• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಜ.21 ರಿಂದ ಬಿಜೆಪಿ “ವಿಜಯ ಸಂಕಲ್ಪ ಅಭಿಯಾನ” – ಶಾಸಕ ಡಾ.ವೈ. ಭರತ್ ಶೆಟ್ಟಿ

Coastal Times by Coastal Times
January 19, 2023
in ರಾಜಕೀಯ
ಜ.21 ರಿಂದ ಬಿಜೆಪಿ “ವಿಜಯ ಸಂಕಲ್ಪ ಅಭಿಯಾನ” – ಶಾಸಕ ಡಾ.ವೈ. ಭರತ್ ಶೆಟ್ಟಿ
24
VIEWS
WhatsappTelegramShare on FacebookShare on Twitter

ಸುರತ್ಕಲ್: “ಸರ್ಕಾರದ ಸಾಧನೆ ಬಿಂಬಿಸಲು ಹಾಗೂ ಜನಕಲ್ಯಾಣದೆಡೆಗೆ ಬಿಜೆಪಿಯ ಬದ್ಧತೆ ಸಾರಲು ಪ್ರತಿ ಬೂತಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಾಧನೆ ಸಾರುವ ಮತ್ತು ಯೋಜನೆಗಳ ಮಾಹಿತಿ ನೀಡಲು ಇದೇ ಬರುವ ಜ.21ರಿಂದ “ವಿಜಯ ಸಂಕಲ್ಪ ಅಭಿಯಾನ” ಆಯೋಜಿಸಲಾಗಿದ್ದು ಅಂದು ಬೆಳಗ್ಗೆ 9 ಗಂಟೆಗೆ ಸುರತ್ಕಲ್ ನಗರದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು” ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

“ಅಭಿಯಾನದ ಅಂಗವಾಗಿ ಗೋಡೆ ಪೇಂಟಿಂಗ್‌ಗಳನ್ನು ಮಾಡಿಸಲಾಗುತ್ತದೆ. ಸಾಮಾಜಿಕ ಜಾಲತಾಣಗಳ ಮೂಲಕವೂ ನಮ್ಮ ಯೋಜನೆಗಳ ಯಶಸ್ಸನ್ನು ಸಾರಲಾಗುವುದು. ಸದಸ್ಯತ್ವ ಅಭಿಯಾನ ಸಂಪೂರ್ಣ ಆನ್ ಲೈನ್ ಇರಲಿದ್ದು (ಮಿಸ್ ಕಾಲ್), ನೋಂದಣಿ ಪ್ರಕ್ರಿಯೆಯ ಬಗೆಗೂ ಕಾರ್ಯಕರ್ತರಿಗೆ ಕಾರ್ಯಾಗಾರಗಳನ್ನು ನಡೆಸಲಾಗುತ್ತದೆ. ಈ ತಿಂಗಳ ಜನವರಿ 29ರಂದು ಮಾನ್ಯ ಪ್ರಧಾನ ಮಂತ್ರಿಯವರ ಮನ್ ಕೀ ಬಾತ್ ಕಾರ್ಯಕ್ರಮ ಕರ್ನಾಟಕದ ಪಾಲಿಗೆ ಮತ್ತಷ್ಟು ವಿಶೇಷವಾಗಿರಲಿದೆ. ಪಕ್ಷದ ಕಾರ್ಯಕರ್ತರು ಹಾಗೂ ಪ್ರಮುಖರು ಒಟ್ಟಿಗೇ ಕೂತು ಪ್ರಧಾನಿಯವರ ಮನ್ ಕೀ ಬಾತ್ ಕಾರ್ಯಕ್ರಮ ಒಟ್ಟಿಗೆ ಆಲಿಸಲಿದ್ದಾರೆ. ನಮ್ಮ
ಮಂಡಲದಲ್ಲಿ ಎಲ್ಲಾ ಬೂತ್‌ಗಳಲ್ಲಿ ಕಾರ್ಯಕರ್ತರು ಮತ್ತು ಪ್ರಮುಖರು ಮನ್ ಕೀ ಬಾತ್ ಆಲಿಸಲಿದ್ದಾರೆ. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಈ ಅಭಿಯಾನವು ಕಾರ್ಯಕರ್ತರೆಲ್ಲರ
ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಯಲಿದೆ” ಎಂದರು.

ಈ ಕಾರ್ಯಕ್ರಮವು ಪಕ್ಷವನ್ನು ಗೆಲುವಿನ ಹಾದಿಗೆ ಕೊಂಡೊಯ್ಯುವಲ್ಲಿ ಸಹಕಾರಿಯಾಗಲಿದೆ. ನಮ್ಮ ಮಂಡಲದ ಎಲ್ಲಾ ಮತದಾರರನ್ನು ವಿಜಯ ಸಂಕಲ್ಪ ಅಭಿಯಾನದ ಮೂಲಕ ನಮ್ಮ ಕಾರ್ಯಕರ್ತರು ತಲುಪುತ್ತಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ, ಮಾನ್ಯ ಶಾಸಕರ ಸಾಧನೆಗಳ ಕುರಿತು ಕರಪತ್ರವನ್ನು ಮತದಾರರ ಮನೆಗೆ ತೆರಳಿ ಹಂಚಿಕೆ ಮಾಡಲಾಗುವುದು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಯೋಜನೆಗಳ
ಫಲಾನುಭವಿಗಳನ್ನು ಸಂಪರ್ಕಿಸಲಿದ್ದೇವೆ. ಬಿಜೆಪಿ ಸರಕಾರಗಳ ಯೋಜನೆಗಳಿಂದ ಈ ಕುಟುಂಬಗಳ ಸಬಲೀಕರಣ ಆದುದನ್ನು ತಿಳಿಸಲಿದ್ದೇವೆ. ಮನೆ ಹಾಗೂ ವಾಹನಗಳ ಮೇಲೆ ಸ್ಟಿಕ್ಕರ್ ಹಾಕಿಸುವ ಕೆಲಸವೂ ನಡೆಯಲಿದೆ.

ಜನವರಿ 21ರಿಂದ ಅಭಿಯಾನ ಆರಂಭವಾಗಲಿದ್ದು, ಅದಕ್ಕಾಗಿ ಈಗಾಗಲೇ ವ್ಯವಸಿತ ಪೂರ್ವಭಾವಿ ಸಿದ್ಧತೆ ನಡೆದಿದೆ. ಮಂಡಲಗಳಲ್ಲಿ ಪ್ರತಿ ಬೂತ್ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಭಾರತೀಯ ಜನತಾ ಪಾರ್ಟಿ ಮುಂಬರುವ ಚುನಾವಣೆಯಲ್ಲಿ ಅತ್ಯಧಿಕ ಮತ ಪಡೆಯುವ ಗುರಿ ಹಾಕಿಕೊಂಡಿದೆ. ಅದಕ್ಕಾಗಿ ಪಕ್ಷವು ತಳಹಂತದಿಂದ ಪಕ್ಷದ ಸಶಕ್ತಿಕರಣ ಸೇರಿ ವಿವಿಧ ಕಾರ್ಯತಂತ್ರಗಳನ್ನು ಮಾಡುತ್ತಿದೆ. ಮನೆಮನೆಗೆ ಕರಪತ್ರ ಹಂಚುವುದರ ಜೊತೆಗೆ ಬಿಜೆಪಿ ಸಾಧನೆ ಬಿಂಬಿಸುವ ಪೇಂಟಿಂಗ್ ಹಾಗೂ ಸದಸ್ಯತ್ವ ಅಭಿಯಾನ ಇವುಗಳು ಈ ಅಭಿಯಾನದ ಭಾಗವಾಗಿದೆ. ಮಂಡಲದಲ್ಲಿ ಶಾಸಕರು ಹಾಗು ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ತಮ್ಮ ಸಾಧನೆ ಒಳಗೊಂಡ ಕರಪತ್ರಗಳನ್ನು ಮನೆಗಳಿಗೆ ಹಂಚುವ ಗುರಿ ಹಾಕಿಕೊಂಡಿದ್ದಾರೆ. ನಮ್ಮ ಕಾರ್ಯಕರ್ತರು ಹಾಗೂ ಬಿಜೆಪಿ ಪಕ್ಷದ ಅಭಿಮಾನಿಗಳು ತಮ್ಮ ಮನೆ, ದ್ವಿಚಕ್ರ ವಾಹನ ಹಾಗೂ ಕಾರುಗಳಿಗೆ ಅಂಟಿಸಿಕೊಳ್ಳಲು ಮೂರು ನಮೂನೆಯ ಸ್ಟಿಕರ್‌ಗಳನ್ನು ವಿತರಿಸಲಾಗುವುದು” ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಜಯ ಸಂಕಲ್ಪ ಅಭಿಯಾನದ ಸಂಚಾಲಕ ಸಂದೀಪ್ ಬೋಂದೆಲ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಮಂಗಳೂರು ಉತ್ತರ ಮಂಡಲ ಬಿಜೆಪಿ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ರಾಜೇಶ್ ಕೊಟ್ಟಾರಿ, ಕಾರ್ಪೋರೇಟರ್ ಗಳಾದ ಶ್ವೇತಾ ಪೂಜಾರಿ, ಕಿರಣ್ ಕುಮಾರ್ ಕೋಡಿಕಲ್, ರಕ್ಷಿತ್ ಪೂಜಾರಿ, ಸುಚೇತನ್ ಪೂಜಾರಿ, ಸಂದೀಪ್ ಪಚ್ಚನಾಡಿ, ಅಮೃತ್ ಲಾಲ್, ಜಾಯ್ಸ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಪ್ಪಿನಂಗಡಿ ಟಯರ್ ರಿಸೋಲ್‌ ಅಂಗಡಿಯಲ್ಲಿ ಏರ್ ಕಂಪ್ರೆಶರ್ ಸ್ಫೋಟ ; ಕಾರ್ಮಿಕ ಮೃತ್ಯು

Next Post

ಮುಂಬೈ: ಬಾಲಿವುಡ್‌ ನಟಿ ರಾಖಿ ಸಾವಂತ್‌ ಪೊಲೀಸರ ವಶಕ್ಕೆ

Related Posts

ನಿತಿನ್ ನಬಿನ್ ಅವರ ನೇತೃತ್ವದ ಬಿಜೆಪಿಯ ಹೊಸ ತಂಡ ರೆಡಿ: ರಾಮ್ ಮಾಧವ್, ಸ್ಮೃತಿ ಇರಾನಿಗೆ ಪ್ರಮುಖ ಹೊಣೆ, ಯುವಮೋರ್ಚಾಕ್ಕೆ ಹೊಸ ಸಾರಥಿ ನೇಮಕ
ರಾಜಕೀಯ

ನಿತಿನ್ ನಬಿನ್ ಅವರ ನೇತೃತ್ವದ ಬಿಜೆಪಿಯ ಹೊಸ ತಂಡ ರೆಡಿ: ರಾಮ್ ಮಾಧವ್, ಸ್ಮೃತಿ ಇರಾನಿಗೆ ಪ್ರಮುಖ ಹೊಣೆ, ಯುವಮೋರ್ಚಾಕ್ಕೆ ಹೊಸ ಸಾರಥಿ ನೇಮಕ

August 18, 2026
35
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
26
Next Post
ಮುಂಬೈ: ಬಾಲಿವುಡ್‌ ನಟಿ ರಾಖಿ ಸಾವಂತ್‌ ಪೊಲೀಸರ ವಶಕ್ಕೆ

ಮುಂಬೈ: ಬಾಲಿವುಡ್‌ ನಟಿ ರಾಖಿ ಸಾವಂತ್‌ ಪೊಲೀಸರ ವಶಕ್ಕೆ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d