ಮಂಗಳೂರು: ರಾಮಕ್ಷತ್ರಿಯ ಸೇವಾ ಸಂಘ(ರಿ) ಮಂಗಳೂರು ಇದರ ನೇತೃತ್ವದಲ್ಲಿ ಫೆ.22 ಮತ್ತು 23, 2025 ರಂದು ಮೋರ್ಗನ್ಸ್ ಗೇಟ್‌ನಲ್ಲಿರುವ ಪಾಲೆಮಾರ್ ಗಾರ್ಡನ್ ನಲ್ಲಿ “ಕ್ಷಾತ್ರ ಸಂಗಮ-3” ಎಂಬ ರಾಮಕ್ಷತ್ರಿಯರ ಸಮಾವೇಶ ನಡೆಯಲಿದೆ ಎಂದು ಸಂಚಾಲಕರಾದ ಜೆ.ಕೆ.ರಾವ್ ನಗರದ ಪಾಲೆಮಾರ್ ಗಾರ್ಡನ್ ನಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಸಮಾಜವನ್ನು ಒಟ್ಟುಗೂಡಿಸುವುದು ಮತ್ತು ಯುವ ಜನತೆಗೆ ನಮ್ಮ ಸಮಾಜದ ಸಂಸ್ಕೃತಿ, ಆಚಾರ, ವಿಚಾರ, ಆಚರಣೆ, ಪರಂಪ ರೆಯನ್ನು ತಿಳಿಯಪಡಿಸುವುದೆಂದು ಸಮಾವೇಶದ ಮುಖ್ಯ ಸಂಚಾಲಕ ರಾದ ಜೆ.ಕೆ.ರಾವ್ ತಿಳಿಸಿದ್ದಾರೆ. ಈ ಸಮಾವೇಶದಲ್ಲಿ ರಾಮಕ್ಷತ್ರಿಯ ಸಮಾಜದ ಎಲ್ಲಾ ಹಿರಿಯ, ಕಿರಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಮಾಜದ ಯುವ ಸಮುದಾಯ, ಮಹನೀಯರು ಮತ್ತು ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ರಾಮಕ್ಷತ್ರಿಯ ಸಮಾಜದ ಸುಮಾರು 52 ಸಂಘಗಳ ಪ್ರತಿನಿಧಿ ಗಳು ಮತ್ತು ಸದಸ್ಯರು ಈ ಸಮಾವೇಶಕ್ಕೆ ಆಹ್ವಾನಿತರು. ಫೆ. 22 ರಂದು ಬೆಳಗ್ಗೆ ಗಂಟೆ 9ರಿಂದ ರಾಮತಾರಕ ಯಜ್ಞ ಮತ್ತು ಜಪ ನಡೆಯಲಿದೆ. ತದನಂತರ “ಹನುಮಾನ್ ಚಾಲೀಸ” ಕಂಠಪಾಠ ಸ್ಪರ್ಧೆ, ಪುಷ್ಪ ಜೋಡಣೆ, ರಂಗವಲ್ಲಿ ಸ್ಪರ್ಧೆಗಳು ನಡೆಯಲಿದೆ. ಇದರ ಜೊತೆ ವಧುವರ ಅನ್ವೇಷಣೆ ಮತ್ತು ಉದ್ದಿಮೆದಾರರ ಸಮಾವೇಶ ಕೂಡಾ ಇರಲಿದೆ ಎಂದು ತಿಳಿಸಿದರು.
ಸಂಜೆ ಗಂಟೆ 4ರಿಂದ ಉದ್ಘಾಟನಾ ಸಮಾರಂಭ ನಡೆಯಲಿದೆ. ಜೆ ಕೃಷ್ಣ ಪಾಲೆಮಾರ್ ಉದ್ಘಾಟನೆ ನೆರವೇರಿಸಲಿರುವರು. ಸಂಘದ ಅಧ್ಯಕ್ಷ ಮುರಳೀಧರ್ ಸಿ.ಎಚ್. ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಕಾಂತ್ ಶೆಟ್ಟಿ, ಕಾರ್ಕಳ ಇವರಿಂದ ದಿಕ್ಕೂಚಿ ಭಾಷಣನಡೆಯಲಿದ್ದು ತದನಂತರ ರಾಮಕ್ಷತ್ರಿಯ ಸೇವಾ ಸಂಘ(ರಿ), ಮಂಗಳೂರು ಇದರ ಮಹಿಳಾ ಮತ್ತು ಯುವ ವೃಂದದ ಸದಸ್ಯರಿಂದ ‘ಕರ್ನಾಟಕ ವೈಭವ’ ಎನ್ನುವ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.
ಫೆ. 23 ರಂದು ರಾಮಕ್ಷತ್ರಿಯ ಸಮಾಜದ ಊರ, ಪರವೂರ ವಿವಿಧ ಸಂಘಗಳ ಸದಸ್ಯರಿಂದ ಪ್ರತಿಭಾ ಸ್ಪರ್ಧೆ ನಡೆಯ ಲಿದೆ. ಇದರ ಜೊತೆಯಲ್ಲಿ ರಾಮಕ್ಷತ್ರಿಯರ ಪಾರಂಪರಿಕ ಸಸ್ಯಹಾರಿ ಆಹಾರೋತ್ಸವ ಸ್ಪರ್ಧೆ ಕೂಡಾ ನಡೆಯಲಿದೆ. ಮಧ್ಯಾಹ್ನ ಗಂಟೆ 2 ರಿಂದ ಯುವ ಮತ್ತು ಮಹಿಳಾ ಸಮ್ಮೇಳನ, ಗಂಟೆ 3.00 ರಿಂದ ವಿಚಾರ ಗೋಷ್ಠಿ ನಡೆಯಲಿದೆ. ಸಂಜೆ ಗಂಟೆ 5 ರಿಂದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಜೆ ಕೃಷ್ಣ ಪಾಲೆಮಾರ್ ವಹಿಸಲಿರುವರು. ಈ ಸಮಾವೇಶಕ್ಕೆ ವಿಶೇಷ ಅತಿಥಿಯಾಗಿ ಮೈಸೂರು ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಹಾಗೂ ಸಂಸದರು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಮತ್ತು ಅತಿಥಿಗಳಾಗಿ ಸಂಸದ ಬ್ರಿಜೇಶ್ ಚೌಟ, ಉಮನಾಥ್ ಕೋಟ್ಯಾನ್, ಶಾಸಕರು, ಮುಲ್ಕಿ- ಮೂಡಬಿದಿರೆ ವಿಧಾನಸಭಾ ಕ್ಷೇತ್ರ ಭಾಗವಹಿಸಲಿದ್ದಾರೆ. ಇದರೊಂದಿಗೆ ಊರ ಪರವೂರ ಅನೇಕ ಗಣ್ಯರ ಘನ ಉಪಸ್ಥಿತಿ ಇರಲಿದ್ದಾರೆಂದು ತಿಳಿಸಿದರು.
ಅಂದು ರಾಮಕ್ಷತ್ರಿಯ ಸಮಾಜದ ಅತೀ ಹಿರಿಯ ವ್ಯಕ್ತಿಗಳಿಗೆ ಸನ್ಮಾನ ಕಾರ್ಯಕ್ರಮ ಮತ್ತು ಕೆಲವು ಗಣ್ಯರನ್ನು ಸನ್ಮಾನಿಸ ಲಾಗುವುದು. ಈ ಹಿಂದೆ 2014 ಮತ್ತು 2016 ರಲ್ಲಿ 2 ಬಾರಿ “ಕ್ಷಾತ್ರ ಸಂಗಮ”ವು ವಿಜೃಂಭಣೆಯಿಂದ ನಡೆದಿತ್ತು ಇದು ಮೂರನೇ ವರ್ಷದ ಕಾರ್ಯಕ್ರಮವಾಗಿದೆ ಎಂದರು, ಮುಂದಿನ ಕಾಲ ದ ದೇಶದ ಭದ್ರತೆಗೆ ಕೋಟೆಯನ್ನು ಕಟ್ಟಿದ್ದು ರಾಮ ಕ್ಷತ್ರಿಯರು ಇದರಿಂದಾಗಿ ನಮ್ಮ ಒಗ್ಗೂಡಿಸಲು ಇದೊಂದು ಉತ್ತಮ ಕಾರ್ಯವೆಂದು ಕೃಷ್ಣ.ಜೆ ಪಾಲೆಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜೆ.ಕೆ ರಾವ್, ಮುರಳಿಧರ್ ,ರವೀಂದ್ರ ಕೆ,ರವೀಂದ್ರ ರಾವ್ , ಕೃಷ್ಣ ಮುರಳಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post