• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುರತ್ಕಲ್‌ ಟೋಲ್‌ ಗೇಟ್‌ ತೆರವಿಗೆ ಯತ್ನ , ಹಲವು ಪ್ರತಿಭಟನಾಕಾರರು ಪೊಲೀಸ್​​ ವಶಕ್ಕೆ

Coastal Times by Coastal Times
October 18, 2022
in ಕರಾವಳಿ
ಸುರತ್ಕಲ್‌ ಟೋಲ್‌ ಗೇಟ್‌ ತೆರವಿಗೆ ಯತ್ನ , ಹಲವು ಪ್ರತಿಭಟನಾಕಾರರು ಪೊಲೀಸ್​​ ವಶಕ್ಕೆ
93
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ಎನ್​​ಐಟಿಕೆ ಟೋಲ್ ಗೇಟ್ ತೆರವು ಮಾಡಬೇಕೆಂದು ಟೋಲ್ ಗೇಟ್ ಸಮೀಪದ ಸರ್ವಿಸ್ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಕಾರರು ಏಕಾಏಕಿ ಟೋಲ್ ಗೇಟ್​​ಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಸಾವಿರಾರು ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತಾದರೂ ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟರು. ಕಾಂಗ್ರೆಸ್ ಮುಖಂಡ ಮಿಥುನ್ ರೈ ಟೋಲ್ ಗೇಟ್ ಕೇಂದ್ರದ ಮೇಲೆ ನಿಂತು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಟೋಲ್ ಕೇಂದ್ರಕ್ಕೆ ಮುತ್ತಿಗೆ ಹಾಕುವ ಸಂದರ್ಭದಲ್ಲಿ ಟೋಲ್ ಸಂಗ್ರಹ ಕೇಂದ್ರದ ಗಾಜಿಗೆ ಹಾನಿಯಾಗಿದೆ. ಸದ್ಯ ಟೋಲ್ ಸಂಗ್ರಹವನ್ನು ಬಂದ್ ಮಾಡಲಾಗಿದ್ದು, ಪ್ರತಿಭಟನಕಾರರನ್ನು ಪೊಲೀಸರು ವಶಕ್ಜೆ ಪಡೆದಿದ್ದಾರೆ. ಮಂಗಳೂರಿನ ಸುರತ್ಕಲ್​​ನಲ್ಲಿರುವ ಎನ್​​ಐಟಿಕೆ ತೆರವು ಮಾಡಬೇಕೆಂದು ಒತ್ತಾಯಿಸಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಟೋಲ್ ಗೇಟ್ ಮುಚ್ಚುವ ಭರವಸೆ ನೀಡಿದರೂ ಅದು ಈಡೇರದ ಕಾರಣ ಈ ಪ್ರತಿಭಟನೆ ನಡೆದಿದೆ. ಪ್ರತಿಭಟನೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಶಾಸಕರಾದ ಭರತ್ ಶೆಟ್ಟಿ, ಉಮನಾಥ ಕೋಟ್ಯಾನ್ ವಿರುದ್ದ ಘೋಷಣೆ ಕೂಗಿ ಅಕ್ರಮ ಟೋಲ್ ಗೇಟ್ ತೊಲಗಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕರಾದ ಮೊಯ್ದಿನ್‌ಬಾವ, ಜೆ.ಆರ್ ಲೋಬೋ, ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಡಿವೈಎಫ್ಐ ಮುಖಂಡರಾದ ಬಿ.ಕೆ ಇಮ್ತಿಯಾಝ್, ಸಂತೋಷ್ ಬಜಾಲ್, ಸಿಪಿಎಂ ಮುಖಂಡರಾದ ಯಾದವ್ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ಪ್ರತಿಭಾ ಕುಳಾಯಿ ಮೊದಲಾದವರು ನೇತೃತ್ವ ವಹಿಸಿದ್ದರು.

ಎನ್ ಐ ಟಿ ಕೆ ಟೋಲ್ ಗೇಟ್ ಅನಧಿಕೃತ, ಇದನ್ನು ತೆರವು ಮಾಡಬೇಕು ಎಂದು ಕಳೆದ 6 ವರ್ಷಗಳಿಂದ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಪ್ರತಿಭಟನೆ ಮಾಡುತ್ತಿದೆ. ಇತ್ತೀಚೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು‌ ಎನ್ ಐ ಟಿ ಕೆ ಟೋಲ್ ಗೇಟನ್ನು ಎನ್ ಎಂ ಪಿ ಟಿಯ ಒಳಗೆ ಸ್ಥಳಾಂತರಿಸುವ ಹೇಳಿಕೆ ನೀಡಿದ್ದರು. ಆ ಬಳಿಕ ಹಲವು ಬಾರಿ ಈ ಎನ್ ಐ ಟಿ ಕೆ ಟೋಲ್ ಗೇಟನ್ನು ಹೆಜಮಾಡಿ ಟೋಲ್ ಗೇಟ್ ನೊಂದಿಗೆ ವಿಲೀನ ಮಾಡುವ ಭರವಸೆ ನೀಡಲಾಗಿತ್ತು. ಆದರೆ ಇದ್ಯಾವುದು ಕಾರ್ಯಗತವಾಗದೆ ಇರುವುದರಿಂದ ಇಂದು ಬೃಹತ್ ಮಟ್ಟದಲ್ಲಿ ಪ್ರತಿಭಟನೆ ನಡೆದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರಿಗೆ ಬೆದರಿಕೆ ಪ್ರಕರಣ: ಸಿಐಡಿ ತನಿಖೆಗೆ ಒಪ್ಪಿಸಿದ ಸರಕಾರ

Next Post

KSDL ಮತ್ತು NSCDF ಸಾರಥ್ಯದಲ್ಲಿ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಚೆಲ್ಲುವ ಕಾರ್ಯಕ್ರಮ

Related Posts

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
68
ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ
ಕರಾವಳಿ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
29
Next Post
KSDL ಮತ್ತು NSCDF ಸಾರಥ್ಯದಲ್ಲಿ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಚೆಲ್ಲುವ ಕಾರ್ಯಕ್ರಮ

KSDL ಮತ್ತು NSCDF ಸಾರಥ್ಯದಲ್ಲಿ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಚೆಲ್ಲುವ ಕಾರ್ಯಕ್ರಮ

Discussion about this post

Recent News

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
68
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
36
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d