ಮಂಗಳೂರು: ಕಣಜದ ಹುಳುಗಳ ದಾಳಿಯಿಂದ ವಿದ್ಯಾರ್ಥಿಗಳನ್ನು ರಕ್ಷಿಸಲು ಬಂದಿದ್ದ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ತನ್ನ ಪ್ರಾಣವನ್ನೇ ಅರ್ಪಿಸಿದ್ದಾರೆ.
ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್(35) ಮೃತ ದುರ್ದೈವಿ. ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿ ಸಂತೋಷ್ ಕರ್ತವ್ಯ ನಿರ್ವಹಿಸುತ್ತಿದ್ದರು.
ಸಂತೋಷ್ ಗುರುವಾರ ಸಂಜೆ ಕಿನ್ನಿಗೋಳಿ ಸಮೀಪದ ಶ್ರೀರಾಮ ಮಂದಿರದ ಬಳಿ ಆಟೋದಲ್ಲಿ ಹೋಗುತ್ತಿದ್ದಾಗ ಕಣಜದ ಹುಳುಗಳ ದಾಳಿಯಿಂದಾಗಿ ಶಾಲೆಯ ಮಕ್ಕಳು ಗಂಭೀರ ಸ್ಥಿತಿಯಲ್ಲಿದ್ದರು. ಇದನ್ನು ಕಂಡ ಸಂತೋಷ್ ಮಕ್ಕಳನ್ನು ಕಣಜದ ಹುಳುಗಳಿಂದ ರಕ್ಷಿಸಿ ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಕಣಜದ ಹುಳುಗಳ ಕಡಿತಕ್ಕೆ ಒಳಗಾಗಿದ್ದ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ಸಂತೋಷ್ ದಾಖಲಿಸಿದ್ದರು. ತಾನು ಕೂಡ ಕಣಜದ ಹುಳುಗಳ ಕಡಿತಕ್ಕೆ ಒಳಗಾಗಿದ್ದರೂ ಚಿಕಿತ್ಸೆ ಪಡೆಯದೆ ಸಂತೋಷ್ ಮನೆಗೆ ತೆರಳಿದ್ದರು. ಮನೆಯಲ್ಲಿ ರಾತ್ರಿ ಸುಮಾರು 9 ಗಂಟೆಗೆ ಕುರ್ಚಿಯಲ್ಲಿ ಕುಳಿತ್ತಿದ್ದ ಅವರು ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿದ್ದಾರೆ.
Discussion about this post