• About us
  • Contact us
  • Disclaimer
Friday, March 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಂಗಭೂಮಿ, ಸಿನಿಮಾ ಮತ್ತು ಕಿರುತೆರೆಯ ಹಿರಿಯ ನಟ ಶಂಕರ್ ರಾವ್ ನಿಧನ

Coastal Times by Coastal Times
October 18, 2021
in ಸಿನಿಮಾ
ರಂಗಭೂಮಿ, ಸಿನಿಮಾ ಮತ್ತು ಕಿರುತೆರೆಯ ಹಿರಿಯ ನಟ ಶಂಕರ್ ರಾವ್ ನಿಧನ
3
VIEWS
WhatsappTelegramShare on FacebookShare on Twitter

ಬೆಂಗಳೂರು: ರಂಗಭೂಮಿ, ಸಿನಿಮಾ ಮತ್ತು ಕಿರುತೆರೆಯ ಹಿರಿಯ ನಟ ಶಂಕರ್ ರಾವ್ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ವಯೋಸಹಜ ಆನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಬೆಂಗಳೂರಿನ ಅರಕೆರೆಯಲ್ಲಿನ ಸ್ವಗೃಹದಲ್ಲಿ ಇಂದು ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಮೂಲತಃ ಹವ್ಯಾಸಿ ರಂಗಭೂಮಿ ಕಲಾವಿದರಾದ ಶಂಕರ್ ರಾವ್‌ ನೂರಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಹತ್ತಾರು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. 1972 ರಿಂದ ಇತ್ತೀಚಿನವರೆಗೂ ಶಂಕರ್ ರಾವ್ ‘ನಟರಂಗ’ ರಂಗತಂಡದ ಸಕ್ರಿಯ ಕಲಾವಿದರಾಗಿದ್ದರು.

ಶಾಲಾ ದಿನಗಳಲ್ಲೇ ನಾಟಕಗಳತ್ತ ಆಕರ್ಷಿತರಾದ ಶಂಕರ್ ರಾವ್‌ ತಮ್ಮದೇ ‘ಗೆಳೆಯರ ಬಳಗ’ ರಂಗತಂಡ ಕಟ್ಟಿ ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. ಸಿಮ್ಸನ್ ಅಂಡ್ ಸಿಮ್ಸನ್‌ ಕಂಪನಿಯಲ್ಲಿ ನೌಕರಿ ಮಾಡುತ್ತಲೇ ‘ಕಲಾಕುಂಜ’, ‘ನಟರಂಗ’ ರಂಗತಂಡಗಳ ಮೂಲಕ ಹಲವು ನಾಟಕಗಳಲ್ಲಿ ನಟಿಸುತ್ತಾ ಬಂದರು. ‘ನಟರಂಗ’ದ ಬಹುತೇಕ ಎಲ್ಲಾ ನಾಟಕಗಳಲ್ಲಿ ಅವರು ಅಭಿನಯಿಸಿದ್ದಾರೆ. ಕಾಕನಕೋಟೆ, ತೊಘಲಕ್‌, ಮೃಚ್ಛಕಟಿಕ ಪೋಲಿ ಕಿಟ್ಟಿ.. ಅವರ ಕೆಲವು ಪ್ರಮುಖ ನಾಟಕಗಳು. ಎಂ.ಆರ್.ವಿಠಲ್ ನಿರ್ದೇಶನದ ‘ಯಾರ ಸಾಕ್ಷಿ?’ (1972) ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಶಂಕರ್‌ ರಾವ್‌ ಕಾಕನಕೋಟೆ, ಸಿಂಹಾಸನ, ಪುಟಾಣಿ ಏಜೆಂಟ್‌ 123, ಮೂಗನಸೇಡು, ಕಲ್ಯಾಣ ಮಂಟಪ.. ಸೇರಿದಂತೆ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಸೆಕೆಂಡ್‌ ಹ್ಯಾಂಡ್ ಸದಾಶಿವ, ಪಲ್ಲವಿ, ಫೊಟೋಗ್ರಾಫರ್ ಪರಮೇಶಿ, ಯಾಕಿಂಗಾಡ್ತಾರೋ, ಪಾಪ ಪಾಂಡು, ಸಿಲ್ಲಿಲಲ್ಲಿ.. ಅವರು ಅಭಿನಯಿಸಿರುವ ಕೆಲವು ಪ್ರಮುಖ ಧಾರಾವಾಹಿಗಳು. ಶಂಕರ್ ರಾವ್ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಪತ್ನಿ ಉಮಾ ಕಳೆದ ವರ್ಷ ನಿಧನರಾಗಿದ್ದರು. ಶಂಕರ್ ರಾವ್ ನಿಧನಕ್ಕೆ ರಂಗಭೂಮಿ, ಸಿನಿಮಾ ಮತ್ತು ಕಿರುತೆರೆ ಕ್ಷೇತ್ರದ ಹಲವರು ಕಂಬನಿ ಮಿಡಿದಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಕ್ರೈಸ್ತ ಧರ್ಮಪ್ರಾಂತ್ಯದ ” ಸಿನೊಡ್ – 2021-2023 ” ಲಾಂಛನ ಅನಾವರಣ

Next Post

ಅ.25ರಿಂದ 1 – 5ನೇ ಭೌತಿಕ ತರಗತಿಗಳು ಪುನಾರಂಭ: ಶಿಕ್ಷಣ ಸಚಿವ ಬಿಸಿ ನಾಗೇಶ್

Related Posts

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
ಸಿನಿಮಾ

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

February 22, 2026
9
ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!
ಸಿನಿಮಾ

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

February 3, 2026
39
Next Post
ಅ.25ರಿಂದ 1 – 5ನೇ ಭೌತಿಕ ತರಗತಿಗಳು ಪುನಾರಂಭ: ಶಿಕ್ಷಣ ಸಚಿವ ಬಿಸಿ ನಾಗೇಶ್

ಅ.25ರಿಂದ 1 - 5ನೇ ಭೌತಿಕ ತರಗತಿಗಳು ಪುನಾರಂಭ: ಶಿಕ್ಷಣ ಸಚಿವ ಬಿಸಿ ನಾಗೇಶ್

Discussion about this post

Recent News

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
59
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d