ಮಂಗಳೂರು: ಮಂಗಳೂರಿನ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಶೌರ್ಯ ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಶನಿವಾರ ಲೋಕಾರ್ಪಣೆ ಮಾಡಿದರು. ದ.ಕ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಸಹಭಾಗಿತ್ವದಲ್ಲಿ ಅನಾವರಣ ಮಾಡಲಾಯಿತು.
ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ಮಹಾ ಸ್ವಾಮೀಜಿ, ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿ, ಸಚಿವರಾದ ಎಸ್.ಅಂಗಾರ, ಅಶ್ವಥ್ ನಾರಾಯಣ್, ಜಿಲ್ಲೆಯ ಶಾಸಕರು ಹಾಜರಿದ್ದರು.

ಪ್ರತಿಮೆ ಲೋಕಾರ್ಪಣೆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಮಯ್ಯ ಗೌಡರು ಶ್ರೇಷ್ಠ ಕ್ರಾಂತಿಕಾರಿ ಪುರುಷ. ರಾಮಯ್ಯ ಗೌಡರಂತಹ ನಿರಂತರ ಹೋರಾಟದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದ್ದು, 1837 ರಲ್ಲಿಯೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಮರವೀರ ಎಂದರು. ‘ಕೆದಂಬಾಡಿ ರಾಮಯ್ಯಗೌಡರು ಸಂಘಟನಾ ಚತುರರಾಗಿದ್ದರು. ರೈತ ಹೋರಾಟಗಾರರ ಪಡೆಯನ್ನು ಕಟ್ಟಿಕೊಂಡು ಬ್ರಿಟಿಷರ ವಿರುದ್ಧ ಸಮರ ಸಾರಿದ್ದರು. ಅವರ ಪ್ರತಿಮೆ ಅನಾವರಣದ ವೇಳೆ ನನಗೆ ಇಂತಹ ಮಹಾನ್ ಸೇನಾನಿಗಳನ್ನು ಸ್ಮರಿಸಲು ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಸ್ಥಾಪಿಸುವ ಪ್ರೇರಣೆ ದೊರೆತಿದೆ’ ಎಂದರು.

ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾದ ಡಿ.ವಿ. ಸದಾನಂದ ಗೌಡ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಜೀವ ಮಠಂದೂರು, ಯಿ.ಟಿ. ಖಾದರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಇತರ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.
Discover more from Coastal Times Kannada
Subscribe to get the latest posts sent to your email.








Discussion about this post