ಬಂಟ್ವಾಳ, ಸೆ.18 : ಪಣೋಲಿಬೈಲು ಕ್ಷೇತ್ರದ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕರಿಮಣಿ ಸರ ಕಿತ್ತು ಪರಾರಿಯಾಗಿದ್ದ ಇಬ್ಬರು ಕಳ್ಳರನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೆ.8 ರಂದು ಪಣೋಲಿಬೈಲು ಬಳಿ ರಸ್ತೆ ಬದಿ ನಡೆದುಕೊಂಡು ತೆರಳುತ್ತಿದ್ದ ವತ್ಸಲಾ (53) ಎಂಬವರ ಕುತ್ತಿಗೆಯಿಂದ ಬೈಕಿನಲ್ಲಿ ಬಂದ ಇಬ್ಬರು ಕರಿಮಣಿ ಸರ ಕಿತ್ತು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿದ ನಗರ ಠಾಣೆ ಪೊಲೀಸರು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ನಿವಾಸಿ ರೋಹಿತ್ (22) ಹಾಗೂ ಅದೇ ಗ್ರಾಮದ ಲೋಹಿತ್ ಪಿ.ಆರ್ (20) ಎಂಬವರನ್ನು ಬಂಧಿಸಿದ್ದಾರೆ.
ಆರೋಪಿಗಳ ಕೈಯಿಂದ ಸುಲಿಗೆ ಮಾಡಿದ ಮಾಂಗಲ್ಯ ಸರ ಮತ್ತು ಕೃತ್ಯಕ್ಕೆ ಬಳಸಿದ್ದ ಅಪಾಚಿ ಮೋಟಾರು ಸೈಕಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಸೊತ್ತಿನ ಮೌಲ್ಯ 1.35 ಲಕ್ಷ ಆಗಿರುತ್ತದೆ.
ಪ್ರಕರಣದ ಪತ್ತೆಯಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಋಷಿಕೇಷ್ ಭಗವಾನ್ ಸೋನಾವಣೆ ನಿರ್ದೇಶನದಂತೆ ದ.ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ಶಿವಕುಮಾರ್ ಗುಣಾರೆ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ವೆಲೈಂಟೈನ್ ಡಿಸೋಜಾ ನೇತ್ರತ್ವದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಟಿ.ಡಿ ನಾಗರಾಜ್, ಬಂಟ್ವಾಳ ನಗರ ಠಾಣಾ ಪಿ.ಎಸ್.ಐ ಅವಿನಾಶ್ ಗೌಡ, ಅಪರಾಧ ಪತ್ತೆ ವಿಭಾಗದ ಪಿ.ಎಸ್.ಐ ಕಲೈಮಾರ್, ಬಂಟ್ವಾಳ ಡಿ.ವೈ.ಎಸ್.ಪಿ ತಂಡದ ಉದಯ ರೈ, ಪ್ರವೀಣ್ ಎಂ, ಪ್ರಶಾಂತ್, ಇರ್ಷಾದ್, ಕುಮಾರ್ ಎಚ್.ಕೆ, ಹಾಗೂ ಬಂಟ್ವಾಳ ನಗರ ಠಾಣಾ ಸಿಬ್ಬಂದಿಗಳಾದ ಜಗನ್ನಾಥ ಶೆಟ್ಟಿ, ಕೃಷ್ಣ ಕುಲಾಲ್ ಮತ್ತು ಹೋಮ್ ಗಾರ್ಡ್ ಸಿಬ್ಬಂದಿ ಜಯಗಣೇಶ್ ಭಾಗವಹಿಸಿರುತ್ತಾರೆ.