• About us
  • Contact us
  • Disclaimer
Thursday, February 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸೆ.20ರಂದು ರಾಜ್ಯಾದ್ಯಂತ “ಪಯಣ್ʼ ಕೊಂಕಣಿ ಚಲನಚಿತ್ರ ತೆರೆಗೆ

Coastal Times by Coastal Times
September 18, 2024
in ಸಿನಿಮಾ
ಸೆ.20ರಂದು ರಾಜ್ಯಾದ್ಯಂತ “ಪಯಣ್ʼ ಕೊಂಕಣಿ ಚಲನಚಿತ್ರ ತೆರೆಗೆ
10
VIEWS
WhatsappTelegramShare on FacebookShare on Twitter

ಮಂಗಳೂರು: ʻಸಂಗೀತ್ ಘರ್, ಮಂಗಳೂರುʼ ಬ್ಯಾನರ್ನಡಿಯಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಸೆ. 20ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಮುಹೂರ್ತದಿಂದಲೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟೀಜರ್ ಬಿಡುಗಡೆಯಾದದ್ದೇ ಕೊಂಕಣಿ ಚಲನಚಿತ್ರ ಪ್ರೇಮಿಗಳಿಂದ ಪ್ರಸಂಶೆಯ ಸುರಿಮಳೆ ಹರಿದು ಬಂದಿತ್ತು. ಚಲನಚಿತ್ರದ ಟ್ರೇಲರ್‌ಗೂ ಜನರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ದೊರಕಿತ್ತು. ಈಗಾಗಲೇ ಮಂಗಳೂರು ಮತ್ತು ಪುತ್ತೂರಿನಲ್ಲಿ ಪ್ರೀಮಿಯರ್ ಶೋಗಳು ಹೌಸ್ಫುಲ್ ಪ್ರದರ್ಶನ ಕಂಡಿವೆ ಮತ್ತು ವೀಕ್ಷಕರಿಂದ ಕೊಂಕಣಿ ಚಲನಚಿತ್ರದ ಇತಿಹಾಸದಲ್ಲಿ ʻಪಯಣ್ʼ ಒಂದು ಮೈಲಿಗಲ್ಲು ಎಂದು ಪ್ರಶಂಸೆಗೊಳಪಟ್ಟಿದೆ.

ಶ್ರೀಮತಿ ನೀಟಾ ಜೊನ್ ಪೆರಿಸ್ ಈ ಚಿತ್ರದ ನಿರ್ಮಾಪಕರಾಗಿದ್ದಾರೆ. ಪಯಣ್ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕ ಜೊಯೆಲ್ ಪಿರೇರಾ ಬರೆದಿದ್ದು, ಸಾಹಿತ್ಯ ಮೆಲ್ವಿನ್ ಪೆರಿಸ್, ಸಂಗೀತ ನಿರ್ದೇಶನ ರೋಶನ್ ಡಿʼಸೋಜಾ ಆಂಜೆಲೊರ್. ಪುತ್ತೂರಿನ ಯುವ ಪ್ರತಿಭೆ ಬ್ರಾಯನ್ ಸಿಕ್ವೇರಾ ನಾಯಕನಾಗಿ ಹಾಗೂ ಜಾಸ್ಮಿನ್ ಡಿʼಸೋಜಾ, ಕೇಟ್ ಪಿರೇರಾ ಮತ್ತು ಶೈನಾ ಡಿʼಸೋಜ, ನಾಯಕಿಯರಾಗಿ ನಟಿಸಿದ್ದಾರೆ. ನಟರಾದ ರೈನಲ್ ಸಿಕ್ವೇರಾ, ಲೆಸ್ಲಿ ರೇಗೊ, ಜೆರಿ ರಸ್ಕಿನ್ಹಾ, ವಾಲ್ಟರ್ ನಂದಳಿಕೆ, ಜೀವನ್ ವಾಸ್, ಜೊಸ್ಸಿ ರೇಗೊ, ಮೆಲಿಶಾ ಪಿಂಟೊ ಮುಖ್ಯ ಭೂಮಿಕೆಯಲ್ಲಿದ್ದಾರೆ. ಛಾಯಾಗ್ರಹಣ ವಿ. ರಾಮಾಂಜನೆಯ ಮತ್ತು ಸಂಕಲನ ಮೆವಿನ್ ಜೊಯೆಲ್ ಪಿಂಟೊ, ಶಿರ್ತಾಡಿ ಇವರದ್ದು. ಮಂಗಳೂರು, ಉಡುಪಿ ಸುತ್ತಮುತ್ತಲ ಪ್ರದೇಶಗಳಲ್ಲಿ ಪಯಣ್ ಚಿತ್ರೀಕರಣ ನಡೆಸಲಾಗಿದೆ.

ಸೆ. 20ರಂದು ಮಂಗಳೂರು, ಸುರತ್ಕಲ್, ಪಡುಬಿದ್ರಿ, ಉಡುಪಿ, ಕುಂದಾಪುರ ಹಾಗೂ ಪುತ್ತೂರಿನಲ್ಲಿ ಏಕಕಾಲದಲ್ಲಿ ಪಯಣ್ ಬಿಡುಗಡೆಯಾಗಲಿದೆ. ಈಗಾಗಲೇ ಮುಂಬಯಿ ಹಾಗೂ ಗಲ್ಫ್ ದೇಶಗಳಲ್ಲಿ ಬಿಡುಗಡೆಯಾಗುವ ದಿನಾಂಕಗಳು ನಿಗದಿಯಾಗಿವೆ.

ಪಯಣ್… ಜೀವನದ ನಿಜವಾದ ಸಾಮರಸ್ಯಕ್ಕೆ ಸಂಗೀತ ಕಲೆಯ ನಿಪುಣತೆಗಿಂತಲೂ ಹೆಚ್ಚಿನದ್ದು ಬೇಕು ಎಂಬುದನ್ನು ಕಂಡುಹಿಡಿಯುವ ಸಂಗೀತಗಾರನ ಹೋರಾಟದ ಪ್ರಯಾಣ ಕಥೆ. ಅವರು ಸಂಗೀತ ಉದ್ಯಮದ ಸವಾಲುಗಳನ್ನು ಎದುರಿಸಿ ಮುನ್ನಡೆಯುವಾಗ – ವೈಯಕ್ತಿಕ ಪೈಶಾಚಿಕತೆಯನ್ನು ಎದುರಿಸುವುದರೊಂದಿಗೆ ವಂಚನೆ ಮತ್ತು ಅನಿರೀಕ್ಷಿತ ಜಾಲಗಳನ್ನು ಎದುರಿಸುತ್ತಾರೆ. ಸಂಗೀತ ಕ್ಷೇತ್ರದಲ್ಲಿ ಪಡಿಯಚ್ಚನ್ನು ಒತ್ತಿ, ತನ್ನ ಹಿಂದೆ ಪರಂಪರೆಯೊಂದನ್ನು ಬಿಟ್ಟು ಹೋಗುವ ಬಯಕೆಯಿಂದ ಪ್ರೇರೇಪಿಸಲ್ಪಟ್ಟ ಅವರು ತನ್ನ ಸಂಗೀತ ಜೀವನದಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಕೇಂದ್ರಬಿಂದುವಾಗಿಸಿದ ಕಥೆಯೇ ಪಯಣ್.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಮಹಿಳೆಯರೊಂದಿಗೆ ಸ್ನೇಹದ ನಾಟಕವಾಡಿ ಚಿನ್ನಾಭರಣ ದೋಚುತ್ತಿದ್ದ ಕಳ್ಳನ ಬಂಧನ

Next Post

ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಬರಲಿದೆ ಪೆಂಗ್ವಿನ್, ಹಳದಿ ‘ಅನಕೊಂಡ’

Related Posts

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
ಸಿನಿಮಾ

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

February 22, 2026
8
ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!
ಸಿನಿಮಾ

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

February 3, 2026
39
Next Post
ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಬರಲಿದೆ ಪೆಂಗ್ವಿನ್, ಹಳದಿ ‘ಅನಕೊಂಡ’

ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಬರಲಿದೆ ಪೆಂಗ್ವಿನ್, ಹಳದಿ ‘ಅನಕೊಂಡ’

Discussion about this post

Recent News

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
41
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
45
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d