ಮಂಗಳೂರು: ಹಿರಿಯ ಸಾಹಿತಿ,ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಜಿಲ್ಲೆಯ ಕೂಡ್ಲು ನಿವಾಸಿಯಾಗಿರುವ ಅವರು, ಇತ್ತೀಚೆಗೆ ಮಂಗಳೂರಿನಲ್ಲಿ ನೆಲೆಸಿದ್ದರು.
ಮೂಲತ ಕಾಸರಗೋಡಿನ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ ಪ್ರಾಧ್ಯಾಪಕರಾಗಿ ದುಡಿದವರು. ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು. ಉಡುಪಿಯ ಟಿ.ಎಂ.ಪೈ. ಮಹಾವಿದ್ಯಾಲಯದಲ್ಲಿ ಅಧ್ಯಾಪಕರಾದರು. ಭಾರತ ಸರಕಾರದಿಂದ ಪ್ರಾಧ್ಯಾಪಕರಾಗಿ ಇಥಿಯೋಪಿಯಕ್ಕೆ ಪ್ರಯಾಣ. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ ಇವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ ಇಂಗ್ಲಿಷ್ ಕಲಿಕೆಯಲ್ಲಿ ಡಿಪ್ಲೋಮ ಗಳಿಸಿದರು. ಇಥಿಯೋಪಿಯದಿಂದ ಹಿಂತಿರುಗಿದ ನಂತರ ಅವರು ಉಜಿರೆಯಲ್ಲಿ ವಾಸವಾಗಿ ಕೃಷಿಯಲ್ಲಿ ತೊಡಗಿದ್ದರು.
ಕೆ.ಟಿ.ಗಟ್ಟಿ ಅವರ ಕಾದಂಬರಿಗಳು : ಶಬ್ದಗಳು (1976), ಸೌಮ್ಯ (1978), ಮನೆ, ರಾಮಯಜ್ಞ, ನಿರಂತರ, ಅಬ್ರಾಹ್ಮಣ, ಅಮುಕ್ತ, ಅವಿಭಕ್ತರು, ಕರ್ಮಣ್ಯೇ ವಾಧಿಕಾರಸ್ತೇ, ಕೂಪ, ಪೂಜಾರಿ, ಬಿಸಿಲುಗುದುರೆ, ಮೃತ್ಯೋರ್ಮಾ ಅಮೃತಂ ಗಮಯ, ಯುಗಾಂತರ, ಶಿಲಾತಪಸ್ವಿ, ಸ್ವರ್ಣಮೃಗ, ಅರಗಿನ ಮನೆ.
Discussion about this post