• About us
  • Contact us
  • Disclaimer
Sunday, October 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

Coastal Times by Coastal Times
October 18, 2026
in ಕ್ರೈಮ್ ನ್ಯೂಸ್
ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

Judge and gavel in courtroom

4
VIEWS
WhatsappTelegramShare on FacebookShare on Twitter

ಪುತ್ತೂರು : ಜಾಗದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶಿಸಿದೆ.

2022ರ ಡಿಸೆಂಬರ್ 27ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾಗದ ವಿಚಾರವಾಗಿ ತಕರಾರು ಉಂಟಾಗಿ, ಮೂವರು ಆರೋಪಿಗಳು ಮಹಿಳೆಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯವೆಸಗಿದ್ದರು. ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 113/2022ರಂತೆ ಭಾರತೀಯ ದಂಡ ಸಂಹಿತೆಯ (IPC) ಕಲಂ 447, 504, 506, 323, 354 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಅಂದಿನ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಸುಬ್ರಮಣ್ಯ ಹೆಚ್. ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಆರೋಪಿಗಳಾದ ಅರುಣ್ ಕುಮಾರ್, ವಿನಯ ಕುಮಾರ್ ಜಿ. ಹಾಗೂ ಸುಂದರ ಪಿ. ಎಂ. ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ನಡೆಸಿದ ಪುತ್ತೂರಿನ ಎಎಸ್‌ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ದೇವರಾಜ್ ವೈ.ಹೆಚ್. ಅವರು ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ.

ಮೊದಲನೇ ಆರೋಪಿ ಅರುಣ್ ಕುಮಾರ್‌ಗೆ ಐಪಿಸಿ ಕಲಂ 323ರ ಅಡಿಯಲ್ಲಿ ಆರು ತಿಂಗಳ ಸರಳ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಕಲಂ 354ರ ಅಡಿಯಲ್ಲಿ ಎರಡು ವರ್ಷಗಳ ಸರಳ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಮೂರು ತಿಂಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗಿದೆ.

ಇನ್ನು, ಐಪಿಸಿ ಕಲಂ 506ರ ಅಡಿಯಲ್ಲಿ ಮೂವರು ಆರೋಪಿಗಳಿಗೂ ತಲಾ ಒಂದು ವರ್ಷದ ಸರಳ ಕಾರಾಗೃಹ ಶಿಕ್ಷೆ ಹಾಗೂ ತಲಾ ₹5,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಪ್ರತಿಯೊಬ್ಬರೂ ಹೆಚ್ಚುವರಿಯಾಗಿ ಮೂರು ತಿಂಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ. ಪ್ರಕರಣದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕಿ ಚೇತನಾದೇವಿ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

Related Posts

50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ; ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಸಕಲೇಶಪುರದಲ್ಲಿ ಬಂಧನ
ಕ್ರೈಮ್ ನ್ಯೂಸ್

50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ; ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಸಕಲೇಶಪುರದಲ್ಲಿ ಬಂಧನ

October 18, 2026
68
ಮೈಸೂರು ದಸರಾಗೆ ಬಲೂನ್​ ಮಾರಾಟಕ್ಕೆ ಬಂದಿದ್ದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಮರಣದಂಡನೆ ಶಿಕ್ಷೆ
ಕ್ರೈಮ್ ನ್ಯೂಸ್

ಮೈಸೂರು ದಸರಾಗೆ ಬಲೂನ್​ ಮಾರಾಟಕ್ಕೆ ಬಂದಿದ್ದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಮರಣದಂಡನೆ ಶಿಕ್ಷೆ

October 17, 2026
279

Discussion about this post

Recent News

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

October 18, 2026
4
ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

October 18, 2026
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

October 18, 2026
ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

October 18, 2026
50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ; ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಸಕಲೇಶಪುರದಲ್ಲಿ ಬಂಧನ

50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ; ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಸಕಲೇಶಪುರದಲ್ಲಿ ಬಂಧನ

October 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d