ಮಂಗಳೂರು, ಫೆ.18: ನಾಡಿನ ಖ್ಯಾತ ಸಹಕಾರಿ ಧುರೀಣರಾಗಿ ಸಹಕಾರಿ ಕ್ಷೇತ್ರದ ಬಲವರ್ಧನೆಗೆ ಶ್ರಮಿಸುತ್ತಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಜನ್ಮದಿನದ ಅಂಗವಾಗಿ ಫೆ. 24ರಂದು ಅಭಿವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅಭಿನಂದನ ಸಮಿತಿ ಅಧ್ಯಕ್ಷ ಐಕಳಬಾವ ದೇವಿಪ್ರಸಾದ ಶೆಟ್ಟಿ ಬೆಳವು ತಿಳಿಸಿದರು.
ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿವಂದನಾ ಕಾರ್ಯಕ್ರಮ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಸಹಕಾರ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾರ್ಯಯೋಜನೆಯನ್ನು ಆಯೋಜಿಸಿ, ನಮಗೆಲ್ಲರಿಗೂ ಮಾರ್ಗದರ್ಶಕರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ 76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮವು ಈ ಸಂದರ್ಭದಲ್ಲಿ ಆಯೋಜನೆಯಾಗಿದೆ. ಸಹಕಾರ ಕ್ಷೇತ್ರವು ಸರ್ವಧರ್ಮೀಯರ ಕ್ಷೇತ್ರವಾಗಿರುವುದರಿಂದ ಸಮಾಜದ ಎಲ್ಲಾ ವರ್ಗದ ಫಲಾನುಭವಿಗಳನ್ನು ಗುರುತಿಸಿ-ಸವಲತ್ತುಗಳನ್ನು ಈ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು ಎಂದು ದೇವಿಪ್ರಸಾದ್ ತಿಳಿಸಿದ್ದಾರೆ.
ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಕಾರ್ಯಕ್ರಮವು ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷ ಯು. ಟಿ. ಖಾದರ್ ಫರೀದ್ ಅವರಿಂದ ಉದ್ಘಾಟನೆಗೊಳ್ಳಲಿದ್ದು ಸಮಸ್ತ ಸಹಕಾರಿಗಳ ಪರವಾಗಿ ಈ ಕಾರ್ಯಕ್ರಮದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಭಿವಂದನೆಯನ್ನು ಸ್ವೀಕರಿಸಲಿದ್ದು, ನಿಟ್ಟೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಎನ್. ವಿನಯ್ ಹೆಗ್ಡೆ ಅವರು ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿವಂದಿಸಲಿರುವರು. ಉಡುಪಿ ಲೋಕಸಭಾ ಕ್ಷೇತ್ರದ ಸಂಸದಕೋಟ ಶ್ರೀನಿವಾಸ ಪೂಜಾರಿ ಇವರು ಅಭಿವಂದನಾ ಭಾಷಣ ಮಾಡಲಿರುವರು ಎಂದು ಅವರು ಹೇಳಿದರು.
76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆಯನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರು ನೆರವೇರಿಸಲಿದ್ದು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು.
ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿವಂದಿಸುವ ಈ ಕಾರ್ಯಕ್ರಮದಲ್ಲಿ ಸಹಕಾರ ಸಂಸ್ಥೆಗಳ ಹೆಚ್ಚಿನ ಪ್ರತಿನಿಧಿಗಳು ಹಾಗೂ ಅವರ ಹಿತೈಷಿಗಳು ಭಾಗವಹಿ ಸುವಂತೆ ದೇವಿಪ್ರಸಾದ್ ಶೆಟ್ಟಿ ವಿನಂತಿಸಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಉಡುಪಿ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ,ಸ್ವಾಗತ ಸಮಿತಿಯ ಕಾರ್ಯಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು,ಎಸ್ ಸಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕ ಭಾಸ್ಕರ ಕೋಟ್ಯಾನ್ ,ಶ್ರೀರಾಮಕೃಷ್ಣ ಕ್ರೆಡಿಟ್ ಕೋಅಪರೇಟಿವ್ ಬ್ಯಾಂಕ್ ನ ಅಧ್ಯಕ್ಷ ಜಯರಾಜ್ ರೈ, ಬ್ಯಾಂಕಿನ ಮುಖ್ಯ ಕಾರ್ಯ ನುರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post