ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಜ.21ರಿಂದ 29ರವರೆಗೆ ಬೂತ್ ಮಟ್ಟದ ವಿಜಯ ಸಂಕಲ್ಪ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.21ರಂದು ರಾಜ್ಯದಾದ್ಯಂತ ವಿಜಯ ಸಂಕಲ್ಪ ಅಭಿಯಾನಕ್ಕೆ ಬಿಜೆಪಿ ಕರೆ ನೀಡಿದೆ. ಈ ನಿಟ್ಟಿನಲ್ಲಿ ಈಗಾಗಲೇ ಪ್ರತಿಯೊಂದು ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಸಭೆಯನ್ನು ನಡೆಸಲಾಗಿದೆ. ಕಾರ್ಯಕ್ರಮ ಪ್ರಯುಕ್ತ ಪ್ರತಿಯೊಂದು ಬೂತ್‌ನಲ್ಲಿ ಕಾರ್ಯಕ್ರಮ ಉದ್ಘಾಟನೆಯನ್ನು ನಡೆಸಲಾಗುತ್ತದೆ. ಕೇಂದ್ರದ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಕಾರ್ಯ ಸಾಧನೆಗಳನ್ನು ಕರಪತ್ರದ ಮೂಲಕ ಮನೆ ಮನೆಗೂ ತಲುಪಿಸಲಾಗುವುದು ಎಂದರು.
ಬಿಜೆಪಿ ಕ್ಷೇತ್ರ ಘಟಕದ ಉಪಾಧ್ಯಕ್ಷ ಯಶವಂತ್ ಅಮೀನ್, ವಿಜಯ ಸಂಕಲ್ಪ ಅಭಿಯಾನದ ಮೂಲಕ ಪ್ರತಿಯೊಂದು ವಾಹನಗಳ ಮೇಲೆ ಸ್ಟಿಕ್ಕರ್‌ಗಳನ್ನು ಅಂಟಿಸಲಾಗುವುದು. ಅಷ್ಟೇ ಅಲ್ಲದೇ ಪ್ರತಿಯೊಂದು ಮನೆಗಳಲ್ಲಿಯೂ ಸ್ಟಿಕ್ಕರ್‌ಗಳನ್ನು ಅಂಟಿಸುವ ಮೂಲಕ ಗಮನ ಸೆಳೆಯಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆ ಮತ್ತು ಸಾಧನೆಗಳ ಕರಪತ್ರವನ್ನು ಪ್ರತಿ ಮನೆಗಳಿಗೆ ಹಂಚುವುದು. ಆನ್‍ಲೈನ್ ಮೂಲಕ ನೋಂದಣಿಯೂ ಮತ್ತೆ ಆರಂಭಗೊಂಡಿದ್ದು, ಮಿಸ್ಡ್ ಕಾಲ್ ಕೊಡುವ ಮೂಲಕ ಸದಸ್ಯತ್ವ ನೋಂದಣಿಯಾಗಲಿದೆ’ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಕ್ಷೇತ್ರ ಘಟಕದ ಉಪಾಧ್ಯಕ್ಷ ಯಶವಂತ್ ಅಮೀನ್ , ಕ್ಷೇತ್ರ ಪ್ರಭಾರ ರಣದೀಪ್ ಅಂಚನ್, ಅಭಿಯಾನ ಸಂಚಾಲಕ ನವೀನ್ ಪಾದಲ್ಪಾಡಿ, ಕ್ಷೇತ್ರ ಕಾರ್ಯದರ್ಶಿ ಆನಂದ್ ಶೆಟ್ಟಿ, ಅಭಿಯಾನದ ಮಂಗಳೂರು ಮಂಡಲ ಸಹಸಂಚಾಲಕ ಜೀವನ್ ಕುಮಾರ್ ತೊಕ್ಕೊಟ್ಟು ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.








Discussion about this post