ಬೆಂಗಳೂರು, ಆಗಸ್ಟ್ 19: ಧರ್ಮಸ್ಥಳದಲ್ಲಿ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಅನಾಮಿಕ ವ್ಯಕ್ತಿಯೋರ್ವ ಧರ್ಮಸ್ಥಳದ ಸುತ್ತಮುತ್ತ ನೂರಾರು ಶವಗಳನ್ನು ಹೂತು ಹಾಕಿದ್ದೇನೆಂದು ಹೇಳಿದ್ದು, ಈ ಸಂಬಂಧ ಎಸ್ಐಟಿ ಇಡೀ ಧರ್ಮಸ್ಥಳದಲ್ಲಿ ಅನಾಮಿಕ ವ್ಯಕ್ತಿ ತೋರಿಸಿದ ಸ್ಥಳಗಳನ್ನು ಅಗೆದು ಶೋಧ ನಡೆಸಿದೆ. ಆದ್ರೆ, ಒಂದರಲ್ಲಿ ಮಾತ್ರ ಮಾನವನ ಅಸ್ಥಿಪಂಜರ ಮಾತ್ರ ದೊರಕಿರುವುದು ಬಿಟ್ಟರೇ ಬೇರೆ ಯಾವುದೇ ಕುರುಹುಳು ಸಿಕ್ಕಿಲ್ಲ. ಆದ್ರೆ, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬೇರೆ ಬೇರೆ ರೀತಿಯ ಚರ್ಚೆಗಳು ನಡೆಯುತ್ತಿವೆ. ಈ ಸಂಬಂಧ ಇದೀಗ ಸ್ವತಃ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳದ ಬಗ್ಗೆ ಅನಗತ್ಯವಾಗಿ ಗೊಂದಲ ಮೂಡಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಈ ಮೂಲಕ ಧರ್ಮಸ್ಥಳಕ್ಕೆ ಕಳಂಕ ತರಲು ಕೆಲವರು ಯತ್ನಿಸುತ್ತಿದ್ದಾರೆ. ಎಸ್‌ಐಟಿಯಿಂದ ಸತ್ಯ ಹೊರ ತರುತ್ತೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳ ತನಿಖಾ ವರದಿಗಾಗಿ ನಾವು ಕಾಯುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರೀಯ ಸುದ್ದಿ ಏಜೆನ್ಸಿ ಪಿಟಿಐಗೆ ಸಂದರ್ಶನ ನೀಡಿರುವ ವೀರೇಂದ್ರ ಹೆಗ್ಗಡೆ, “ಎಸ್ಐಟಿ ತನಿಖೆಯನ್ನು ಸ್ವಾಗತಿಸುತ್ತೇನೆ” ಎಂದು ತಿಳಿಸಿದ್ದಾರೆ.
“ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂದು ನಡೆಸುತ್ತಿರುವ ಎಸ್‌ಐಟಿ ತನಿಖೆಗೆ ಸಂಪೂರ್ಣವಾಗಿ ಸಹಕರಿಸಲು ಸಿದ್ಧರಿದ್ದೇವೆ. ಸತ್ಯ ಎಲ್ಲರಿಗೂ ತಿಳಿಯಬೇಕು. ಈ ಸಂಬಂಧ ಆದಷ್ಟು ಬೇಗ ತನಿಖೆ ಪೂರ್ಣಗೊಳ್ಳಬೇಕು. ನಾವು ನಮ್ಮ ಎಲ್ಲಾ ರೀತಿಯ ಸಹಕಾರ ನೀಡುತ್ತಲೇ ಇದ್ದೇವೆ” ಎಂದು ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.
“ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ಪ್ರಕರಣವನ್ನಿಟ್ಟುಕೊಂಡು ದೇವಸ್ಥಾನದ ಹೆಸರನ್ನು ಹಾಳು ಮಾಡಲು ಕೆಲವರು ಯತ್ನಿಸುತ್ತಿರುವುದು ಕಂಡುಬಂದಿದೆ. ಅವರೆಲ್ಲರ ಹೆಸರುಗಳು ಕೂಡ ಸಾರ್ವಜನಿಕ ವಲಯದಲ್ಲಿದೆ. ಎಸ್‌ಐಟಿ ಈ ಬಗ್ಗೆ ತನಿಖೆ ನಡೆಸುತ್ತಿದೆ. ಅದರ ಫಲಿತಾಂಶಕ್ಕಾಗಿ ನಾವೂ ಕೂಡ ಕಾಯುತ್ತಿದ್ದೇವೆ. ದೇವಸ್ಥಾನದ ಹೆಸರನ್ನು ಹಾಳು ಮಾಡುತ್ತಿರುವವರ ಬಗ್ಗೆಯೂ ತನಿಖೆ ನಡೆಸುವುದು ಎಸ್‌ಐಟಿಯ ಕಾರ್ಯ” ಎಂದು ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ ಪಿಟಿಐ ಸಂದರ್ಶನದಲ್ಲಿ ಆಗ್ರಹಿಸಿದ್ದಾರೆ.
“ಸೌಜನ್ಯ ಪ್ರಕರಣ ನಡೆದಾಗ ನಾವೇ ಪೊಲೀಸರಲ್ಲಿ ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಕೋರಿಕೊಂಡಿದ್ದೆವು. ಈ ಪ್ರಕರಣಕ್ಕೂ ಧರ್ಮಸ್ಥಳಕ್ಕೂ ಯಾವುದೇ ಸಂಬಂಧವಿಲ್ಲದಿದ್ದರೂ ನಮ್ಮ ಕುಟುಂಬದ ಸದಸ್ಯರ ಮೇಲೆಯೇ ಹಾಕಲಾಯಿತು. ಆರೋಪ ಕೇಳಿಬಂದ ಕುಟುಂಬದ ಸದಸ್ಯ ಆ ಸಂದರ್ಭದಲ್ಲಿ ನಮ್ಮ ದೇಶದಲ್ಲೇ ಇರಲಿಲ್ಲ. ಅವರು ವಿದ್ಯಾಭ್ಯಾಸದ ಉದ್ದೇಶಕ್ಕಾಗಿ ಅಮೇರಿಕಾದಲ್ಲಿದ್ದರು. ಸೌಜನ್ಯ ಪ್ರಕರಣದಲ್ಲಿ ನಮ್ಮ ಕುಟುಂಬ ಮೇಲಿನ ಆರೋಪಗಳೆಲ್ಲವೂ ಸುಳ್ಳು. ಆರೋಪಗಳೆಲ್ಲವೂ ಆಧಾರರಹಿತ ಮತ್ತು ನಮ್ಮ ವಿರುದ್ಧ ಅಪಪ್ರಚಾರದ ಭಾಗವಾಗಿದೆ” ಎಂದು ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post