ಮಂಗಳೂರು, ನ.17: ನಗರ ಹೊರವಲಯದ ಕೊಲ್ಯದಲ್ಲಿರುವ ಐಡಿಯಲ್ ಐಸ್ ಕ್ರೀಮ್ ಕೋಲ್ಡ್ ಸ್ಟೋರೇಜ್ ಯುನಿಟ್ಗೆ ಭೇಟಿ ನೀಡಿದ ತಂಡ, ಐಸ್ ಕ್ರೀಮ್ ಶೇಖರಿಸುವಾಗ ಪಾಲಿಸಬೇಕಾದ ಆಹಾರ ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸಿದೆ. ಈ ವೇಳೆ ಕಂಡುಬಂದಿರುವ ಲೋಪದೋಷಗಳನ್ನು ಸರಿಪಡಿಸಿಕೊಳ್ಳುವಂತೆ ಘಟಕಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.
ತೊಕ್ಕೊಟ್ಟಿನ ‘ಎಂ.ಆರ್. ಸ್ವೀಟ್ಸ್’ ಸಾಮಗ್ರಿ ಜಪ್ತಿ, ಕೇಸ್ ದಾಖಲು: ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆಯಲ್ಲಿರುವ ಎಂ.ಆರ್.ಸ್ವೀಟ್ಸ್ ತಯಾರಿಕಾ ಘಟಕಕ್ಕೆ ಅಧಿಕಾರಿಗಳು ದಾಳಿ ನಡೆಸಿದಾಗ, ಅಲ್ಲಿ ಕನಿಷ್ಠ ನೈರ್ಮಲ್ಯವನ್ನೂ ಕಾಪಾಡಿಕೊಳ್ಳದೆ ಸಿಹಿತಿಂಡಿ ಹಾಗೂ ಇತರ ಆಹಾರ ಪದಾರ್ಥಗಳನ್ನು ತಯಾರಿಸುತ್ತಿರುವುದು ಪತ್ತೆಯಾಗಿದೆ. ತಕ್ಷಣವೇ ಅಲ್ಲಿದ್ದ ಆಹಾರ ಸಾಮಗ್ರಿಯನ್ನು ಜಪ್ತಿ ಮಾಡಿದ ಅಧಿಕಾರಿಗಳು, ಅಶುಚಿತ್ವದ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಕ್ರಮ ಕೈಗೊಂಡಿದ್ದಾರೆ.

ತಲಪಾಡಿಯ ‘ಉಡುಪಿ ಕೆಫೆ’ ಆಹಾರ ಮಾದರಿ ಸಂಗ್ರಹ: ಕೇರಳ ಗಡಿಭಾಗದ ತಲಪಾಡಿಯಲ್ಲಿ ಉಡುಪಿ ಕೆಫೆ ರೆಸ್ಟೋರೆಂಟಿನ ಕಿಚನ್ ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಹಾರ ಸುರಕ್ಷತಾ ನಿಯಮಗಳ ಬಗ್ಗೆ ಸೂಚನೆಗಳನ್ನು ನೀಡಿದ್ದಲ್ಲದೆ, ಕೆಲವು ಆಹಾರ ಮಾದರಿಗಳನ್ನು ಪ್ರಯೋಗ ಶಾಲೆಗೆ ಪರಿಶೀಲನೆಗಾಗಿ ಕಳಿಸಿಕೊಟ್ಟಿದ್ದಾರೆ. ತೊಕ್ಕೊಟ್ಟು ಬಳಿಯ ಸೇವಂತಿ ಗುಡ್ಡೆಯಲ್ಲಿರುವ ಎಂ.ಆರ್ ಸ್ವೀಟ್ಸ್ ಘಟಕಕ್ಕೆ ದಾಳಿ ನಡೆಸಿದ್ದು ನೈರ್ಮಲ್ಯ ಕಾಪಾಡಿಕೊಳ್ಳದ ಸ್ವೀಟ್ ಹಾಗೂ ಇನ್ನಿತರ ಆಹಾರ ವಸ್ತುಗಳನ್ನು ತಯಾರಿಸುತ್ತಿರುವುದು ಕಂಡುಬಂದಿದ್ದು ಆಹಾರ ಸಾಮಗ್ರಿಗಳನ್ನು ಮಾರಾಟ ಮಾಡದಂತೆ ತಡೆದು ಸೀಜ್ ಮಾಡಲಾಗಿದೆ.
ಆರೋಗ್ಯ ಸಚಿವ ಯು.ಟಿ ಖಾದರ್ ಸೂಚನೆಯ ಮೇರೆಗೆ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ.ಪ್ರವೀಣ್ ಕುಮಾರ್ ಸಿ.ಎಚ್ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋಟೆಲ್, ರೆಸ್ಟೋರೆಂಟ್ ಹಾಗೂ ಆಹಾರ ತಯಾರಿಕಾ ಘಟಕಗಳು ಹಾಗೂ ಇನ್ನಿತರ ಆಹಾರ ಉದ್ಯಮಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.
ಆಹಾರ ತಯಾರಿಕೆಯಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳದಿರುವುದು ಪತ್ತೆಯಾದಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಎಡಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.






Discussion about this post