ಮೂಡುಬಿದಿರೆ: ‘ನಂಜನಗೂಡು ದೇವಸ್ಥಾನ ತೆರವು ವಿಚಾರದಲ್ಲಿ ಅಧಿಕಾರಿಗಳು ತಪ್ಪು ಹೆಜ್ಜೆ ಇಟ್ಟಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
‘ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಕ್ಷೇತ್ರಗಳು ಮತ್ತು ಧರ್ಮದ ರಕ್ಷಣೆಗೆ ಬದ್ಧವಾಗಿದೆ. ನಂಜನಗೂಡಿನಲ್ಲಿ ಕೆಡವಲಾದ ದೇವಸ್ಥಾನದ ಮರು ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸಿದೆ’ ಎಂದು ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ತಿಳಿಸಿದರು.
‘ಸುಪ್ರೀಂ ಕೋರ್ಟ್ ಆದೇಶ ಪಾಲನೆಗಾಗಿ ಅಧಿಕಾರಿಗಳು ಈ ರೀತಿ ಮಾಡಿದ್ದಾರೆ. ದೇವಸ್ಥಾನ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಈಗಾಗಲೇ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ದೇವಾಲಯಗಳನ್ನು ಉಳಿಸಲು ಕಾನೂನು ಹೋರಾಟ ಕೈಗೊಳ್ಳುವ ವಿಚಾರವಾಗಿ ಪಕ್ಷದ ಸಭೆ ಹಾಗೂ ಶಾಸಕಾಂಗ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ನಳಿನ್ ಕುಮಾರ್ ಹೇಳಿದರು.