಲ್‌ನಲ್ಲೂ ಬಿಗು ಭದ್ರತೆ ಕೈಗೊಳ್ಳಲಾಗಿದೆ.
ರಾ.ಹೆ.73ರಲ್ಲಿ ವಾಹನ ದಟ್ಟನೆ ಉಂಟಾಗುವ ಸಾಧ್ಯತೆಯಿದ್ದು, ಸುಗಮ ಸಂಚಾರ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ ಸ್ಥಳೀಯ, ತುರ್ತು ಹಾಗೂ ಅಗತ್ಯ ವಾಹನಗಳನ್ನು ಹೊರತು ಪಡಿಸಿ ಇತರ ವಾಹನಗಳನ್ನು ಮಾರ್ಗಗಳನ್ನು ಬದಲಾಯಿಸಿ ಸಂಚರಿಸಲು ಈಗಾಗಲೇ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.
ಯಾವುದೇ ಕಾರಣಕ್ಕೂ ಹೆದ್ದಾರಿ ಬಂದ್ ಮಾಡುವಂತಿಲ್ಲ ! : ಈ ಬಗ್ಗೆ ಎಪ್ರಿಲ್ 17ರಂದು ತುರ್ತಾಗಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಮುಂದೆ ರಿಟ್ ಅರ್ಜಿ ಸಲ್ಲಿಸಿದ್ದಲ್ಲದೆ, ಪೊಲೀಸ್ ಕಮಿಷನರ್ ಹೊರಡಿಸಿದ್ದ ಸಂಚಾರ ನಿರ್ಬಂಧ ಆದೇಶವನ್ನು ಪ್ರಶ್ನಿಸಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನ್ಯಾಯಾಧೀಶ ನಾಗಪ್ರಸನ್ನ, ಈಗಾಗಲೇ ವಕ್ಫ್ ತಿದ್ದುಪಡಿ ಕಾಯ್ದೆ ವಿಚಾರ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆಯಲ್ಲಿದೆ. ಇಂತಹ ಸಂದರ್ಭದಲ್ಲಿ ಪ್ರತಿಭಟನೆ ಸಲ್ಲಿಸುವುದಕ್ಕೆ ಸರಕಾರಗಳು ಅವಕಾಶ ನೀಡಬಾರದು. ಹಾಗಿದ್ದರೂ ಪ್ರತಿಭಟನೆ ಮಾಡುವುದಿದ್ದರೆ ಸರಕಾರ ಸೂಚಿಸಿದ ಸ್ಥಳದಲ್ಲಿ ಮಾತ್ರ ಇರಬೇಕು. ಅದರ ನೆಪದಲ್ಲಿ ಹೆದ್ದಾರಿ ಬಂದ್ ಮಾಡುವುದಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ.
ಪ್ರತಿಭಟನೆ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗಬಾರದು. ಅಲ್ಲದೆ, ಈ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಸರಕಾರಗಳು ಪರಿಗಣಿಸಬೇಕು. ಅಲ್ಲದೆ, ಸರಕಾರ ಅವಕಾಶ ನೀಡಿದ್ದರೆ ಮಾತ್ರ ಪ್ರತಿಭಟನೆ ಸಲ್ಲಿಸಬಹುದು. ಅವಕಾಶ ನೀಡದೇ ಇದ್ದರೆ ಪ್ರತಿಭಟನೆ ನಡೆಸುವಂತಿಲ್ಲ. ಹಾಗಂತ, ರಸ್ತೆಗಳನ್ನು ಬ್ಲಾಕ್ ಮಾಡುವುದಕ್ಕೆ ಅವಕಾಶ ನೀಡಬಾರದು ಎಂದು ನ್ಯಾಯಾಧೀಶರು ಈ ಕುರಿತು ನೀಡಿರುವ ಮಧ್ಯಂತರ ಆದೇಶದಲ್ಲಿ ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post