• About us
  • Contact us
  • Disclaimer
Friday, February 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಂಡಕ್ಟರ್‌ನಿಂದ ‘ಕಾಂತಾರ’ವರೆಗೆ… ಮೈಮೇಲೆ ದೈವ ಆಹ್ವಾನವಾಗುವ ಪಾತ್ರದಲ್ಲಿ ಮಿಂಚಿದ ನವೀನ್ ಬೋಂದೆಲ್

Coastal Times by Coastal Times
October 19, 2022
in ಸಿನಿಮಾ
ಕಂಡಕ್ಟರ್‌ನಿಂದ ‘ಕಾಂತಾರ’ವರೆಗೆ… ಮೈಮೇಲೆ ದೈವ ಆಹ್ವಾನವಾಗುವ ಪಾತ್ರದಲ್ಲಿ ಮಿಂಚಿದ ನವೀನ್ ಬೋಂದೆಲ್
124
VIEWS
WhatsappTelegramShare on FacebookShare on Twitter

ಮಂಗಳೂರು : ಭಾರತೀಯ ಚಿತ್ರರಂಗದ ದಶದಿಕ್ಕುಗಳಿಂದಲೂ ಕೇಳಿ ಬರುತ್ತಿರುವ ಹೆಸರು ಒಂದೇ, ಅದು ಕಾಂತಾರ. ನಟ ರಿಷಬ್ ಶೆಟ್ಟಿ ನಿರ್ದೇಶಿಸಿ, ಅಭಿನಯಿಸಿರುವ ಈ ಸಿನಿಮಾ ಇದೀಗ ದೇಶ-ವಿದೇಶಗಳಲ್ಲಿ ಖ್ಯಾತಿ ಪಡೆಯುತ್ತಿದೆ. ಕನ್ನಡ ಸೇರಿದಂತೆ ಬಹು ಭಾಷೆಗಳಲ್ಲಿಯೂ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ. ಸಿನಿಮಾದ ಪ್ರತೀ ಪಾತ್ರಗಳು ಮನೆ ಮಾತಾಗಿವೆ. ಮೈ ಮೇಲೆ ದೈವ ಆಹ್ವಾಹನ ಕಾಂತಾರ ಸಿನಿಮಾದ ಪ್ರತಿ ಪಾತ್ರ ಕೂಡಾ ನೆನಪಿನಲ್ಲಿಟ್ಟುಕೊಳ್ಳುವಂಥದಾಗಿದೆ ಸಣ್ಣ ಸಣ್ಣ ಪಾತ್ರಗಳನ್ನೂ ಸಹ ಮರೆಯದ ರೀತಿಯಲ್ಲಿ ಚಿತ್ರದಲ್ಲಿ ಅನಾವರಣಗೊಳಿಸಲಾಗಿದೆ. ಇದರಲ್ಲಿ ನಟ ನವೀನ್ ಬೋಂದೆಲ್ ಅವರ ಪಾತ್ರವೂ ಒಂದು. ಈ ಸಿನಿಮಾದ ಆರಂಭದ ಸೀನ್​ನಲ್ಲಿ ಹಿಂದಿನ ಕಥೆ ಹೇಳುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ದೈವಾಹ್ವಾನವಾಗುತ್ತದೆ. ಆ ಪಾತ್ರವನ್ನು ನವೀನ್ ಬೋಂದೆಲ್ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ನಿಜವಾಗಿಯು ಮೈ ಮೇಲೆ ದೈವ ಬಂದವರಂತೆ ಅಭಿನಯಿಸಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಇವರ ಅಭಿನಯಕ್ಕೆ ಎಲ್ಲೆಡೆ ಜನ ಮೆಚ್ಚುಗೆ ವ್ಯಕ್ತವಾಗಿದೆ.

ನವೀನ್ ಬೋಂದೆಲ್ ಅವರು ನಗರದ ಸಿಟಿ ಬಸ್ ಕಂಡಕ್ಟರ್ ಆಗಿ ವೃತ್ತಿಜೀವನ ಆರಂಭಿಸಿದವರು. ಇದರೊಂದಿಗೆ ರಂಗಭೂಮಿಯಲ್ಲಿಯೂ ಸೇವೆ ಸಲ್ಲಿಸುತ್ತಿದ್ದರು. ಕಂಡಕ್ಟರ್ ಕೆಲಸ ಬಿಟ್ಟು ಮಸಾಲಾ ಬ್ಯುಸಿನೆಸ್ ಆರಂಭಿಸಿದ್ದರು. ಆ ವ್ಯವಹಾರವೂ ಕೂಡ ಕೈ ಹಿಡಿಯಲಿಲ್ಲ. ಇದೀಗ ಪೂರ್ಣ ಪ್ರಮಾಣದಲ್ಲಿ ರಂಗ ಕಲಾವಿದರಾಗಿ ಕಲಾ ಸೇವೆ ಮಾಡುತ್ತಿದ್ದಾರೆ. ಪ್ರಸ್ತುತ ತುಳುವೆರ್ ತುಡರ್ ಎಂಬ ಕಲಾತಂಡದಲ್ಲಿ ನೆಗೆಟಿವ್ ಪಾತ್ರ ಮಾಡುತ್ತಿದ್ದಾರೆ.

ದೈವ ದರ್ಶನದ ಪಾತ್ರವನ್ನು ಇವರಿಗೆ ನಟ ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾದಲ್ಲಿ ಪಾತ್ರ ಮಾಡುವ ಕುರಿತ ಮಾಹಿತಿ ಸಿಕ್ಕಿದ್ದು ದೈವ ಪಾತ್ರಿಯೊಬ್ಬರಿಂದ. ಈ ಸಿನಿಮಾದ ಆರಂಭದಲ್ಲಿ ದೈವ ದರ್ಶನದ ಪಾತ್ರ ಬರುತ್ತದೆ. ಈ ಪಾತ್ರಕ್ಕೆ ನವೀನ್ ಬೋಂದೆಲ್ ಅವರನ್ನು ಆಯ್ಕೆ ಮಾಡಲಾಗುತ್ತದೆ.ಕಾಂತಾರ ಚಿತ್ರೀಕರಣದ ವೇಳೆ ನವೀನ್ ಬೋಂದೆಲ್ ಅವರ ಶೂಟಿಂಗ್ ನಡೆಯುವ ಸಂದರ್ಭದಲ್ಲಿ ಅವರು ತಮ್ಮ ಕಣ್ಣನ್ನು ಒಮ್ಮೆ ತೆರೆದು ಮುಚ್ಚಿದರಂತೆ. ಕೂಡಲೇ ರಿಷಬ್ ಶೆಟ್ಟಿ ಅವರು ಕಣ್ಣನ್ನು ಪೂರ್ತಿ ತೆರೆದಿಟ್ಟೇ ಪಾತ್ರ ಮಾಡಲು ಸಾಧ್ಯವೇ ಎಂದು ಕೇಳಿದ್ದಾರೆ. ಅದಕ್ಕೆ ನವೀನ್ ಬೋಂದೆಲ್ ಒಪ್ಪಿ ಪ್ರಯತ್ನ ಪಟ್ಟಿದ್ದಾರೆ. ಇದಕ್ಕಾಗಿ ಸಿನಿಮಾ ಶೂಟಿಂಗ್​ನಲ್ಲಿ ಬೀಳಿಸುತ್ತಿದ್ದ ಮಳೆ ಹನಿಯನ್ನು ಸ್ವಲ್ಪ ಅಂತರ ಇಟ್ಟು ಮಾಡಲಾಗಿತ್ತು‌. ನವೀನ್ ಬೋಂದೆಲ್ ಕಣ್ಣು ತೆರೆದಿಟ್ಟು ಮಾಡಿದ ದೈವ ದರ್ಶನ ಪಾತ್ರ ಇದೀಗ ಜನ ಮೆಚ್ಚುಗೆ ಗಳಿಸಿದೆ.

ಸಿನಿಮಾದಲ್ಲಿ ನವೀನ್ ಬೋಂದೆಲ್ ಅವರಿಗೆ ಇದ್ದದ್ದು ಕೇವಲ 2 ನಿಮಿಷಗಳ ಅವಕಾಶ. ಆದರೆ ಅಷ್ಟು ಸಣ್ಣ ಅವಧಿಯಲ್ಲಿನ ಅವರ ಪಾತ್ರ ಎಲ್ಲೆ ಮೆಚ್ಚುಗೆ ಗಳಿಸಿದೆ. ಅವರು ಮಾಡಿದ ಅದ್ಭುತ ನಟನೆ, ಅವರ ಖ್ಯಾತಿಯನ್ನು ಹೆಚ್ಚಿಸಿದೆ. ಈ ಸೀನ್​ ಅನ್ನು ಸಿನಿಮಾದ ಟ್ರೈಲರ್​ನಲ್ಲಿಯೂ ಹಾಕಲಾಗಿತ್ತು ಎಂಬುದು ಮತ್ತೊಂದು ವಿಶೇಷ. ಸಣ್ಣ ಪಾತ್ರದಲ್ಲಿ ಅದ್ಬುತವಾಗಿ ನಟಿಸಿದ ನವೀನ್ ಬೋಂದೆಲ್ ಅವರು ಇಂದು ಬಹಳ ಖ್ಯಾತಿ ಗಳಿಸಿದ್ದಾರೆ. ಹೊಂಬಾಳೆ ಬ್ಯಾನರ್​ನಿಂದ ಇನ್ನೊಂದು ಸಿನಿಮಾಗೂ ಅವಕಾಶ ಪಡೆದುಕೊಂಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ರಿಷಬ್ ಶೆಟ್ಟಿ ಹೇಳಿದ ಹಾಗೆ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ – ರಿಷಬ್ ಸಮರ್ಥನೆ ತಳ್ಳಿಹಾಕಿದ ನಟ ಚೇತನ್

Next Post

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಬಾಲಕಿ ಕಡೆಗೂ ಗೋವಾದ ಪಣಜಿಯಲ್ಲಿ ಪತ್ತೆ

Related Posts

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
ಸಿನಿಮಾ

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

February 22, 2026
9
ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!
ಸಿನಿಮಾ

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

February 3, 2026
39
Next Post
ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಬಾಲಕಿ ಕಡೆಗೂ ಗೋವಾದ ಪಣಜಿಯಲ್ಲಿ ಪತ್ತೆ

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಬಾಲಕಿ ಕಡೆಗೂ ಗೋವಾದ ಪಣಜಿಯಲ್ಲಿ ಪತ್ತೆ

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
57
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d