• About us
  • Contact us
  • Disclaimer
Wednesday, April 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ :ಗೂಡ್ಸ್ ಟೆಂಪೋದಲ್ಲಿ 119 ಕೆ.ಜಿ. ಗಾಂಜಾ ಸಾಗಾಟ ನಾಲ್ವರು ಆರೋಪಿಗಳು ಅರೆಸ್ಟ್​

Coastal Times by Coastal Times
February 19, 2025
in ಕ್ರೈಮ್ ನ್ಯೂಸ್
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ :ಗೂಡ್ಸ್ ಟೆಂಪೋದಲ್ಲಿ 119 ಕೆ.ಜಿ. ಗಾಂಜಾ ಸಾಗಾಟ ನಾಲ್ವರು ಆರೋಪಿಗಳು ಅರೆಸ್ಟ್​
107
VIEWS
WhatsappTelegramShare on FacebookShare on Twitter

ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿ 119 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮೊಯ್ದಿನ್ ಶಬ್ಬಿರ್(38), ಆಂಧ್ರಪ್ರದೇಶ ರಾಜ್ಯದ ವಿಜಯವಾಡ ಜಿಲ್ಲೆಯ ಮಹೇಶ್ ದ್ವಾರಿಕಾನಾಥ ಪಾಂಡೆ(30), ಕೇರಳ ರಾಜ್ಯದ ಅಲುಯಾ ಜಿಲ್ಲೆಯ ಅಜಯ್ ಕೃಷ್ಣ(33) ಮತ್ತು ಹರಿಯಾಣ ರಾಜ್ಯದ ಜಿಂದ್ ಜಿಲ್ಲೆಯ ಜೀವನ್ ಸಿಂಗ್(35) ಬಂಧಿತರು.

ಈ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಪ್ರತಿಕ್ರಿಯಿಸಿ, “ಆರೋಪಿಗಳು ಆಂಧ್ರಪ್ರದೇಶ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಗೂಡ್ಸ್ ಟೆಂಪೋ ವಾಹನದಲ್ಲಿ ಹಾಗೂ ಕಾರಿನಲ್ಲಿ ಬೃಹತ್ ಪ್ರಮಾಣದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 119 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡು, ನಾಲ್ವರು‌ ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ತಿಳಿಸಿದರು.

“ಫೆ.17 ರಂದು ಮಂಗಳೂರು ನಗರಕ್ಕೆ ಆಂಧ್ರಪ್ರದೇಶ ರಾಜ್ಯದಿಂದ ಗೂಡ್ಸ್‌ ಟೆಂಪೋ ವಾಹನದಲ್ಲಿ ಹಾಗೂ ಕಾರಿನಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕಿನ ಕುರ್ನಾಡು ಗ್ರಾಮದ ಮಿತ್ತಕೋಡಿ ಎಂಬಲ್ಲಿ ಎರಡು ವಾಹನಗಳನ್ನು ಗುರುತಿಸಿ, ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದನ್ನು ಪತ್ತೆ ಹಚ್ಚಲಾಗಿದೆ ” ಎಂದು ಹೇಳಿದರು.

“ಆರೋಪಿಗಳು ಗಾಂಜಾ ಸಾಗಾಟಕ್ಕೆ ಉಪಯೋಗಿಸಿದ ವಾಹನವನ್ನು ಹಾಗೂ ಈ ವಾಹನಗಳಲ್ಲಿ ಸಾಗಿಸುತ್ತಿದ್ದ ರೂ. 35 ಲಕ್ಷ ಮೌಲ್ಯದ ನ 119 ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ 5 ಮೊಬೈಲ್ ಫೋನ್​ಗಳು, ಮೀನು ಸಾಗಾಟಕ್ಕೆ ಉಪಯೋಗಿಸುವ ಮೀನಿನಗೂಡ್ಸ್ ಟೆಂಪೋ ಹಾಗೂ ಇತರ ಸ್ವತ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಆಂಧ್ರಪ್ರದೇಶದಿಂದ ಬೆಂಗಳೂರು – ಮಂಗಳೂರು ಮೂಲಕ ಕೇರಳ ರಾಜ್ಯದ ಕಾಸರಗೋಡಿಗೆ ಗೂಡ್ಸ್ ಟೆಂಪೋ KL-01-BF-9310 (Tata 407- Insulator Vehicle) ಹಾಗೂ AP-31-BP-3575 ಮಾರುತಿ ಆಲ್ಟೋ ಕಾರನ್ನು ಆರೋಪಿಗಳಿಂದ ಸ್ವಾಧೀನಪಡಿಸಲಾಗಿದೆ. ಸ್ವತ್ತಿನ ಒಟ್ಟು ಮೌಲ್ಯ 51 ಲಕ್ಷ ರೂ. ಆಗಬಹುದು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ” ಎಂದು ಮಾಹಿತಿ ನೀಡಿದರು.

“ಆರೋಪಿಗಳ ಪೈಕಿ ಮೊಯಿದ್ದೀನ್ ಶಬ್ಬಿರ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು, ಮಂಜೇಶ್ವರ, ಕುಂಬ್ಳೆ, ವಿದ್ಯಾನಗರ ಪೊಲೀಸ್ ಠಾಣೆಗಳಲ್ಲಿ ದನಗಳ್ಳತನ, ಹಲ್ಲೆ, ಕೊಲೆ ಹೀಗೆ ಒಟ್ಟು 12 ಪ್ರಕರಣ ದಾಖಲಾಗಿರುತ್ತವೆ. ಅಲ್ಲದೇ ಆಂಧ್ರಪ್ರದೇಶದಲ್ಲಿ ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಪ್ರಕರಣವೊಂದು ದಾಖಲಾಗಿರುತ್ತದೆ. ಈತನನ್ನು 2023 ನೇ ಇಸವಿಯಲ್ಲಿ ಸಿಸಿಬಿ ಪೊಲೀಸರ ತಂಡ ಬಂಧಿಸಿ 23.250 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು. ಈತ ಸುಮಾರು ಒಂದೂವರೆ ವರ್ಷ ಜೈಲ್ ನಲ್ಲಿದ್ದು, ಸುಮಾರು 6 ತಿಂಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದು, ಪುನಃ ಅದೇ ಗಾಂಜಾ ಸಾಗಾಟ ಕೃತ್ಯದಲ್ಲಿ ಭಾಗಿಯಾಗಿರುತ್ತಾನೆ ಎಂದು” ಹೇಳಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ತಿಂಗಳ ಸ್ಕಿಂ ಹೆಸರಿನಲ್ಲಿ ರೂ 1000ದಂತೆ ಸಂಗ್ರಹಿಸಿ ವಂಚನೆ; ಸ್ಕೀಂ ಮಾಲಕ ಸುರತ್ಕಲ್ ಮೂಲದ ಮುಹಮ್ಮದ್ ಸೇರಿ ಐವರು ಆರೋಪಿಗಳ ಬಂಧನ

Next Post

ಫೆ. 24ರಂದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅಭಿವಂದನಾ ಕಾರ್ಯಕ್ರಮ, 76 ಮಂದಿಗೆ ಸವಲತ್ತು ವಿತರಣೆ

Related Posts

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,
ಕ್ರೈಮ್ ನ್ಯೂಸ್

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
70
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
48
Next Post
ಫೆ. 24ರಂದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅಭಿವಂದನಾ ಕಾರ್ಯಕ್ರಮ, 76 ಮಂದಿಗೆ ಸವಲತ್ತು ವಿತರಣೆ

ಫೆ. 24ರಂದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅಭಿವಂದನಾ ಕಾರ್ಯಕ್ರಮ, 76 ಮಂದಿಗೆ ಸವಲತ್ತು ವಿತರಣೆ

Discussion about this post

Recent News

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
46
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d