ಮಂಗಳೂರು : ಐಚಿ ನಗೋಯಾ ಏಷ್ಯನ್ ಗೇಮ್ಸ್ 2026ನಲ್ಲಿ ಸರ್ಫಿಂಗ್‌ನಲ್ಲಿ ಭಾರತದ ಸ್ಪರ್ಧಿಗಳು ಚೊಚ್ಚಲ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೇ 29ರಿಂದ 31ರವರೆಗೆ ಮಂಗಳೂರಿನ ತಣ್ಣೀರುಭಾವಿಯ ಬ್ಲೂ ಬೇ ಎಕೋ ಬೀಚ್‌ನಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ.ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಕರ್ನಾಟಕದ ಜತೆಗೆ, ಎನ್‌ಎಂಶಿಎ ಸಹಭಾಗಿತ್ವದಲ್ಲಿ ಮೂರು ದಿನಗಳ ಮುಕ್ತ ಸರ್ಫಿಂಗ್ ಸ್ಪರ್ಧೆ ನಡೆಯಲಿದೆ. 2017ರಿಂದ ಮಂಗಳೂರಿನಲ್ಲಿ ಸರ್ಫಿಂಗ್ ಸ್ಪರ್ಧೆಯನ್ನು ನಡೆಸಲಾಗುತ್ತಿದ್ದು, ಸ್ಪರ್ಧೆಯ ಚಾಂಶಿಯನ್‌ಗಳು ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕ ಸರಕಾರದ ಬೆಂಬಲದೊಂದಿಗೆ ಸರ್ಫಿಂಗ್ ಸ್ಪರ್ಧೆಯನ್ನು ನಡೆಸಲಾಗುತ್ತಿದ್ದು, ಇದು ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಉತ್ತೇಜನಕ್ಕೂ ಪೂರಕವಾಗಿದೆ. ಸರ್ಫಿಂಗ್ ಕ್ರೀಡೆಗೆ ಮಂಗಳೂರು ಬೀಚ್ ಪ್ರಸಕ್ತವಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಸರ್ಫಿಂಗ್ ಕ್ಲಬ್‌ಗಳು ಇಲ್ಲಿ ನೆಲೆ ನಿಂತಿದ್ದು, ಮೀನುಗಾರ ಸಮುದಾಯ ಸೇರಿದಂತೆ ಸ್ಥಳೀಯ ಹಲವು ಪ್ರತಿಭೆಗಳ ಉಗಮಕ್ಕೂ ಕಾರಣವಾಗಿದೆ. ಸ್ಪರ್ಧೆಯಲ್ಲಿ ಕರ್ನಾಟಕ, ಕೇರಳ, ಗೋವಾ, ಆಂಧ್ರ ಪ್ರದೇಶ ಸೇರಿದಂತೆ ದೇಶದ ವಿವಿಧ ಕಡೆಗಳಿಂದ ಸರ್ಫಿಂಗ್ ಚಾಂಶಿಯನ್‌ಗಳು ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸರ್ಫಿಂಗ್ ತೀರ್ಪುಗಾರರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಈ ಸಂದರ್ಭ ಸರ್ಫಿಂಗ್ ಚಾಂಶಿಯನ್‌ಶಿಪ್‌ನ ಲೋಗೋವನ್ನು ಅನಾವರಣಗೊಳಿಸಲಾಯಿತು.
ಸರ್ಫಿಂಗ್ ಸ್ವಾಮಿ ಫೌಂಡೇಶನ್‌ನ ಧನಂಜಯ್ ಶೆಟ್ಟಿ ಮಾತನಾಡಿ, ಕಳೆದ ಕೆಲ ವರ್ಷಗಳಲ್ಲಿ ಸರ್ಫರ್‌ಗಳ ಬೆಳವಣಿಗೆ ಆಶಾಯದಾಕವಾಗಿದೆ. ಈ ಚಾಂಶಿಯನ್‌ಶಿಪ್‌ನಲ್ಲಿ ದೇಶದ ಅಗ್ರ ಸರ್ಫರ್‌ಗಳು ವಿವಿಧ ವಿಭಾಗಗಳ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಸರ್ಫಿಂಗ್ ಕ್ಷೇತ್ರದ ರೋಮಾಂಚಕ ಕ್ಷಣಗಳಿಗೆ ಮಂಗಳೂರಿನ ಕಡಲ ಕಿನಾರೆ ಸಾಕ್ಷಿಯಾಗಲಿದೆ ಎಂದು ಅವರು ಹೇಳಿದರು.
ಗೋಷ್ಟಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ನರ್ವಡೆ ವಿನಾಯಕ ಕಾರ್ಭಾರಿ , ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರಾದ ಮೀನಾಕ್ಷಿ ಆರ್ಯ, ಸರ್ಫಿಂಗ್ ಸ್ವಾಮಿ ಫೌಂಡೇಶನ್ ಇದರ ಅಧ್ಯಕ್ಷರಾದ ಧನಂಜಯ್ ಶೆಟ್ಟಿ, ಸರ್ಫಿಂಗ್ ತಂಡದ ಸದಸ್ಯರಾದ ಶ್ಯಾಮ್,ದ್ರುವಾ ,ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳಾದ ಪ್ರದೀಪ್ ಡಿಸೋಜಾ ಸಹಿತ ಮತ್ತಿತರರು ಉಪಸ್ಥಿತರಿದ್ದರು .
Discover more from Coastal Times Kannada
Subscribe to get the latest posts sent to your email.







Discussion about this post