ಮಂಗಳೂರು, ಸೆ.17 : ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ದೊರೆತಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘ಪ್ರಜಾಸೌಧ’ದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ತುಳು ಭಾಷೆಗೆ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ನೀಡುವ ಕುರಿತು ಸಂಪುಟ ತೆಗೆದುಕೊಂಡಿರುವ ತೀರ್ಮಾನವನ್ನು ಪ್ರಕಟಿಸಿದರು. ಈ ಕುರಿತು ಮಾಧ್ಯಮಕ್ಕೆ ನೀಡಿರುವ ಪ್ರತಿಯಲ್ಲಿ ಕರ್ನಾಟಕದಲ್ಲಿ ಕನ್ನಡದ ಜೊತೆಗೆ ತುಳು ಭಾಷೆಯನ್ನು ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಿಸಲು ಸಂಪುಟ ಸಭೆ ಅನುಮೋದನೆ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯವಾಗುವಂತೆ ಘೋಷಣೆ ಮಾಡಲು ತೀರ್ಮಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತವನ್ನು ಅನುಷ್ಠಾನ ಕೇಂದ್ರವಾಗಿ ಮಾಡಲಾಗುವುದು.

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದೆಂದು ಪರಿಗಣಿಸಲಾಗುವ ತುಳು ಪ್ರಾಚೀನ ಪರಂಪರೆಯ ಜತೆಗೆ ಸಮೃದ್ಧ ಆಧುನಿಕ ಸಾಹಿತ್ಯವನ್ನೂ ಹೊಂದಿದೆ. ಕರ್ನಾಟಕದಲ್ಲಿ ಅಧಿಕೃತ ಭಾಷಾ ಸ್ಥಾನಮಾನ ದೊರೆಯುವುದರಿಂದ ತುಳುವನ್ನು ಭಾರತೀಯ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕೆಂಬ ಬೇಡಿಕೆಗೆ ಮತ್ತಷ್ಟು ಬಲ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಭಾಷ ಬಳಕೆ ಹಾಗೂ ಅಭಿವೃದ್ದಿಗೆ ಸಂಬಂಧಿತ ಚಟುವಟಿಕೆಗಳಿಗಾಗಿ ಪ್ರತಿವರ್ಷ 82 ಲಕ್ಷ ರೂ. ಅನುದಾನವನ್ನೂ ಘೋಷಿಸಲಾಗಿದೆ. ಕರಾವಳಿ ಕರ್ನಾಟಕದ ಅಭಿವೃದ್ದಿಗೆ 32.600 ಕೋಟಿ ರೂ ಮೀಸಲಿಡಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದರು. 16, 00 ಕೋಟಿ ರೂ. ರಸ್ತೆ ಅಭಿವೃದ್ದಿಗೆ ಮತ್ತು 16, 000 ಕೋಟಿ ರೂ. ಕರಾವಳ ಅಭಿವೃದ್ದಿಗೆ ನಿಧಿ ನೀಡಲಾಗುವುದು ಎಂದರು. ಮಲೆನಾಡು ಮತ್ತು ಕರಾವಳಿಗೆ ಪ್ರತ್ಯೇಕ ಟೂರಿಸಂ ಪಾಲಿಸಿ ಮಾಡುತ್ತೇವೆ ಎಂದರು.
Discover more from Coastal Times Kannada
Subscribe to get the latest posts sent to your email.







Discussion about this post