ನವದೆಹಲಿ: ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ಜೋಡಣೆಗೆ ನೀಡಲಾಗಿದ್ದ ಗಡುವನ್ನು ಕೇಂದ್ರ ಸರ್ಕಾರ 2022ರ ಮಾರ್ಚ್‌ವರೆಗೂ ವಿಸ್ತರಣೆ ಮಾಡಿದೆ.
ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದಾಗಿ ಆಧಾರ್ ಕಾರ್ಡ್-ಪ್ಯಾನ್ ಜೋಡಣೆಗೆ ನೀಡಲಾಗಿದ್ದ ಗಡುವು ವಿಸ್ತರಣೆಗೆ ತೆರಿಗೆದಾರರಿಂದ ಮನವಿ ಬಂದಿದ್ದರಿಂದ ಗಡುವು ವಿಸ್ತರಣೆ ಮಾಡಲಾಗಿದೆ ಕೇಂದ್ರೀಯ ನೇರ ತೆರಿಗೆ ಮಂಡಳಿ(ಸಿಬಿಡಿಟಿ) ಹೇಳಿದೆ.
ಅಲ್ಲದೆ, ಐ-ಟಿ ಕಾಯಿದೆಯಡಿ ದಂಡ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 30, 2021 ರಿಂದ ಮಾರ್ಚ್ 31, 2022 ರವರೆಗೆ ವಿಸ್ತರಿಸಲಾಗಿದೆ.
ಬೇನಾಮಿ ಆಸ್ತಿ ವಹಿವಾಟು ನಿಷೇಧ ಕಾಯ್ದೆ 1988ರ ಅಡಿಯಲ್ಲಿ ಅಧಿಸೂಚನೆ ಪ್ರಾಧಿಕಾರದಿಂದ ಸೂಚನೆ ನೀಡುವ ಮತ್ತು ಆದೇಶವನ್ನು ರವಾನಿಸುವ ಸಮಯದ ಮಿತಿಯನ್ನು ಮಾರ್ಚ್ 2022 ಕ್ಕೆ ವಿಸ್ತರಿಸಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post