ಉಳ್ಳಾಲ, ಮಾ.18: 9 ವರ್ಷದ ಅಪ್ರಾಪ್ತ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಪುಸಲಾಯಿಸಿ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನ ಕೊಣಾಜೆ ಪೊಲೀಸರು ಪೋಕ್ಸೊ ಪ್ರಕರಣದಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೋಟೆಕಾರ್ ಮಡ್ಯಾರ್ ನಿವಾಸಿ ಆಶೀಶ್ ಪೂಜಾರಿ (33) ಎಂದು ಗುರುತಿಸಲಾಗಿದೆ. ಆರೋಪಿಯು ಅಶ್ಲೀಲ ವಿಡಿಯೋ ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post