ಬೆಂಗಳೂರು, (ಜೂ 19): ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (HSRP) ಅಳವಡಿಕೆಗೆ ಈಗಾಗಲೇ ಎರಡ್ಮೂರು ಬಾರಿ ಅವಧಿ ವಿಸ್ತರಣೆ ಮಾಡಿದ್ದು, ಜೂನ್ 12ಕ್ಕೆ ಡೆಡ್ಲೈನ್ ಕೊನೆಗೊಂಡಿದೆ. ಆದರೆ, ಕರ್ನಾಟಕ ಹೈಕೋರ್ಟ್ ) ಹೆಚ್ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಜುಲೈ 4ರ ವರೆಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅಲ್ಲದೆ, ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ವಿಸ್ತರಿಸಲು ಒಪ್ಪಿಗೆ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಕಾಲಾವಕಾಶ ನೀಡಿದೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಸೆಪ್ಟೆಂಬರ್15 ವರಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್ಲೈನ್ ನೀಡಲಾಗಿದೆ. ಸೆಪ್ಟೆಂಬರ್ 15 ಬಳಿಕ ಅವಧಿ ವಿಸ್ತರಣೆ ಇಲ್ಲ. ಈಗಾಗಲೇ ಹಲವು ಬಾರಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು. ಶೀಘ್ರದಲ್ಲೇ ಹೆಚ್ಎಸ್ಆರ್ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ. ಮತ್ತೆ ಗಡುವು ವಿಸ್ತರಣೆ ಮಾಡಲ್ಲ. ಸೆಪ್ಟೆಂಬರ್ 15ರೊಳಗೆ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಸಿಕೊಳ್ಳಿ ಎಂದು ವಾಹನ ಸವಾರರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮನವಿ ಮಾಡಿದರು.
2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಸಲು ಜೂನ್ 12 ಕೊನೆ ದಿನವಾಗಿತ್ತು. ಆದ್ರೆ, ಹೆಚ್‌ಎಸ್‌ಆರ್‌ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4ರ ತನಕ ವಿಸ್ತರಣೆ ಮಾಡಿದೆ. ಇದೀಗ ಖುದ್ದು ರಾಜ್ಯ ಸರ್ಕಾರ, ಸೆಪ್ಟೆಂಬರ್ 15ರ ವರೆಗೆ ವಿಸ್ತರಣೆ ಮಾಡಲು ಮುಂದಾಗಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದು, ಶೀಘ್ರದಲ್ಲೇ ಸರ್ಕಾರಿಂದ ಅಧಿಕೃತ ಸುತ್ತೋಲೆ ಹೊರಬೀಳಲಿದೆ.
Discover more from Coastal Times Kannada
Subscribe to get the latest posts sent to your email.
Discussion about this post