• About us
  • Contact us
  • Disclaimer
Thursday, April 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

Coastal Times by Coastal Times
June 19, 2025
in ಕರಾವಳಿ
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ
229
VIEWS
WhatsappTelegramShare on FacebookShare on Twitter

ಬಂಟ್ವಾಳ : ಬಂಟ್ವಾಳ ತಾಲೂಕು ನಾವೂರು ಗ್ರಾಮದ ಬಡಗುಂಡಿ ಸಮೀಪ ಕಿಲ್ತೋಡಿಯ ಮನೆಯೊಂದರಲ್ಲಿ ಸಜೀಪದ ತಿಮ್ಮಪ್ಪ ಮೂಲ್ಯ (52) ಹಾಗೂ ಅವರ ಗರ್ಭಿಣಿ ಪತ್ನಿ ಜಯಂತಿ (45) ಅವರ ಮೃತದೇಹಗಳು ಇಂದು (ಗುರುವಾರ) ಬೆಳಗ್ಗೆ ಪತ್ತೆಯಾಗಿವೆ.

ಯಾವುದೋ ವಿಷಯಕ್ಕೆ ಪತ್ನಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಮೃತರ ಸಂಬಂಧಿಗಳ ದೂರಿನಂತೆ ಪ್ರಕರಣ ದಾಖಲಾಗಿದೆ. ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿದ್ದರೆ, ತಿಮ್ಮಪ್ಪ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸಮೀಪದವರು ಬೆಳಗ್ಗೆಯಾದರೂ ಬಾಗಿಲು ತೆರೆಯಲಿಲ್ಲವೇಕೆ ಎಂದು ಸಂಶಯದಿಂದ ಗಮನಿಸಿದಾಗ ವಿಷಯ ಗೊತ್ತಾಗಿದ್ದು, ಅವರು ಕೂಡಲೇ ಪೊಲೀಸರ ಗಮನಕ್ಕೆ ತಂದರು. ಸೀಮಂತ ದಿನ ನಿಗದಿಯಾಗಿತ್ತು:ಜಯಂತಿ ಅವರು ಎಂಟು ತಿಂಗಳ ಗರ್ಭಿಣಿಯಾಗಿದ್ದು, ಜುಲೈ 2ರಂದು ಸೀಮಂತ ನಡೆಸುವುದು ಎಂದು ದಿನ ನಿಗದಿಯಾಗಿತ್ತು. ಈ ನಡುವೆ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಕುಟಂಬ ವರ್ಗವನ್ನು ದುಃಖದ ಮಡುವಿನಲ್ಲಿರುವಂತೆ ಮಾಡಿದೆ.

ತಿಮ್ಮಪ್ಪ ಮೂಲ್ಯ ಅವರು ಸಜೀಪದಲ್ಲಿ ಅಂಗಡಿ ನಡೆಸಿಕೊಂಡಿದ್ದರು. ಅವರ ಪತ್ನಿಯ ತವರುಮನೆ ಕಿಲ್ತೋಡಿಯಲ್ಲಿ ಘಟನೆ ನಡೆದಿದೆ. ಕೆಲ ಸಮಯಗಳಿಂದ ಪತಿ, ಪತ್ನಿ ಇದೇ ಮನೆಯಲ್ಲಿ ವಾಸಿಸುತ್ತಿದ್ದರು. ಜಯಂತಿ ಅವರಿಗೆ ತಂಗಿ ಇದ್ದು, ಅವರು ಫರಂಗಿಪೇಟೆಯಲ್ಲಿ ವಿವಾಹವಾಗಿದ್ದರು. ಕಿಲ್ತೋಡಿಯ ಸಣ್ಣ ಮನೆಯಲ್ಲಿ ಇಬ್ಬರೂ ವಾಸಿಸುತ್ತಿದ್ದು, ಅನ್ಯೋನ್ಯವಾಗಿಯೇ ಇದ್ದು, ವಿವಾಹವಾಗಿ ಸುಮಾರು 16 ವರ್ಷಗಳ ಬಳಿಕ ಗರ್ಭಿಣಿಯಾಗಿರುವುದು ಕುಟುಂಬದಲ್ಲಿ ಸಂತಸವನ್ನೂ ತಂದಿತ್ತು. ಈ ಹಿನ್ನೆಲೆಯಲ್ಲಿ ಅವರ ಸೀಮಂತ ಕಾರ್ಯಕ್ರಮ ಜುಲೈ 2ರಂದು ನಿಗದಿಯಾಗಿತ್ತು.

ತಿಮ್ಮಪ್ಪ ಮೂಲ್ಯ ಅವರು ಯಾವ ಕಾರಣಕ್ಕೆ ಈ ಕಠೋರ ಕೃತ್ಯವನ್ನು ಎಸಗಿದ್ದಾರೆ ಎಂಬ ಕಾರಣ ಇನ್ನೂ ನಿಗೂಢವಾಗಿದೆ. ಆರ್ಥಿಕ ಸಂಕಷ್ಟವೇ ಅಥವಾ ಜಗಳವೇನಾದರೂ ಆಗಿತ್ತೇ ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಯಾವುದೋ ಕಾರಣಕ್ಕೆ ಜಗಳ ನಡೆದು, ಕತ್ತು ಹಿಸುಕಿ ಪತ್ನಿಯ ಕೊಲೆಗೈದು ಬಳಿಕ ತಾನೂ ಸಾವನ್ನಪ್ಪಿರುವ ಸಂಶಯದ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ವಿಸ್ತೃತ ತನಿಖೆಯಲ್ಲಿ ಇನ್ನಷ್ಟು ಮಾಹಿತಿ ಹೊರಬರಬೇಕಾಗಿದೆ.

ಪ್ರಕಟಣೆಯಲ್ಲಿ ಏನಿದೆ? ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹೊರಡಿಸಿರುವ ಪತ್ರಿಕಾ ಪ್ರಕಟಣೆಯ ವಿವರ ಹೀಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ, ನಾವೂರು ಗ್ರಾಮದ ಬಡಗುಂಡಿಯಲ್ಲಿ ಜೂನ್ 18ರ ರಾತ್ರಿ 11ರಿಂದ ಜೂನ್ 19ರ ಬೆಳಗ್ಗೆ 8ರ ಮಧ್ಯೆ ಅವಧಿಯಲ್ಲಿ ತಿಮ್ಮಪ್ಪ ರಾಮ ಮೂಲ್ಯ (52) ತನ್ನ ಹೆಂಡತಿ ಜಯಂತಿ (45) ಅವರೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು, ಜಗಳ ವಿಕೋಪಕ್ಕೆ ತಿರುಗಿ ಜಯಂತಿ ಅವರಿಗೆ ಹಲ್ಲೆ ಮಾಡಿ, ಕತ್ತು ಹಿಚುಕಿ ಸಾಯಿಸಿರುತ್ತಾನೆ. ನಂತರ ತಿಮ್ಮಪ್ಪ ಅಡುಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ. ಘಟನೆಗೆ ಸಂಬಂಧಿಸಿದಂತೆ, ಮೃತ ಜಯಂತಿ ಅವರ ತಂಗಿ ಸುಜಾತ ಅವರು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 72/2025 U/S 103 BNS ಹಾಗೂ ಮೃತ ತಿಮ್ಮಪ್ಪ ಅವರ ಅಣ್ಣ ವಿಶ್ವನಾಥ ಸಜೀಪಮೂಡ, ಬಂಟ್ವಾಳ ಅವರ ದೂರಿನ ಮೇರೆಗೆ UDR No 25/2025 U/S 194 BNSS ರಂತೆ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

Next Post

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

Related Posts

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ
ಕರಾವಳಿ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
3
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್
ಕರಾವಳಿ

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
29
Next Post
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

Discussion about this post

Recent News

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
230
ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d