ಮಂಗಳೂರು: ಲೋಕಸಭಾ ಚುನಾವಣೆಯು ಎ.26ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಜಿಲ್ಲೆಯ ಆಯುಧ ಪರವಾನಿಗೆ ಹೊಂದಿರುವ ಎಲ್ಲಾ ರೀತಿಯ ಶಸ್ತ್ರಾಸ್ತ್ರಗಳನ್ನು ಎ.1ರೊಳಗೆ ಠೇವಣಿ ಇರಿಸಲು ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಪ್ರಸಕ್ತ ಕಾನೂನು ಸುವ್ಯವಸ್ಥೆ ಸಾರ್ವಜನಿಕ ಶಾಂತಿ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ (ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಬೆಳೆ ಮತ್ತು ಆತ್ಮ ರಕ್ಷಣೆಗಾಗಿ ಮಂಜೂರು ಮಾಡಲಾಗಿರುವ ಶಸ್ತ್ರಾಸ್ತ್ರಗಳನ್ನು (ರಿವಾಲ್ವರ್/ಪಿಸ್ತೂಲ್/ಎಸ್‌ಬಿಬಿಎಲ್/ಡಿಬಿಬಿಎಲ್/ಎಸ್‌ಬಿಎಂಎಲ್/ಡಿಬಿಎಂಎಲ್/ಎನ್‌ಪಿಬಿ ರೈಫಲ್) ಚುನಾವಣಾ ಅವಧಿಯಲ್ಲಿ ಪೊಲೀಸ್ ಠಾಣೆ ಅಥವಾ ಜಿಲ್ಲೆಯಲ್ಲಿನ ನಮೂನೆ ನಂಬ್ರ 8ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಠೇವಣಿಯಲ್ಲಿರಿಸಲು ಸೂಚಿಸಿದ್ದಾರೆ.
Discussion about this post