ತಮಿಳುನಾಡು : ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿನ ಪ್ರಕರಣದ ತನಿಖಾ ಸಮಿತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇನ್ನು, ತನಿಖಾ ಸಮಿತಿಯು ದಿವಂಗತ ಜಯಲಲಿತಾ ಆಪ್ತ ವಿಕೆ ಶಶಿಕಲಾ, ಮಾಜಿ ಆರೋಗ್ಯ ಸಚಿವ ಸಿ ವಿಜಯಭಾಸ್ಕರ್, ಮಾಜಿ ಆರೋಗ್ಯ ಕಾರ್ಯದರ್ಶಿ ಕೆ ರಾಧಾಕೃಷ್ಣನ್ ಮತ್ತು ಚಿಕಿತ್ಸೆ ನೇತೃತ್ವ ವಹಿಸಿದ್ದ ಡಾ ಶಿವಕುಮಾರ್ ವಿರುದ್ಧ ದೋಷಾರೋಪ ಹೊರಿಸಿದೆ. ಮಂಗಳವಾರ ತಮಿಳುನಾಡು ಸರ್ಕಾರವು ಜಯಲಲಿತಾ ಸಾವಿನ ಸುತ್ತಲಿನ ಸನ್ನಿವೇಶಗಳ ಕುರಿತು ತನಿಖಾ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ.

ವರದಿಯಲ್ಲಿ ಹಿಂದಿನ ಮುಖ್ಯಮಂತ್ರಿಯಾಗಿದ್ದವರು ಜಯಲಲಿತಾ ಅವರನ್ನು ವಿದೇಶಕ್ಕೆ ಯಾಕೆ ಚಿಕಿತ್ಸೆಗೆ ಒಯ್ಯಲಿಲ್ಲ ಎಂದು ಪ್ರಶ್ನೆ ಮಾಡಲಾಗಿದೆ. ಚಿಕಿತ್ಸೆ ನೀಡುತ್ತಿದ್ದ ಇಂಗ್ಲೆಂಡಿನ ವೈದ್ಯ ಡಾ.ರಿಚರ್ಡ್ ಬೀಲೆ ಅವರು ವಿದೇಶಕ್ಕೆ ಚಿಕಿತ್ಸೆ ಒಯ್ಯಲು ಶಿಫಾರಸು ಮಾಡಿದ್ದರೂ, ಸರಕಾರ ನಿರ್ಲಕ್ಷ್ಯ ವಹಿಸಿತ್ತು. ಇನ್ನೊಂದೆಡೆ, ರಾಜ್ಯ ಸರಕಾರದ ಅಹವಾಲಿನಂತೆ ಅಮೆರಿಕ ಮತ್ತು ಇಂಗ್ಲೆಂಡಿನ ಪರಿಣತ ವೈದ್ಯರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ಕರೆಸಲಾಗಿತ್ತು. ಆಂಜಿಯೋಪ್ಲಾಸ್ಟಿ ನಡೆಸುವುದಕ್ಕೆ ಸಿದ್ಧತೆ ನಡೆಸಿದ್ದರು. ಆದರೆ, ಕೊನೆ ಕ್ಷಣದಲ್ಲಿ ಆಂಜಿಯೋಪ್ಲಾಸ್ಟಿ ನಡೆಸದೆ ನಿರ್ಲಕ್ಷ್ಯ ಮಾಡಲಾಗಿತ್ತು. ಕೆಲವು ಸ್ಥಾಪಿತ ಹಿತಾಸಕ್ತಿಗಳ ಒತ್ತಡಕ್ಕೆ ಕಟ್ಟುಬಿದ್ದು ವೈದ್ಯರು ಶಸ್ತ್ರಚಿಕಿತ್ಸೆಯನ್ನು ಮುಂದೂಡಿದ್ದರು. ಇದಕ್ಕಾಗಿ ಇವೆಲ್ಲ ವಿಚಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಆಯೋಗ ತನ್ನ 500 ಪುಟಗಳ ವರದಿಯಲ್ಲಿ ಸರಕಾರಕ್ಕೆ ಶಿಫಾರಸು ಮಾಡಿದೆ.
ಆಗಸ್ಟ್ ಕೊನೆಯ ವಾರದಲ್ಲಿ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಸಾವಿನ ಕುರಿತು ತನಿಖೆ ನಡೆಸಿದ ನಿವೃತ್ತ ನ್ಯಾಯಮೂರ್ತಿ ಆರುಮುಗಸ್ವಾಮಿ ಆಯೋಗವು ಜಯಾ ಅವರ ಮಾಜಿ ಸಹಾಯಕಿ ವಿ.ಕೆ. ಶಶಿಕಲಾ ಮತ್ತು ಇತರರ ವಿರುದ್ಧ ತನಿಖೆ ನಡೆಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ನಿವೃತ್ತ ನ್ಯಾ ಆರುಮುಗಸಾಮಿ ಆಯೋಗದ ವರದಿಯನ್ನು ತಮಿಳುನಾಡು ವಿಧಾನಸಭೆಯಲ್ಲಿ ಆಗಸ್ಟ್ 29ರಂದು ಮಂಡಿಸಲಾಗಿದ್ದು, ವರದಿ ಕುರಿತು ಕಾನೂನು ಅಭಿಪ್ರಾಯ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಗಮನಾರ್ಹ ಅಂಶ ಎಂದರೆ, 2021 ರ ಚುನಾವಣಾ ಪ್ರಚಾರದ ಸಮಯದಲ್ಲಿ ಸ್ಟಾಲಿನ್, ಡಿಎಂಕೆ ಅಧಿಕಾರಕ್ಕೆ ಬಂದರೆ ಜಯಲಲಿತಾ ಸಾವಿನ ಬಗ್ಗೆ ಹಾಗೂ ಆಸ್ಪತ್ರೆಯಲ್ಲಿ ನಡೆದ ಘಟನೆಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದಾಗಿ ಘೋಷಿಸಿದ್ದರು.
Discover more from Coastal Times Kannada
Subscribe to get the latest posts sent to your email.








Discussion about this post