ಸುಳ್ಯ: ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಮಂಗಳವಾರ ಪಟ್ಟಣದಲ್ಲಿ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಪ್ರಚಾರ ಸಮಿತಿ ಕಚೇರಿ ಬಳಿಯಿಂದ ತಾಲ್ಲೂಕು ಕಚೇರಿ ತನಕ ಮೆರವಣಿಗೆಯಲ್ಲಿ ಸಾಗಿ ಬಂದರು. ಜಿ.ಕೃಷ್ಣಪ್ಪ ಅವರು ತೆರೆದ ವಾಹನದಲ್ಲಿ ಕಾರ್ಯಕರ್ತರತ್ತ ಕೈಬೀಸಿ ಬಂದರು.
ಜಿ.ಕೃಷ್ಣಪ್ಪ ಸುಳ್ಯದ ಚೆನ್ನಕೇಶವ ದೇವಸ್ಥಾನ, ಮೊಗರ್ಪಣೆ ಮಸೀದಿ, ಬೀರಮಂಗಲ ಸೈಂಟ್ ಬ್ರಜಿಡ್ಸ್ ಚರ್ಚ್‌ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಸುಳ್ಯದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ‘ಮೂರು ದಶಕಗಳಿಗೂ ಅಧಿಕ ಸಮಯ ದಿಂದ ಕಾಂಗ್ರೆಸ್ ಶಾಸಕರನ್ನು ಕಾಣದ ಸುಳ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ. ಸುಳ್ಯದಲ್ಲಿ ಕಾರ್ಯಕರ್ತರ ಸ್ವಾಭಿ ಮಾನದ ಚುನಾವಣೆ’ ಎಂದು ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹ ಮೂರ್ತಿ ಹೇಳಿದರು.
ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕೇಂದ್ರದ ಬಿಜೆಪಿ ಸರ್ಕಾರದ ಆಡಳಿತ ವೈಖರಿ ಯಿಂದ ಜನರು ಬೇಸತ್ತು ಹೋಗಿದ್ದಾರೆ. ಆರ್ಥಿಕ ದುಸ್ಥಿತಿಯಿಂದ ರೈತರ, ಜನ ಸಾಮಾನ್ಯರ ಜೀವನ ತತ್ತರಿಸಿದೆ. ಬಿಜೆಪಿ ಸರ್ಕಾರ ಶ್ರೀಮಂತರ ಪರ ಇದ್ದರೆ, ಕಾಂಗ್ರೆಸ್ ಬಡವರ, ಹಿಂದುಳಿದವರ ಪಕ್ಷವಾಗಿದೆ’ ಎಂದರು.
Discover more from Coastal Times Kannada
Subscribe to get the latest posts sent to your email.
Discussion about this post