ಬೆಂಗಳೂರು : ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ ಕೇಳಿಬಂದಿದೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ವಂಚನೆ ದೂರು ದಾಖಲಾಗಿದೆ. ಹೌದು.. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಿಸಿಕೊಂಡು ಇದೀಗ ಮೋಸ ಮಾಡಿದ್ದಾರೆ ಎಂದು ಬೆಂಗಳೂರು ಮೂಲದ ಯುವತಿ ದೂರು ದಾಖಲಿಸಿದ್ದು, ಈ ದೂರಿ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಒಂದೂವರೆ ವರ್ಷದ ಹಿಂದೆ ಪಾರ್ಟಿವೊಂದರಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿರುವ ರಂಗನಾಥ್, ಬಳಿಕ ಮೈಸೂರಿನ ಹೋಟೆಲ್ನಲ್ಲಿ ಆಕೆಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದ್ರೆ, ಈಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಮದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರಿನ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಪಾರ್ಟಿಯೊಂದರಲ್ಲಿ ಸ್ನೇಹಿತರ ಮೂಲಕ ಯುವತಿಯ ಪರಿಚಯ ಮಾಡಿಕೊಂಡಿರುವ ರಂಗನಾಥ್, ಬಳಿಕ ಆಕೆಗೆ ಮದುವೆಯಾಗುವುದಾಗಿ ನಂಬಿಸಿ ಕಳೆದ ಜನವರಿಯಲ್ಲಿ ಮೈಸೂರಿನ ಹೋಟೇಲ್ ನಲ್ಲಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಬಳಿಕ ಮದುವೆ ಆಗುವಂತೆ ಯುವತಿ ಪಟ್ಟು ಹಿಡಿದಿದ್ದಕ್ಕೆ ಆಕೆಯಿಂದ ಅಂತರ ಕಾಪಾಡಿಕೊಳ್ಳಲು ಶುರುಮಾಡಿದ್ದಾರೆ. ಇದರಿಂದ ಬೇರೆ ದಾರಿ ಕಾಣದೇ ಯುವತಿ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ.
ನನ್ನನ್ನು ಹೆಂಡತಿಯಾಗಿ ಸ್ವೀಕರಿಸಲೇಬೇಕು, ಅದೊಂದೇ ಬೇಡಿಕೆ ; ಅವನಿಗೆ ಒಂದು ಮಗು ಕೊಡಿಸಬೇಕು ಎಂಬ ಸೆಂಟಿಮೆಂಟ್ ಆಧಾರದಲ್ಲಿ ನಾನು ಅವನ ಜತೆ ಸೇರಿದೆ. ಆದರೆ, ಅವನು ಅವಾಯ್ಡ್ ಮಾಡಲು ಶುರು ಮಾಡಿದ. ಕೊನೆಗೆ ನನ್ನನ್ನು ದೂರ ಮಾಡಲು ಮುಂದಾದ. ಮದುವೆ ಮಾಡಿಕೊಳ್ಳಿ ಎಂದು ಕಾಲಿಗೆ ಬಿದ್ದಾಗಲೂ ತಿರಸ್ಕರಿಸಿದ. ಹಣ ಕೊಟ್ಟು ನನ್ನನ್ನು ದೂರ ಮಾಡಲು ಅವನ ಸ್ನೇಹಿತರು ಮುಂದಾದರು. ಆದರೆ, ನಾನು ಹಣಕ್ಕಾಗಿ ಏನನ್ನೂ ಮಾಡಿಲ್ಲ. ಹೀಗಾಗಿ ತಿರಸ್ಕರಿಸಿದೆ. ರಂಗನಾಥ್ ಅಪ್ಪನಿಗೂ ವಿಷಯ ತಲುಪಿಸಿದ್ದೇನೆ. ಅವರು ಕಾನೂನು ಪ್ರಕಾರ ಕೈಗೊಳ್ಳಬಹುದು ಎಂದು ಹೇಳಿದ್ದಾರೆ. ಈಗಲೂ ನನ್ನ ಬೇಡಿಕೆ ಒಂದೇ. ನನ್ನನ್ನು ಹೆಂಡತಿಯಾಗಿ ಸ್ವೀಕರಿಸಲೇಬೇಕು ಎಂದು ಯುವತಿ ಹೇಳಿದ್ದಾಳೆ.
ಇಬ್ಬರಿಗೂ ನೋಟಿಸ್ : ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಿಂದ ಇಬ್ಬರಿಗೂ ನೋಟಿಸ್ ಜಾರಿಯಾಗಿದೆ. ವಿಚಾರನೆಗೆ ಬರುವಂತೆ ರಂಗನಾಥ್ ಅವರಿಗೆ ನೋಟಿಸ್ ನೀಡಲಾಗಿದೆ. ಇನ್ನು ಯುವತಿಗೆ ಸೂಕ್ತ ದಾಖಲೆ ಸಮೇತ ಠಾಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.
ಯುವತಿ ವಿರುದ್ಧ ರಂಗನಾಥ್ ಪ್ರತಿ ದೂರು : ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟಿದ್ದಾರೆ ಎಂದು ಯುವತಿ ದೂರು ದಾಖಲಿಸಿದ ಬೆನ್ನಲ್ಲೇ ಇತ್ತ ರಂಗನಾಥ್ ಸಹ ಪ್ರತಿದೂರು ದಾಖಲಿಸಿದ್ದಾರೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಯುವತಿ ವಿರುದ್ಧ ದೂರು ದಾಖಲಿಸಿದ್ದು, ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ಹಣ ನೀಡುವಂತೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಅಲ್ಲದೇ 15 ಲಕ್ಷ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಯುವತಿ ವಿರುದ್ಧ ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ವಿಜಯನಗರ ಠಾಣೆ ಪೊಲೀಸರು ಬೆಂಗಳೂರು ಮೂಲದ ಯುವತಿ ಹಾಗೂ ಶ್ರೀನಿವಾಸ್ ಎನ್ನುವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಒಟ್ಟಿನಲ್ಲಿ ಯುವತಿ ಹಾಗೂ ರಂಗನಾಥ್ ಪರಸ್ಪರ ದೂರು ದಾಖಲಿಸಿದ್ದು, ಈ ಪ್ರಕರಣ ಮುಂದೆ ಯಾವ ಹಂತಕ್ಕೆ ಹೋಗಿ ನಿಲ್ಲುತ್ತೆ. ಇನ್ನು ಪೊಲೀಸರು ಈ ಪ್ರಕರಣದ ಸತ್ಯಾಸತ್ಯತೆಯನ್ನು ಕಂಡು ಹಿಡಿಬೇಕಿದೆ.
Discover more from Coastal Times Kannada
Subscribe to get the latest posts sent to your email.
Discussion about this post