• About us
  • Contact us
  • Disclaimer
Saturday, June 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಧರ್ಮಸ್ಥಳದಲ್ಲಿ ಬಹು ಕೊಲೆ, ಅತ್ಯಾಚಾರ ಆರೋಪ ಆಧಾರರಹಿತ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

Coastal Times by Coastal Times
August 19, 2025
in ಕರಾವಳಿ
ಧರ್ಮಸ್ಥಳದಲ್ಲಿ ಬಹು ಕೊಲೆ, ಅತ್ಯಾಚಾರ ಆರೋಪ ಆಧಾರರಹಿತ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
60
VIEWS
WhatsappTelegramShare on FacebookShare on Twitter

ಬೆಂಗಳೂರು, ಆಗಸ್ಟ್ 19: ಧರ್ಮಸ್ಥಳದಲ್ಲಿ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಅನಾಮಿಕ ವ್ಯಕ್ತಿಯೋರ್ವ ಧರ್ಮಸ್ಥಳದ ಸುತ್ತಮುತ್ತ ನೂರಾರು ಶವಗಳನ್ನು ಹೂತು ಹಾಕಿದ್ದೇನೆಂದು ಹೇಳಿದ್ದು, ಈ ಸಂಬಂಧ ಎಸ್​ಐಟಿ ಇಡೀ ಧರ್ಮಸ್ಥಳದಲ್ಲಿ ಅನಾಮಿಕ ವ್ಯಕ್ತಿ ತೋರಿಸಿದ ಸ್ಥಳಗಳನ್ನು ಅಗೆದು ಶೋಧ ನಡೆಸಿದೆ. ಆದ್ರೆ, ಒಂದರಲ್ಲಿ ಮಾತ್ರ ಮಾನವನ ಅಸ್ಥಿಪಂಜರ ಮಾತ್ರ ದೊರಕಿರುವುದು ಬಿಟ್ಟರೇ ಬೇರೆ ಯಾವುದೇ ಕುರುಹುಳು ಸಿಕ್ಕಿಲ್ಲ. ಆದ್ರೆ, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬೇರೆ ಬೇರೆ ರೀತಿಯ ಚರ್ಚೆಗಳು ನಡೆಯುತ್ತಿವೆ. ಈ ಸಂಬಂಧ ಇದೀಗ ಸ್ವತಃ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳದ ಬಗ್ಗೆ ಅನಗತ್ಯವಾಗಿ ಗೊಂದಲ ಮೂಡಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಈ ಮೂಲಕ ಧರ್ಮಸ್ಥಳಕ್ಕೆ ಕಳಂಕ ತರಲು ಕೆಲವರು ಯತ್ನಿಸುತ್ತಿದ್ದಾರೆ. ಎಸ್‌ಐಟಿಯಿಂದ ಸತ್ಯ ಹೊರ ತರುತ್ತೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳ ತನಿಖಾ ವರದಿಗಾಗಿ ನಾವು ಕಾಯುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿ ಏಜೆನ್ಸಿ ಪಿಟಿಐಗೆ ಸಂದರ್ಶನ ನೀಡಿರುವ ವೀರೇಂದ್ರ ಹೆಗ್ಗಡೆ, “ಎಸ್ಐಟಿ ತನಿಖೆಯನ್ನು ಸ್ವಾಗತಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂದು ನಡೆಸುತ್ತಿರುವ ಎಸ್‌ಐಟಿ ತನಿಖೆಗೆ ಸಂಪೂರ್ಣವಾಗಿ ಸಹಕರಿಸಲು ಸಿದ್ಧರಿದ್ದೇವೆ. ಸತ್ಯ ಎಲ್ಲರಿಗೂ ತಿಳಿಯಬೇಕು. ಈ ಸಂಬಂಧ ಆದಷ್ಟು ಬೇಗ ತನಿಖೆ ಪೂರ್ಣಗೊಳ್ಳಬೇಕು. ನಾವು ನಮ್ಮ ಎಲ್ಲಾ ರೀತಿಯ ಸಹಕಾರ ನೀಡುತ್ತಲೇ ಇದ್ದೇವೆ” ಎಂದು ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

“ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ಪ್ರಕರಣವನ್ನಿಟ್ಟುಕೊಂಡು ದೇವಸ್ಥಾನದ ಹೆಸರನ್ನು ಹಾಳು ಮಾಡಲು ಕೆಲವರು ಯತ್ನಿಸುತ್ತಿರುವುದು ಕಂಡುಬಂದಿದೆ. ಅವರೆಲ್ಲರ ಹೆಸರುಗಳು ಕೂಡ ಸಾರ್ವಜನಿಕ ವಲಯದಲ್ಲಿದೆ. ಎಸ್‌ಐಟಿ ಈ ಬಗ್ಗೆ ತನಿಖೆ ನಡೆಸುತ್ತಿದೆ. ಅದರ ಫಲಿತಾಂಶಕ್ಕಾಗಿ ನಾವೂ ಕೂಡ ಕಾಯುತ್ತಿದ್ದೇವೆ. ದೇವಸ್ಥಾನದ ಹೆಸರನ್ನು ಹಾಳು ಮಾಡುತ್ತಿರುವವರ ಬಗ್ಗೆಯೂ ತನಿಖೆ ನಡೆಸುವುದು ಎಸ್‌ಐಟಿಯ ಕಾರ್ಯ” ಎಂದು ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ ಪಿಟಿಐ ಸಂದರ್ಶನದಲ್ಲಿ ಆಗ್ರಹಿಸಿದ್ದಾರೆ.

“ಸೌಜನ್ಯ ಪ್ರಕರಣ ನಡೆದಾಗ ನಾವೇ ಪೊಲೀಸರಲ್ಲಿ ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಕೋರಿಕೊಂಡಿದ್ದೆವು. ಈ ಪ್ರಕರಣಕ್ಕೂ ಧರ್ಮಸ್ಥಳಕ್ಕೂ ಯಾವುದೇ ಸಂಬಂಧವಿಲ್ಲದಿದ್ದರೂ ನಮ್ಮ ಕುಟುಂಬದ ಸದಸ್ಯರ ಮೇಲೆಯೇ ಹಾಕಲಾಯಿತು. ಆರೋಪ ಕೇಳಿಬಂದ ಕುಟುಂಬದ ಸದಸ್ಯ ಆ ಸಂದರ್ಭದಲ್ಲಿ ನಮ್ಮ ದೇಶದಲ್ಲೇ ಇರಲಿಲ್ಲ. ಅವರು ವಿದ್ಯಾಭ್ಯಾಸದ ಉದ್ದೇಶಕ್ಕಾಗಿ ಅಮೇರಿಕಾದಲ್ಲಿದ್ದರು. ಸೌಜನ್ಯ ಪ್ರಕರಣದಲ್ಲಿ ನಮ್ಮ ಕುಟುಂಬ ಮೇಲಿನ ಆರೋಪಗಳೆಲ್ಲವೂ ಸುಳ್ಳು. ಆರೋಪಗಳೆಲ್ಲವೂ ಆಧಾರರಹಿತ ಮತ್ತು ನಮ್ಮ ವಿರುದ್ಧ ಅಪಪ್ರಚಾರದ ಭಾಗವಾಗಿದೆ” ಎಂದು ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಶಾಲಾ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಡಾಬರ್ ಚವನ್ ಪ್ರಾಶ್ ವಿತರಣೆ

Next Post

ಸುರತ್ಕಲ್ ವಫಾ ಹೆಸರಿನ ಲಕ್ಕಿ ಸ್ಕೀಮ್ ಸಾವಿರಾರು ಜನರಿಗೆ ಕೋಟಿ ಕೋಟಿ ಮೋಸ, ದುಬೈಗೆ ಹಾರಿದ ವಹಾಬ್, ಕಚೇರಿಗೆ ನುಗ್ಗಿದ ಗ್ರಾಹಕರು

Related Posts

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್
ಕರಾವಳಿ

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
61
ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ
ಕರಾವಳಿ

ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

June 25, 2026
32
Next Post
ಸುರತ್ಕಲ್ ವಫಾ ಹೆಸರಿನ ಲಕ್ಕಿ ಸ್ಕೀಮ್ ಸಾವಿರಾರು ಜನರಿಗೆ ಕೋಟಿ ಕೋಟಿ ಮೋಸ, ದುಬೈಗೆ ಹಾರಿದ ವಹಾಬ್, ಕಚೇರಿಗೆ ನುಗ್ಗಿದ ಗ್ರಾಹಕರು

ಸುರತ್ಕಲ್ ವಫಾ ಹೆಸರಿನ ಲಕ್ಕಿ ಸ್ಕೀಮ್ ಸಾವಿರಾರು ಜನರಿಗೆ ಕೋಟಿ ಕೋಟಿ ಮೋಸ, ದುಬೈಗೆ ಹಾರಿದ ವಹಾಬ್, ಕಚೇರಿಗೆ ನುಗ್ಗಿದ ಗ್ರಾಹಕರು

Discussion about this post

Recent News

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
32
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d