ಬಂಟ್ವಾಳ, ಸೆ 18 : ಬಂಟ್ವಾಳ ನಗರ ಠಾಣೆಯ ಪೋಲೀಸರು ಭರ್ಜರಿ ಬೇಟೆಯಾಡಿ, ಹಗಲು ವೇಳೆ ಮನೆಗೆ ನುಗ್ಗಿ ಕಳವು ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಕಸಬಾ ಬೇಂಗ್ರೆ ನಿವಾಸಿ ಮಹಮ್ಮದ್ ಆಯುಬು ಅವರ ಮಗ ಫರಾಜ್(27) ಹಾಗೂ ಸುರತ್ಕಲ್ ತಾಲೂಕು ಚೊಕ್ಕಬೆಟ್ಟು, ಕೃಷ್ಣಪುರ 8- 36 ಸೈಟ್ ನಂ 37, 4ನೇ ಬ್ಲಾಕ್ ನಿವಾಸಿ ಅಬ್ಬಾಸ್ ಅವರ ಮಗ ತೌಸಿಫ್ ಅಹಮ್ಮದ್ (34) ಬಂಧಿತರು.
ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣದ ಆರೋಪಿಗಳಿಂದ ಒಟ್ಟು ರೂ. 12,23,000 ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಕಾರು ಮತ್ತು ದ್ವಿಚಕ್ರ ವಾಹನ ಸೇರಿದಂತೆ ಒಟ್ಟು 15,56,000 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ದೇವಮಾತ ಕಾಂಪ್ಲೆಕ್ಸ್ ನಲ್ಲಿ ವಾಸವಿರುವ ಮೈಕಲ್ ಡಿಸೋಜಾ ಎಂಬವರ ಮನೆಯ ಎದುರಿನ ಬಾಗಿಲಿನ ಡೋರನ್ನು ಸೆ. 01 ರಂದು ಕಳ್ಳರು ಮುರಿದು ಒಳ ಪ್ರವೇಶಿಸಿ ಮನೆಯ ಕೋಣೆಯೊಳಗಿದ್ದ ಗೋಡ್ರೆಜ್ ಗಳ ಬಾಗಿಲುಗಳನ್ನು ಮುರಿದು ಒಟ್ಟು 115 ಗ್ರಾಂ ತೂಕದ ಸುಮಾರು 5,36,000/- ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಸುಮಾರು 3,000/- ರೂಪಾಯಿ ಮೌಲ್ಯದ ಬೆಳ್ಳಿಯ ಸಾಮಾಗ್ರಿಯನ್ನು ಕಳವು ಮಾಡಿದ ಘಟನೆ ನಡೆದಿತ್ತು.
ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಕಳವಾದ ಸೊತ್ತುಗಳನ್ನು ಪತ್ತೆಮಾಡಿಕೊಡಬೇಕಾಗಿ ಕೋರಿ ಮೈಕಲ್ ಡಿಸೋಜಾ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್ ಅವರ ನಿರ್ದೇಶನದಂತೆ ಇನ್ಸ್ ಪೆಕ್ಟರ್ ನಾಗರಾಜ್ ನೇತೃತ್ವದಲ್ಲಿ ಎಸ್.ಐ.ರಾಮಕೃಷ್ಣ ಅವರ ತಂಡವನ್ನು ರಚಿಸಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದರು. ಕೆಲವೊಂದು ಸಂಶಯಗಳ ಮೇಲೆ ಕಳ್ಳರ ಜಾಲನ್ನು ಹಿಡಿದು ರಾಮಕೃಷ್ಣ ಅವರ ತಂಡ ಕಳ್ಳರ ಪತ್ತೆಗಾಗಿ ಅವಿರತವಾದ ಶ್ರಮವಹಿಸಿ ಕೊನೆಗೂ ಕಳವು ಆರೋಪಿಗಳ ಹೆಡೆಮುರಿಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ಪತ್ತೆ ಕಾರ್ಯದಲ್ಲಿ ಎಸ್.ಪಿ. ಸಿ.ಬಿ ರಿಷ್ಯಂತ್, ಹೆಚ್ಚುವರಿ ಎಸ್.ಪಿ. ಧರ್ಮಪ್ಪ ಎನ್. ಎಂ, ಡಿ.ವೈ.ಎಸ್.ಪಿ. ಪ್ರತಾಪ್ ಸಿಂಗ್ ಥೋರಾಟ್ ನಿರ್ದೇಶನದಂತೆ ಪೋಲಿಸ್ ಇನ್ಸ್ ಪೆಕ್ಟರ್ ನಾಗರಾಜ್ ಹೆಚ್. ಇ. ಅವರ ನೇತ್ರತ್ವದಲ್ಲಿ ಬಂಟ್ವಾಳ ನಗರ ಠಾಣೆಯ ಎಸ್.ಐ.ರಾಮಕೃಷ್ಣ ಅಪರಾಧ ವಿಭಾಗದ ಎಸ್.ಐ ಕಲೈಮಾರ್, ಎ. ಎಸ್. ಐ ನಾರಾಯಣ, ಹೆಡ್ ಕಾನ್ಸ್ ಸ್ಟೇಬಲ್ ಗಳಾದ ಇರ್ಷಾದ್ ಪಿ. ರಾಜೇಶ್, ಮನೋಹರ, ಸಿಬ್ಬಂದಿಗಳಾದ ಉಮೇಶ್ ಹಿರೇಮಠ, ರಂಗನಾಥ್ ಆರೋಪಿ ಹಾಗೂ ಜಿಲ್ಲಾ ಬೆರಳಚ್ಚು ಘಟಕದ ಸಚಿನ್ ಮತ್ತು ಉದಯ ಹಾಗೂ ಜಿಲ್ಲಾ ಗಣಕಯಂತ್ರ ಕೇಂದ್ರದ ದಿವಾಕರ ಮತ್ತು ಸಂಪತ್ರವರು ಆರೋಪಿ ಪತ್ತೆ ಬಗ್ಗೆ ಸಹಕರಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post