ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ನಗರಕ್ಕೆ, ಭಾರಿ ಪ್ರಮಾಣದಲ್ಲಿ ಗಾಂಜಾವನ್ನು ಕಳ್ಳಸಾಗಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಮಹೇಂದ್ರ ಎಕ್ಸ್ ಯುವಿ 500 ಕಾರಿನಲ್ಲಿ ನಗರಕ್ಕೆ ಸಾಗಿಸಿದ್ದ 132 ಕೆ ಜಿ ಗಾಂಜಾವನ್ನು ಸಿಸಿಬಿ ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ.
ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಹೇಂದ್ರ ಎಕ್ಸ್ ಯುವಿ 500 ಕಾರಿನಲ್ಲಿ ಗಾಂಜಾವನ್ನು ಸಾಗಣೆ ಆಗುತ್ತಿರುವ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಬಿ. ನೇತೃತ್ವದ ಸಿಸಿಬಿ ಪೊಲೀಸರ ತಂಡವು ಮುಡಿಪು ಕುರ್ನಾಡು ಗ್ರಾಮದ ಕಾಯರ್ ಗೋಳಿ ಎಂಬಲ್ಲಿ ಕಾರನ್ನು ತಡೆದು ತಪಾಸಣೆ ನಡೆಸಿತ್ತು. ಅದರಲ್ಲಿ ಅಕ್ರಮವಾಗಿ ಸಾಗಿಸಿದ್ದ ಗಾಂಜಾ ಪತ್ತೆಯಾಗಿತ್ತು. ಆರೋಪಿಗಳಾದ ಬಂಟ್ವಾಳ ನರಿಂಗಾನ ಗ್ರಾಮದ ರಮೀಜ್ ರಾಜ್ (30) ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಮೀಯಪದವು ನಿವಾಸಿ ಅಬ್ದುಲ್ ಖಾದರ್ ಹ್ಯಾರಿಸ್ (31), ಬಂಧಿತರು. ಕೃತ್ಯಕ್ಕೆ ಬಳಸಿದ್ದ ಬಿಳಿ ಬಣ್ಣದ ಮಹೇಂದ್ರ ಎಕ್ಸ್ ಯುವಿ 500 ಕಾರನ್ನು, ಎರಡು ಮೊಬೈಲ್ ಫೋನ್ ಗಳನ್ನು, 3 ತಲವಾರುಗಳನ್ನು, ಹಾಗೂ ₹2180 ನಗದನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ ₹39,15,000 ಎಂದು ಅಂದಾಜಿಸಲಾಗಿದೆ.
‘ಆರೋಪಿಗಳು ವಿಶಾಖಪಟ್ಟಣದಿಂದ ಗಾಂಜಾವನ್ನು ಕಾರಿನಲ್ಲಿರಿಸಿ ಬೆಂಗಳೂರು ಮೂಲಕ ಸಾಗಾಟ ಮಾಡಿದ್ದರು. ಅಕ್ರಮ ಗಾಂಜಾ ಸಾಗಾಟದ ಸಮಯದಲ್ಲಿ ಪೊಲೀಸರು ಅಥವಾ ಸಾರ್ವಜನಿಕರು ನಿಲ್ಲಿಸಿದ್ದಲ್ಲಿ, ಅವರಿಗೆ ತೊಂದರೆ ನೀಡುವ ಉದ್ದೇಶದಿಂದ ತಲವಾರುಗಳನ್ನು ಕಾರಿನಲ್ಲಿ ಹೊಂದಿದ್ದರು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಂಜಾ ಬೆಳೆದಿರುವ ಜಾಗ ಮತ್ತು ಆರೋಪಿಗಳಿಗೆ ನೀಡಿದವರು ಮತ್ತು ಆರೋಪಿಗಳಿಂದ ಖರೀದಿಸುತ್ತಿದ್ದವರ ಬಗ್ಗೆ ತನಿಖೆ ಮುಂದುವರಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ತಿಳಿಸಿದ್ದಾರೆ. ಆರೋಪಿ ರಮೀಜ್ ರಾಜ್ ವಿರುದ್ದ ಮಂಗಳೂರಿನ ವಿವಿಧ ಠಾಣೆಯಲ್ಲಿ 6 ಪ್ರಕರಣ ಮತ್ತು ಅಬ್ದುಲ್ ಖಾದರ್ ಹ್ಯಾರಿಸ್ನ ವಿರುದ್ದ ಕೇರಳದ ಮಂಜೇಶ್ವರದಲ್ಲಿ ಎರಡು ಪ್ರಕರಣ ಸೇರಿದಂತೆ ನಾಲ್ಕು ಪ್ರಕರಣ ದಾಖಲಾಗಿದೆ.
ಇನ್ನಷ್ಟು ತನಿಖೆ ಮುಂದುವರಿಸಲಾಗುತ್ತಿದ್ದು, ಆರೋಪಿಗಳು ಮಂಗಳೂರು, ಉಡುಪಿ, ಮಣಿಪಾಲ ಕೇರಳದ ಕಾಸರಗೋಡು ಸೇರಿದಂತೆ ಹಲವೆಡೆ ಗಾಂಜಾ ಸಾಗಿಸುತ್ತಿದ್ದರು ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post