• About us
  • Contact us
  • Disclaimer
Monday, September 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

Coastal Times by Coastal Times
March 19, 2026
in ಕ್ರೈಮ್ ನ್ಯೂಸ್
ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು
39
VIEWS
WhatsappTelegramShare on FacebookShare on Twitter

ಬೆಳ್ತಂಗಡಿ: ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಗೆಳೆಯರೊಂದಿಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಮುಸ್ಲಿಂ ಬಾಲಕನ ಮೇಲೆ ಬಜರಂಗ ದಳದ ಕಾರ್ಯಕರ್ತರೆನ್ನಲಾದ ತಂಡವೊಂದು ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಜಿರೆಯ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಬಾಲಕ, ಮಾರ್ಚ್ 11ರಂದು ತನ್ನ ಸ್ನೇಹಿತರೊಂದಿಗೆ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಹೋಗಿದ್ದಾನೆ. ರಾತ್ರಿ 8.30ರ ಸುಮಾರಿಗೆ ಜಾತ್ರೆಯಲ್ಲಿ ಆತನ ಸ್ನೇಹಿತರು ಜಾಯಿಂಟ್ ವ್ಹೀಲ್ ಮೇಲೆ ಹತ್ತಿದ ಸಂದರ್ಭದಲ್ಲಿ ಅವರ ಮೊಬೈಲ್ ಹಿಡಿದುಕೊಂಡು ಸಮೀಪದಲ್ಲಿ ನಿಂತಿದ್ದ ಬಾಲಕನನ್ನು ಉಜಿರೆಯ ಬಜರಂಗ ದಳದ ಕಾರ್ಯಕರ್ತರೆನ್ನಲಾದ ಗೌರವ್ ಶೆಟ್ಟಿ ಮತ್ತು ರಮೇಶ್ ಸೇರಿದಂತೆ ಇತರರು “ನೀನು ಮುಸ್ಲಿಮನಾ?” ಎಂದು ಪ್ರಶ್ನಿಸಿದ್ದಾರೆ. ಹೌದು ಎಂದಾಗ ಆತನ ಮೇಲೆ ಮುಗಿಬಿದ್ದು ಹಲ್ಲೆ ನಡೆಸಿದ್ದಾರೆ. ಈ ವೇಳೆ ಆತನ ಸ್ನೇಹಿತರು ಬಿಡಿಸಲು ಬಂದರೂ ಅವರ ಮೇಲೆಯೂ ಹಲ್ಲೆಗೆ ಮುಂದಾಗಿದ್ದಾರೆ.

ಜಾತ್ರೆಯ ನಡುವೆ ಜನಸಂದಣಿ ಹೆಚ್ಚಾದಾಗ ಬಾಲಕನನ್ನು ಅಲ್ಲಿಂದ ಬೈಕ್‌ನಲ್ಲಿ ಅಪಹರಿಸಿ ಸುಮಾರು ಐದು ಕಿ.ಮೀ ದೂರಕ್ಕೆ ಕೊಂಡೊಯ್ದು, ನಿರ್ಜನ ಪ್ರದೇಶದಲ್ಲಿ ಹತ್ತಕ್ಕೂ ಹೆಚ್ಚು ಮಂದಿಯ ತಂಡ ನಿರಂತರವಾಗಿ ಹಲ್ಲೆ ನಡೆಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆತನಿಗೆ ಬೆದರಿಕೆ ಹಾಕಿ ವಿಡಿಯೋ ಕೂಡ ಮಾಡಿಕೊಂಡಿದ್ದಾರೆ. ನಿರಂತರ ಹಲ್ಲೆ ನಡೆಸಿದ ಬಳಿಕ ತಡರಾತ್ರಿ ಬಾಲಕನನ್ನು ಉಜಿರೆಯ ಸಾಯಿರಾಂ ಕಟ್ಟಡದ ಬಳಿ ಬಿಟ್ಟು ಹೋಗಿದ್ದು, ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆಯಿಂದ ಭಯಗೊಂಡಿದ್ದ ಬಾಲಕ ಕೆಲವು ದಿನಗಳ ಬಳಿಕ ತನ್ನ ಮನೆಯಲ್ಲಿ ತಿಳಿಸಿದ್ದಾನೆ.‌ ಇದರಂತೆ, ಮಾರ್ಚ್‌ 18ರಂದು ಘಟನೆಯ ಬಗ್ಗೆ ಬಾಲಕನ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ‌ ದೂರು ನೀಡಿದ್ದಾರೆ. ‌ದೂರಿನಲ್ಲಿ ಹಿಂದೂ ಸಂಘಟನೆಗೆ ಸೇರಿದ ಗೌರವ್ ಶೆಟ್ಟಿ, ರಮೇಶ್ ಹಾಗೂ ಇತರರು ಸೇರಿಕೊಂಡು ಬಾಲಕನನ್ನು ಅಪಹರಿಸಿ ಹಲ್ಲೆ‌ ನಡೆಸಿದ್ದಾರೆಂದು ದೂರಲಾಗಿದೆ. ದೂರಿನ‌ ಆಧಾರದ ಮೇಲೆ ಎಫ್ಐಆರ್ ದಾಖಲಿಸಿ ತನಿಖೆ ಕೈಗೆತ್ತಿಕೊಂಡ ಬೆಳ್ತಂಗಡಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಹಲ್ಲೆ, ಕೊಲೆ ಬೆದರಿಕೆ, ಗುಂಪು ಹಲ್ಲೆ, ಜೀವ ಬೆದರಿಕೆ, ಅಪಹರಣ ಹಾಗೂ ಆತ್ಮಹತ್ಯೆಗೆ ಪ್ರೇರಣೆ ಆರೋಪಗಳ ಮೇರೆಗೆ ಪೊಲೀಸರು BNS 137(2), 115(2), 351(2), 352, 353(2) ಹಾಗೂ 190 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

Next Post

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ಉಳ್ಳಾಲದ ನಟೋರಿಯಸ್ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

Related Posts

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
51
ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
53
Next Post
ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ  ಉಳ್ಳಾಲದ ನಟೋರಿಯಸ್ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ಉಳ್ಳಾಲದ ನಟೋರಿಯಸ್ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

Discussion about this post

Recent News

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
64
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
56
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d