ಮುಂಬೈ: ಬಾಲಿವುಡ್ ನಟ, ಜಾಕಿ ಶ್ರಾಫ್ ಅವರ ಪುತ್ರ ಟೈಗರ್ ಶ್ರಾಫ್ ಫುಟ್ಬಾಲ್ ಆಡಿ ಮರಳುತ್ತಿದ್ದ ವೇಳೆ ದುಷ್ಕರ್ಮಿಗಳು ಅವರ ಕಾರಿನ ಮೇಲೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಭಾನುವಾರ ಗುಂಡಿನ ದಾಳಿ ನಡೆಸಿದ್ದಾರೆ. ಶ್ರಾಫ್ ಅವರ ಕಾರು ಚಾಲಕ ಮತ್ತು ನಟನ ಜೊತೆಗಿದ್ದ ವ್ಯಕ್ತಿ ಗಾಯಗೊಂಡಿದ್ದಾರೆ. ಆದ್ರೆ ಟೈಗರ್ ಶ್ರಾಫ್ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅದೃಷ್ಟವಶಾತ್ ಟೈಗರ್ ಶ್ರಾಫ್ ಅವರಿಗೆ ಯಾವುದೇ ರೀತಿಯ ಗಾಯಗಳಾಗಿಲ್ಲವೆಂದು ಮುಂಬೈ ಡಿಸಿಪಿ ತಿಳಿಸಿದ್ದಾರೆ.
ಜುಹು ಪ್ರದೇಶದಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಈ ಕುರಿತು ತನಿಖೆ ಪ್ರಗತಿಯಲ್ಲಿದೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ. ಟೈಗರ್ ಶ್ರಾಫ್ ಹಸಿರು ಬಣ್ಣದ ಟಿ-ಶರ್ಟ್ ಧರಿಸಿದ್ದಾರೆ. ಅವರ ಬಲಗೈಗೆ ಬ್ಯಾಂಡೇಜ್ ಹಾಕಲಾಗಿದೆ. ಮುಖವನ್ನು ಕ್ಯಾಮೆರಾಗಳ ಕಣ್ಣಿಗೆ ಸಿಗದಂತೆ ಮರೆಮಾಚಲು ಅವರು ಪ್ರಯತ್ನಿಸಿದ್ದಾರೆ. ಪೋಲಿಸರ ಭದ್ರತೆಯಲ್ಲಿರುವ ಅವರು, ಫೋನ್ನಲ್ಲಿ ಮಾತನಾಡುತ್ತಾ ತಮ್ಮ ಮುಖವನ್ನು ಮರೆಮಾಡಿಕೊಂಡಿದ್ದಾರೆ. ಅವರ ಕೈಗೆ ಗುಂಡೇಟು ತಗುಲಿರಬಹುದು ಎಂದು ಊಹಿಸಲಾಗಿದೆ.
ಈ ಭೀಕರ ದಾಳಿಯಲ್ಲಿ ನಟನ ಚಾಲಕ ಮತ್ತು ಆಟೋ ಚಾಲಕ ಗಾಯಗೊಂಡಿದ್ದಾರೆ. ದುಷ್ಕರ್ಮಿಗಳು ಬೈಕ್ನಲ್ಲಿ ಬಂದು ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪೊಲೀಸರು ಈ ಬಗ್ಗೆ ತೀವ್ರ ತನಿಖೆ ಆರಂಭಿಸಿದ್ದಾರೆ.
ಈ ಘಟನೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ ಎಂದು ಹೇಳಲಾಗಿದೆ. ಸಲ್ಮಾನ್ ಖಾನ್ ಜೊತೆ ಕೆಲಸ ಮಾಡುವವರ ಮೇಲೆ ದಾಳಿ ನಡೆಸಲಾಗುತ್ತಿದೆ ಎನ್ನಲಾಗಿದೆ. ಬಾಲಿವುಡ್ ಸೆಲೆಬ್ರಿಟಿಗಳ ಮೇಲೆ ನಡೆಯುತ್ತಿರುವ ನಿರಂತರ ದಾಳಿಗಳ ಬಗ್ಗೆ ಆಲ್ ಇಂಡಿಯನ್ ಸಿನಿ ವರ್ಕರ್ಸ್ ಅಸೋಸಿಯೇಷನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಏಕನಾಥ್ ಶಿಂಧೆ ಭೇಟಿ: ಬಾಲಿವುಡ್ ನಟ ಟೈಗರ್ ಶ್ರಾಫ್ ನಿವಾಸಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಭೇಟಿ ನೀಡಿ, ನಡೆದ ಘಟನೆಯ ಕುರಿತು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. ‘ನಟನ ಕಾರಿನ ಮೇಲೆ ಐದು ಸುತ್ತು ಗುಂಡು ಹಾರಿಸಲಾಗಿದ್ದು, ಅದೃಷ್ಟವಶಾತ್ ಟೈಗರ್ ಶ್ರಾಫ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಈ ಘಟನೆಯಲ್ಲಿ ಬುಲೆಟ್ ಹಾಗೂ ಗಾಜಿನ ತುಣುಕುಗಳು ತಗುಲಿ ಅವರ ಕಾರು ಚಾಲಕರ ಎಡಗೈಗೆ ಗಾಯವಾಗಿದೆ. ಈ ಭೀಕರ ಘಟನೆಯ ಬಳಿಕ ನಟ ಟೈಗರ್ ಶ್ರಾಫ್ ಹಾಗೂ ಅವರ ತಾಯಿ ತೀವ್ರ ಆಘಾತಕ್ಕೊಳಗಾಗಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post