• About us
  • Contact us
  • Disclaimer
Thursday, October 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಫೆ. 24ರಂದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅಭಿವಂದನಾ ಕಾರ್ಯಕ್ರಮ, 76 ಮಂದಿಗೆ ಸವಲತ್ತು ವಿತರಣೆ

Coastal Times by Coastal Times
February 19, 2025
in ಕರಾವಳಿ
ಫೆ. 24ರಂದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅಭಿವಂದನಾ ಕಾರ್ಯಕ್ರಮ, 76 ಮಂದಿಗೆ ಸವಲತ್ತು ವಿತರಣೆ
19
VIEWS
WhatsappTelegramShare on FacebookShare on Twitter

ಮಂಗಳೂರು, ಫೆ.18: ನಾಡಿನ ಖ್ಯಾತ ಸಹಕಾರಿ ಧುರೀಣರಾಗಿ ಸಹಕಾರಿ ಕ್ಷೇತ್ರದ ಬಲವರ್ಧನೆಗೆ ಶ್ರಮಿಸುತ್ತಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಜನ್ಮದಿನದ ಅಂಗವಾಗಿ ಫೆ. 24ರಂದು ಅಭಿವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅಭಿನಂದನ ಸಮಿತಿ ಅಧ್ಯಕ್ಷ ಐಕಳಬಾವ ದೇವಿಪ್ರಸಾದ ಶೆಟ್ಟಿ ಬೆಳವು ತಿಳಿಸಿದರು.

ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿವಂದನಾ ಕಾರ್ಯಕ್ರಮ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ ಎಂದು ತಿಳಿಸಿದ್ದಾರೆ.

ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಸಹಕಾರ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾರ್ಯಯೋಜನೆಯನ್ನು ಆಯೋಜಿಸಿ, ನಮಗೆಲ್ಲರಿಗೂ ಮಾರ್ಗದರ್ಶಕರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ 76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮವು ಈ ಸಂದರ್ಭದಲ್ಲಿ ಆಯೋಜನೆಯಾಗಿದೆ. ಸಹಕಾರ ಕ್ಷೇತ್ರವು ಸರ್ವಧರ್ಮೀಯರ ಕ್ಷೇತ್ರವಾಗಿರುವುದರಿಂದ ಸಮಾಜದ ಎಲ್ಲಾ ವರ್ಗದ ಫಲಾನುಭವಿಗಳನ್ನು ಗುರುತಿಸಿ-ಸವಲತ್ತುಗಳನ್ನು ಈ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು ಎಂದು ದೇವಿಪ್ರಸಾದ್ ತಿಳಿಸಿದ್ದಾರೆ.

ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಕಾರ್ಯಕ್ರಮವು ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷ ಯು. ಟಿ. ಖಾದರ್ ಫರೀದ್ ಅವರಿಂದ ಉದ್ಘಾಟನೆಗೊಳ್ಳಲಿದ್ದು ಸಮಸ್ತ ಸಹಕಾರಿಗಳ ಪರವಾಗಿ ಈ ಕಾರ್ಯಕ್ರಮದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾ‌ರ್ ಅವರು ಅಭಿವಂದನೆಯನ್ನು ಸ್ವೀಕರಿಸಲಿದ್ದು, ನಿಟ್ಟೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಎನ್. ವಿನಯ್ ಹೆಗ್ಡೆ ಅವರು ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿವಂದಿಸಲಿರುವರು. ಉಡುಪಿ ಲೋಕಸಭಾ ಕ್ಷೇತ್ರದ ಸಂಸದಕೋಟ ಶ್ರೀನಿವಾಸ ಪೂಜಾರಿ ಇವರು ಅಭಿವಂದನಾ ಭಾಷಣ ಮಾಡಲಿರುವರು ಎಂದು ಅವರು ಹೇಳಿದರು.

76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆಯನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರು ನೆರವೇರಿಸಲಿದ್ದು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು.

ಡಾ| ಎಂ.ಎನ್. ರಾಜೇಂದ್ರ ಕುಮಾರ್‌ ಅವರನ್ನು ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿವಂದಿಸುವ ಈ ಕಾರ್ಯಕ್ರಮದಲ್ಲಿ ಸಹಕಾರ ಸಂಸ್ಥೆಗಳ ಹೆಚ್ಚಿನ ಪ್ರತಿನಿಧಿಗಳು ಹಾಗೂ ಅವರ ಹಿತೈಷಿಗಳು ಭಾಗವಹಿ ಸುವಂತೆ ದೇವಿಪ್ರಸಾದ್ ಶೆಟ್ಟಿ ವಿನಂತಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಉಡುಪಿ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ,ಸ್ವಾಗತ ಸಮಿತಿಯ ಕಾರ್ಯಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು,ಎಸ್ ಸಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕ ಭಾಸ್ಕರ ಕೋಟ್ಯಾನ್ ,ಶ್ರೀರಾಮಕೃಷ್ಣ ಕ್ರೆಡಿಟ್ ಕೋಅಪರೇಟಿವ್ ಬ್ಯಾಂಕ್ ನ ಅಧ್ಯಕ್ಷ ಜಯರಾಜ್ ರೈ, ಬ್ಯಾಂಕಿನ ಮುಖ್ಯ ಕಾರ್ಯ ನುರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ :ಗೂಡ್ಸ್ ಟೆಂಪೋದಲ್ಲಿ 119 ಕೆ.ಜಿ. ಗಾಂಜಾ ಸಾಗಾಟ ನಾಲ್ವರು ಆರೋಪಿಗಳು ಅರೆಸ್ಟ್​

Next Post

ಫೆ.22 ಮತ್ತು 23, 2025 ರಂದು ಪಾಲೆಮಾರ್ ಗಾರ್ಡನ್ ನಲ್ಲಿ “ಕ್ಷಾತ್ರ ಸಂಗಮ-3” ರಾಮಕ್ಷತ್ರಿಯರ ಸಮಾವೇಶ

Related Posts

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!
ಕರಾವಳಿ

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
126
ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ
ಕರಾವಳಿ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
34
Next Post
ಫೆ.22 ಮತ್ತು 23, 2025 ರಂದು ಪಾಲೆಮಾರ್ ಗಾರ್ಡನ್ ನಲ್ಲಿ “ಕ್ಷಾತ್ರ ಸಂಗಮ-3”  ರಾಮಕ್ಷತ್ರಿಯರ ಸಮಾವೇಶ

ಫೆ.22 ಮತ್ತು 23, 2025 ರಂದು ಪಾಲೆಮಾರ್ ಗಾರ್ಡನ್ ನಲ್ಲಿ "ಕ್ಷಾತ್ರ ಸಂಗಮ-3" ರಾಮಕ್ಷತ್ರಿಯರ ಸಮಾವೇಶ

Discussion about this post

Recent News

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
134
ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
126
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d