ಅಯೋಧ್ಯೆ: ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾದ ಆಚರಣೆಗಳು ಮುಂದುವರಿದಿದೆ. ಇದೀಗ ಇಂದು ಗರ್ಭಗುಡಿಯಲ್ಲಿ ರಾಮಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ ಎಂದು ಮಂದಿರ ನಿರ್ಮಾಣ ಸಮಿತಿಯ ಸದಸ್ಯರು ಹೇಳಿದ್ದಾರೆ.
ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಬಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ಅವರು ಸಮಗ್ರ ಪ್ರಕ್ರಿಯೆಯ ನಂತರ ವಿಗ್ರಹವನ್ನು ಆಯ್ಕೆ ಮಾಡಿದ್ದಾರೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕಪ್ಪು ಕಲ್ಲಿನಲ್ಲಿ ಕೆತ್ತಿದ ಸುಮಾರು 150-200 ಕೆಜಿ ತೂಕದ ಈ ವಿಗ್ರಹವನ್ನು ಬುಧವಾರ ಸಂಜೆ ಮೆರವಣಿಗೆಯೊಂದಿಗೆ ದೇವಸ್ಥಾನಕ್ಕೆ ತರಲಾಗಿತ್ತು. ರಾತ್ರಿ ವಿಶೇಷ ಪೂಜೆಯೊಂದಿಗೆ ರಾಮಲಲ್ಲಾನ ವಿಗ್ರಹವನ್ನು ಗರ್ಭಗುಡಿಗೆ ತರಲಾಯಿತು.
ಈ ಬೆಳ್ಳಿಯ ವಿಗ್ರಹವನ್ನು ಗುಲಾಬಿ ಮತ್ತು ಚೆಂಡು ಹೂಗಳಿಂದ ಅಲಂಕರಿಸಲಾಗಿತ್ತು. ಬಳಿಕ ಅದನ್ನು ಗರ್ಭಗುಡಿಯಲ್ಲಿ ಇರಿಸಲು ಕ್ರೇನ್ ಬಳಸಿ ಮೇಲೆತ್ತಲಾಯಿತು. ಜನವರಿ 22 ರ ಕಾರ್ಯಕ್ರಮದ ಪೂರ್ವಭಾವಿಯಾಗಿ ಆಚರಣೆಯ ಅಂಗವಾಗಿ ‘ಕಲಶ ಪೂಜೆ’ ನಡೆಯಿತು. ಇಂದು 4 ಗಂಟೆಗಳ ಧಾರ್ಮಿಕ ಕಾರ್ಯಕ್ರಮಗಳ ನಂತರ 5 ವರ್ಷದ ರಾಮನ 51 ಇಂಚು ಎತ್ತರದ ಕಪ್ಪು ಕಲ್ಲಿನ ವಿಗ್ರಹವನ್ನು ಸ್ಥಾಪಿಸಲಾಯಿತು ಎಂದಿದ್ದಾರೆ.
ಜನವರಿ 22 ರಂದು ನಡೆಯುವ ಸಮಾರಂಭಕ್ಕೆ, ದೇವಾಲಯದ ಟ್ರಸ್ಟ್, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಅಮಿತಾಬ್ ಬಚ್ಚನ್, ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಸೇರಿದಂತೆ 7,000 ಕ್ಕೂ ಹೆಚ್ಚು ವ್ಯಕ್ತಿಗಳಿಗೆ ಆಹ್ವಾನಗಳನ್ನು ನೀಡಿದೆ.
Discover more from Coastal Times Kannada
Subscribe to get the latest posts sent to your email.
Discussion about this post