• About us
  • Contact us
  • Disclaimer
Friday, February 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಿಷಬ್ ಶೆಟ್ಟಿ ಹೇಳಿದ ಹಾಗೆ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ – ರಿಷಬ್ ಸಮರ್ಥನೆ ತಳ್ಳಿಹಾಕಿದ ನಟ ಚೇತನ್

Coastal Times by Coastal Times
October 19, 2022
in ರಾಜ್ಯ, ಸಿನಿಮಾ
ರಿಷಬ್ ಶೆಟ್ಟಿ ಹೇಳಿದ ಹಾಗೆ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ – ರಿಷಬ್ ಸಮರ್ಥನೆ ತಳ್ಳಿಹಾಕಿದ ನಟ ಚೇತನ್
114
VIEWS
WhatsappTelegramShare on FacebookShare on Twitter

ರಿಷಬ್‌ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ದೇಶ-ವಿದೇಶಗಳಲ್ಲಿ ಭರ್ಜರಿ ಪ್ರದರ್ಶನ ಕಾಣ್ತಿದೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ ಎಂದು ಹೇಳಿದ್ದಾರೆ. ಕಾಂತಾರ ಕನ್ನಡ ಭಾಷೆಯಲ್ಲಿ ಮಾತ್ರವಲ್ಲದೇ ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲೂ ಯಶಸ್ವಿ ಪ್ರದರ್ಶನ ಕಾಣ್ತಿದ್ದು, ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಕೇವಲ ಸ್ಯಾಂಡಲ್ ವುಡ್‌ಗೆ ಮಾತ್ರ ಸೀಮಿತ ಆಗಿದ್ದ ರಿಷಬ್, `ಕಾಂತಾರ’ದ ಕಾಂತಿಯಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಹಾಗಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ, ನಿರ್ದೇಶಕನಿಗೆ `ಡಿವೈನ್ ಸ್ಟಾರ್’ ಎಂದು ಬಿರುದು ಕೊಟ್ಟಿದ್ದು, ಅದೇ ಹೆಸರಿನಿಂದ ಕರೆಯುತ್ತಿದ್ದಾರೆ.

ರಿಷಬ್ ಶೆಟ್ಟಿ ಹೇಳಿದ ಹಾಗೆ ಭೂತಕೋಲ, ದೈವಾರಾಧನೆ ಹಿಂದೂ ಸಂಸ್ಕೃತಿ ಎನ್ನುವುದು ನಿಜವಲ್ಲ ಎಂದಿರುವ ಚೇತನ್, ವೈದಿಕ ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇದೆ ಎಂದು ಹೇಳಿದ್ದಾರೆ. ಈ ಬಗ್ಗೆ ಚೇತನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ‘ನಮ್ಮ ಕನ್ನಡದ ಕಾಂತಾರವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ ನಕಲಿ/ಪರವರ ಬಹುಜನ ಸಂಪ್ರದಾಯಗಳು ವೈದಿಕ ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲ ನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ’ ಎಂದು ಹೇಳಿದ್ದಾರೆ.

Glad our Kannada film ‘Kantara’ is making national waves

Director Rishabh Shetty claims Bhootha Kola is ‘Hindu culture’

False

Our Pambada/Nalike/Parawa’s Bahujan traditions predate Vedic-Brahminical Hinduism

We ask that Moolnivasi cultures be shown w/ truth on & off screen

— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) October 18, 2022

ಕಾಂತಾರ ಸಿನಿಮಾದಲ್ಲಿ ಭೂತಕೋಲ, ದೈವಾರಾಧನೆಯೇ ಹೈಲೆಟ್. ಈ ಸಿನಿಮಾಗೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಚೇತನ್ ಕುಮಾರ್ ಹೇಳಿಕೆ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ನೆಟ್ಟಿಗರು ಚೇತನ್ ಕುಮಾರ್ ಅವರನ್ನು ತರಾಟೆ ತೆಗೆದುಕೊಂಡಿದ್ದಾರೆ. ಒಬ್ಬಬ್ಬರು ಒಂದೊಂದು ರೀತಿ ಕಾಮೆಂಟ್ ಮಾಡಿ ಆಕ್ರೋಶ ಹೊರಹಾಕುತ್ತಿದ್ದಾರೆ. ‘ಎಲ್ಲೋ ಪರದೇಶದಲ್ಲಿ ಹುಟ್ಟಿರೋ ಬೆರೆಕೆ ನೀನು. ನಿನಗೇನು ಗೊತ್ತು ಕರಾವಳಿ ಸಂಸ್ಕೃತಿ ಬಗ್ಗೆ.  ಅನೇಕರು ಚೇತನ್ ಅವರನ್ನು ತರಾಟೆ ತೆಗೆದುಕೊಂಡಿದ್ದು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ.

ಕಾಂತಾರ ಸಿನಿಮಾ ದೇಶಾದ್ಯಂತ ಜನಪ್ರಿಯತೆ ಗಳಿಸಿದೆ. ಸಿನಿಮಾವನ್ನು ಸ್ಟಾರ್ ಕಲಾವಿದರು ಕೂಡ ನೋಡಿದ್ದಾರೆ, ನೋಡಲು ಕಾಯುತ್ತಿದ್ದಾರೆ. ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ ಕೂಡ ಕಾಂತಾರ ಸಿನಿಮಾ ನೋಡುವುದಾಗಿ ಹೇಳಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಎರಡು ವರ್ಷಗಳ ಹಿಂದೆ ಕೇರಳದ ಜೈಲಿನಿಂದ ತಪ್ಪಿಸಿಕೊಂಡ ಅತ್ಯಾಚಾರ, ಕೊಲೆ ಆರೋಪಿ ಉಡುಪಿಯಲ್ಲಿ ಬಂಧನ

Next Post

ಕಂಡಕ್ಟರ್‌ನಿಂದ ‘ಕಾಂತಾರ’ವರೆಗೆ… ಮೈಮೇಲೆ ದೈವ ಆಹ್ವಾನವಾಗುವ ಪಾತ್ರದಲ್ಲಿ ಮಿಂಚಿದ ನವೀನ್ ಬೋಂದೆಲ್

Related Posts

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
ಸಿನಿಮಾ

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

February 22, 2026
9
ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
70
Next Post
ಕಂಡಕ್ಟರ್‌ನಿಂದ ‘ಕಾಂತಾರ’ವರೆಗೆ… ಮೈಮೇಲೆ ದೈವ ಆಹ್ವಾನವಾಗುವ ಪಾತ್ರದಲ್ಲಿ ಮಿಂಚಿದ ನವೀನ್ ಬೋಂದೆಲ್

ಕಂಡಕ್ಟರ್‌ನಿಂದ 'ಕಾಂತಾರ'ವರೆಗೆ... ಮೈಮೇಲೆ ದೈವ ಆಹ್ವಾನವಾಗುವ ಪಾತ್ರದಲ್ಲಿ ಮಿಂಚಿದ ನವೀನ್ ಬೋಂದೆಲ್

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
57
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d